ಕೊಪ್ಪಳ ಗ್ಯಾಂಗ್‌ರೇಪ್ ಪ್ರಕರಣ – ಮೂವರು ಅತ್ಯಾಚಾರ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ASHWASURYA/SHIVAMOGGA
ಅಶ್ವಸೂರ್ಯ/ಕೊಪ್ಪಳ: ವಿದೇಶಿ ಮಹಿಳೆ ಮತ್ತು ಸ್ಥಳೀಯ ಹೋಮ್‌ಸ್ಟೇ ಮಾಲೀಕಳ ಮೇಲೆ ಗ್ಯಾಂಗರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಿ ಕೊಪ್ಪಳ (Koppal) ಗಂಗಾವತಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಆರೋಪಿಗಳಾದ ಚೇತನಸಾಯಿ,ಶರಣಬಸವ, ಮಲ್ಲೇಶ್‌ನನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಗಂಗಾವತಿ ಗ್ರಾಮೀಣ ಠಾಣೆಯ ಪೊಲೀಸರು ಸೋಮವಾರ ರಾತ್ರಿ ಮೂವರು ಆರೋಪಿಗಳನ್ನು ನ್ಯಾಯಾಲಯ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಮೂವರು ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ. ಸದ್ಯ ಮೂವರು ಆರೋಪಿಗಳನ್ನು ಪೊಲೀಸರು ಕೊಪ್ಪಳ ಜೈಲಿನಲ್ಲಿಟ್ಟಿದ್ದಾರೆ.
ಪ್ರಕರಣದ ಹಿನ್ನಲೆ.?
ಕೊಪ್ಪಾಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಣಾಪೂರ ಕೆರೆ ಸಮೀಪದ ತುಂಗಭದ್ರಾ ಎಡದಂಡೆ ಕಾಲುವೆ ಪಕ್ಕದಲ್ಲಿ ಕುಳಿತುಕೊಂಡು ನಕ್ಷತ್ರ ವೀಕ್ಷಿಸುತ್ತಿದ್ದ 5 ಜನ ವಿದೇಶಿ ಪ್ರವಾಸಿಗರ ಮೇಲೆ ಗುರುವಾರ ಮೂವರು ದುಷ್ಕರ್ಮಿಗಳು 100 ರೂಪಾಯಿ ಕೇಳಿದ್ದರಂತೆ ಕೊಡದಿದ್ದ ಕಾರಣಕ್ಕೆ ಅಲ್ಲಿದ್ದವರ ಮೇಲೆ ಹಲ್ಲೆ ನಡೆಸಿ. ಮೂವರು ಪುರುಷರನ್ನು ಕೆರೆಗೆ ತಳ್ಳಿದ್ದರು.
ಇಬ್ಬರು ಮಹಿಳಾ ಪ್ರವಾಸಿಗರ ಮೇಲೆ ಅತ್ಯಾಚಾರ ವೆಸಗಿದ್ದರು. ಕೆರೆಗೆ ತಳ್ಳಿದ ಮೂವರಲ್ಲಿ ಇಬ್ಬರು ಈಜಿ ದಡ ಸೇರಿದರೆ ಇನ್ನೊಬ್ಬ ಮಾತ್ರ ಈಜಲಾಗದೆ ನೀರಿನಲ್ಲಿ ಮುಳುಗಿ ಸಾವಿಗೆ ಶರಣಾಗಿದ್ದ.ಅ ನಂತರದಲ್ಲಿ ದೂರು ದಾಖಲಿಸಿಕೊಂಡ ಪೊಲೀಸರು ಅತ್ಯಾಚಾರ ಆರೋಪಿಗಳನ್ನು ಬಂಧಿಸಿದ್ದರು.