ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬದ್ಧ: ಸಚಿವ ಮಧು ಬಂಗಾರಪ್ಪ
ASHWASURYA/SHIVAMOGGA
news.ashwasurya.in
ಅಶ್ವಸೂರ್ಯ/ಬೆಂಗಳೂರು: ಇಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರು ವಿಕಾಸಸೌಧದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಅಲ್ಲಿನ “ಶೈಕ್ಷಣಿಕ ಅಭಿವೃದ್ಧಿ ವಿಷಯಗಳ ಕುರಿತು” ಸಚಿವರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಸಕರು, ವಿಧಾನಪರಿಷತ್ ಸದಸ್ಯರೊಂದಿಗೆ ತಮ್ಮ ಕ್ಷೇತ್ರದಲ್ಲಿನ ಸಮಸ್ಯೆಗಳು ಹಾಗೂ ಅಭಿವೃದ್ಧಿ ವಿಷಯಗಳ ಕುರಿತು ದೀರ್ಘಕಾಲ ಚರ್ಚಿಸಲಾಯಿತು.
ಅಲ್ಲಿನ ಪ್ರಮುಖ ಬೇಡಿಕೆಗಳಾದ ಶಿಕ್ಷಕರ ಕೊರತೆ ನೀಗಿಸುವುದು, ನೂತನ ಶಾಲಾ ಕೊಠಡಿಗಳ ಮಂಜೂರು, ಶಿಕ್ಷಕರಿಗೆ ತರಬೇತಿ, ಶೌಚಾಲಯ ಸ್ಥಾಪನೆ, ಕೊಠಡಿ ದುರಸ್ತಿ, ನೂತನ ಕೆ.ಪಿ.ಎಸ್ ಶಾಲೆಗಳನ್ನು ಮಂಜೂರು, ನೂತನ ತಾಲೂಕುಗಳಿಗೆ ಬಿ.ಇ.ಒ ಕಚೇರಿಗಳನ್ನು ಆರಂಭಿಸುವುದು ಹಾಗೂ ಮಕ್ಕಳ ಹಾಜರಾತಿ ಹೆಚ್ಚಳ ಸೇರಿದಂತೆ ಇನ್ನೂ ಅನೇಕ ವಿಚಾರಗಳ ಕುರಿತು ಮಾಹಿತಿ ಪಡೆಯಲಾಯಿತು. ಶೀಘ್ರವೇ ಆಗಬೇಕಿರುವ ಎಲ್ಲಾ ಕಾರ್ಯಗಳ ಬಗ್ಗೆ ಕೂಡಲೇ ಗಮನಹರಿಸಂತೆ ಅಧಿಕಾರಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೂಚಿಸಿದರು.
ಈಗಾಗಲೇ ನಮ್ಮ ಸರ್ಕಾರವು ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿವಹಿಸಿದೆ. ಜೊತೆಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಅಭಿವೃದ್ಧಿಗೆ ಬದ್ಧವಾಗಿದೆ. ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಆಗಮಿಸಿ, ಅಲ್ಲಿನ ಸಮಸ್ಯೆಗಳ ನಿವಾರಣೆಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನೊಳಗೊಂಡ ಸಭೆ ನಡೆಸಿಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಸಚಿವ ಸಂಪುಟ ಸದಸ್ಯರಾದ ಶ್ರೀ ಡಾ. ಶರಣ ಪ್ರಕಾಶ್ ಪಾಟೀಲ್, ಶ್ರೀ ರಹೀಂಖಾನ್, ಶ್ರೀ ಶರಣಬಸಪ್ಪಗೌಡ ದರ್ಶನಾಪುರ, ಕೆ.ಕೆ.ಆರ್.ಡಿ.ಬಿ ಅಧ್ಯಕ್ಷರಾದ ಶ್ರೀ ಅಜಯ್ ಸಿಂಗ್, ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರಶ್ಮಿ ಮಹೇಶ್, ಆಯುಕ್ತರಾದ ಶ್ರೀ ತ್ರಿಲೋಕ ಚಂದ್ರ ಸೇರಿದಂತೆ ಈ ಭಾಗದ ಶಾಸಕರುಗಳು ಹಾಗೂ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.