ರಾಜ್ಯದಾದ್ಯಂತ ಇಂದಿನಿಂದ ಎಸ್.ಎಸ್.ಎಲ್.ಸಿ, ಪರೀಕ್ಷೆ ಶುಭಹಾರೈಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ.
ASHWASURYA/SHIVAMOGGA
news.ashwasurya.in
ಅಶ್ವಸೂರ್ಯ/ಬೆಂಗಳೂರು: ರಾಜ್ಯದಾದ್ಯಂತ ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಿದ್ದು, ಬೆಂಗಳೂರು ಉತ್ತರ ಜಿಲ್ಲೆಯ ಮಲ್ಲೇಶ್ವರಂನ ಕರ್ನಾಟಕ ಪಬ್ಲಿಕ್ ಶಾಲೆಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರು ಭೇಟಿನೀಡಿ,
ಆತ್ಮಸ್ಥೈರ್ಯ ತುಂಬುವ ಮೂಲಕ ವಿದ್ಯಾರ್ಥಿಗಳಿಗೆ ಪುಷ್ಪನೀಡಿ ಶುಭಹಾರೈಸಿದರು…
ಬಳಿಕ ಪರೀಕ್ಷಾ ಸಿದ್ದತಾ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಕೊಠಡಿಗಳನ್ನು ಪರಿಶೀಲಿಸಿ, ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.
ಎಸ್.ಎಸ್.ಎಲ್.ಸಿ ಪರೀಕ್ಷೆ ಎದುರಿಸುತ್ತಿರುವ ನನ್ನೆಲ್ಲಾ ಆತ್ಮೀಯ ವಿದ್ಯಾರ್ಥಿಗಳು ಭಯ, ಆತಂಕ ಬಿಟ್ಟು ಧೈರ್ಯ ಹಾಗೂ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ, ಯಶಸ್ಸು ನಿಮ್ಮದಾಗಲಿ ಎಂದು ಈ ಸಂದರ್ಭದಲ್ಲಿ ಮತ್ತೊಮ್ಮೆ ಶುಭ ಹಾರೈಸಿದರು..