ಮಂಡ್ಯದಲ್ಲಿ ಘೋರ ದುರಂತ: ಚಾಮುಂಡಿ ಎಕ್ಸ್‌ಪ್ರೆಸ್ ರೈಲಿಗೆ ತಲೆಕೊಟ್ಟು ASI ಮಗಳು ಆತ್ಮಹತ್ಯೆ.!!
ASHWASURYA/SHIVAMOGGA
news.ashwasurya.in
ಅಶ್ವಸೂರ್ಯ/ಮಂಡ್ಯ : ಸಕ್ಕರೆ ನಾಡು ಮಂಡ್ಯದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ASI ಒಬ್ಬರ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ. ಮಂಡ್ಯದ ಬಂದೀಗೌಡ ಬಡಾವಣೆ ಸಮೀಪದ ರೈಲ್ವೆ ಹಳಿಯಲ್ಲಿ ಈ ಆಘಾತಕಾರಿ ಘಟನೆಯೊಂದು ನಡೆದು ಹೋಗಿದೆ.!
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸುಹಾನಾ (19) ಎಂದು ಗುರುತಿಸಲಾಗಿದೆ. ಈಕೆ ಮಂಡ್ಯದ ಸಶಸ್ತ್ರ ಮೀಸಲು ಪಡೆಯ ಎಎಸ್‌ಐ ಅನ್ಸರ್ ಪಾಷಾ ಅವರ ಪುತ್ರಿಯಾಗಿದ್ದು. ಸುಹಾನಾ ಮೈಸೂರಿನಲ್ಲಿ ಪ್ರಥಮ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.
ಎಂದಿನಂತೆ ಕಾಲೇಜು ಮುಗಿಸಿಕೊಂಡು ಮನೆಗೆ ಬಂದಿದ್ದ ಸುಹಾನಾ ತನ್ನ ಸ್ಕೂಟರ್ ತೆಗೆದುಕೊಂಡು ಹೋಗಿ ಬಂದೀಗೌಡ ಬಡಾವಣೆ ಬಳಿ ನಿಲ್ಲಿಸಿ ಅಲ್ಲೆ ಸಮೀಪದಲ್ಲಿರುವ ರೈಲ್ವೆ ಹಳಿಯತ್ತ ತೆರಳಿ ಬಳಿಕ ಬರುತ್ತಿದ್ದ ಚಾಮುಂಡಿ ಎಕ್ಸ್‌ಪ್ರೆಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.