ಹಾವೇರಿಯಲ್ಲಿ ಹಿಂದೂ ಯುವತಿ ಹತ್ಯೆ.! ಪೊಲೀಸರಿಂದ ಶಂಕಿತ ಆರೋಪಿ ನಯಾಜ್ ಬಂಧನ.!
ASHWASURYA/SHIVAMOGGA
news.ashwasurya.in
ಅಶ್ವಸೂರ್ಯ/ಹಾವೇರಿ: ರಾಣೇಬೆನ್ನೂರಿನ ಆಸ್ಪತ್ರೆ ಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳ ಹತ್ಯೆಯಾಗಿದ್ದು ಈ ಹತ್ಯೆ ಪ್ರಕರಣಕ್ಕೆ ಸಂಭಂದಿಸಿದಂ ಮೂವರು ಮೇಲೆ ಮೃತಳ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.? ಪ್ರಕರಣ ಸಂಬಂಧ ಓರ್ವನನ್ನು ಬಂಧಿಸಲಾಗಿದ್ದು, ಬಂಧಿತನನ್ನು ನಯಾಜ್ ಎಂದು ಗುರುತಿಸಲಾಗಿದೆ.
ಹತ್ಯೆಯಾದ ಯುವತಿಯನ್ನು ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ರಮೇಶ್ ಬ್ಯಾಡಗಿ (22) ಎಂದು ಗುರುತಿಸಲಾಗಿದೆ. ಮಾ.6 ರಂದು ಯುವತಿಯ ಮೃತದೇಹ ರಾಣೇಬೆನ್ನೂರು ತಾಲೂಕಿನ ಪತ್ತೇಪುರ ಗ್ರಾಮದ ತುಂಗಭದ್ರಾ ನದಿಯ ಬಳಿ ಪತ್ತೆಯಾಗಿತ್ತು.! ಮೊದಲು ಅಪರಿಚಿತ ಯುವತಿಯ ಶವ ಎಂದು ಹಲಗೇರಿ ಪೊಲೀಸರು ಘೋಷಿಸಿದ್ದರು. ಬಳಿಕ ವಾರಸುದಾರರು ಯಾರೂ ಇಲ್ಲದ ಹಿನ್ನೆಲೆ, ಮರಣೋತ್ತರ ಪರೀಕ್ಷೆ ನಡೆಸಿ ಕಾನೂನು ಪ್ರಕಾರ ಸ್ವಾತಿ ಶವವನ್ನು ಹೂತು ಹಾಕಲಾಗಿತ್ತು.
ಮರಣೋತ್ತರ ಪರೀಕ್ಷೆ ವೇಳೆ ಸ್ವಾತಿ ಹತ್ಯೆಯಾಗಿರುವುದು ದೃಢಪಟ್ಟಿದೆ.ಬಳಿಕ ತನಿಖೆ ತೀವ್ರಗೊಳಿಸಿದ ಹಲಗೇರಿ ಪೊಲೀಸರು, ಮಾ.3 ರಂದು ಕಾಣೆಯಾಗಿದ್ದ ಯುವತಿಯ ಗುರುತನ್ನು ಪತ್ತೆಹಚ್ಚಿದ್ದರು.ಇನ್ನೂ ಸ್ವಾತಿ ಪೋಷಕರು, ಹಿರೇಕೇರೂರು ಪೊಲೀಸ್ ಠಾಣೆಯಲ್ಲಿ ಆಕೆ ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದರು ಎಂದು ತಿಳಿದು ಬಂದಿದೆ.
ಸ್ವಾತಿ ತಂದೆ ಮೃತಪಟ್ಟಿದ್ದು, ತಾಯಿ ಜೊತೆ ವಾಸವಿದ್ದಳು.ತಾಯಿಯ ಮುದ್ದಿನ ಮಗಳಾಗಿದ್ದ ಸ್ವಾತಿ ಮನೆಯ ಜವಬ್ದಾರಿ ಹೊತ್ತ ಹುಡುಗಿಯಾಗಿದ್ದಳು.
ಈಕೆಯ ಕೊಲೆಯ ಹಿಂದೆ ಮೂವರ ಮೇಲೆ ಶಂಕೆ ವ್ಯಕ್ತವಾಗಿದ್ದು, ತನಿಖೆಯನ್ನು ಹಲಗೇರಿ ಪೊಲೀಸರು ತೀವ್ರಗೊಳಿಸಿದ್ದಾರೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ಜಸ್ಟೀಸ್ ಫಾರ್ ಸ್ವಾತಿ ಅಭಿಯಾನ ಆರಂಭಿಸಿದ್ದು, ಹಂತಕರನ್ನು ಪತ್ತೆ ಹಚ್ಚಿ, ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.ಈ ಹತ್ಯೆಗೆ ಕಾರಣವೇನು.? ಸ್ವಾತಿ ಅನ್ಯಕೋಮಿನ ಹುಡುಗನನ್ನು ಪ್ರೀತಿಸುತ್ತಿದ್ದಳಾ.? ಪ್ರೀತಿಸಿದರು ಸ್ವಾತಿಯನ್ನು ಹತ್ಯೆಮಾಡವ ಉದ್ದೇಶವಾದರು ಏನು.?ಎಲ್ಲವೂ ಪೊಲೀಸರ ತನಿಖೆಯಿಂದ ಬಯಲಾಗಬೇಕುದೆ….