ASHWASURYA/SHIVAMOGGA
news.ashwasurya.in
ಹಿಂದಿನ ಮೀಸಲು ಪಟ್ಟಿಯಂತೆ ಶೀಘ್ರದಲ್ಲೇ ಪಾಲಿಕೆ ಚುನಾವಣೆ..!? ಘೋಷಣೆ ಬಾಕಿ..!
ಅಶ್ವಸೂರ್ಯ/ಬೆಂಗಳೂರು: ಮೈಸೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಐದು ಮಹಾನಗರ ಪಾಲಿಕೆಗೆ ಮೂರ್ ನಾಲ್ಕು ತಿಂಗಳಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ತೀರ್ಮಾನಿಸಿದೆ. ಸರ್ಕಾರದಿಂದ ಈ ಐದೂ ಮಹಾನಗರ ಪಾಲಿಕೆಗಳ ಮೀಸಲು ಪಟ್ಟಿ ನೀಡಿದ್ರೆ ಅದರಂತೆ ಚುನಾವಣೆ ನಡೆಯಲಿದೆ. ಇಲ್ಲವಾದಲ್ಲಿ ಹೈ ಕೋರ್ಟ್ ಮೊರೆ ಹೋಗಿ ಹಳೆ ಮೀಸಲು ಪಟ್ಟಿಯಂತೆ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.!
ಶಿವಮೊಗ್ಗ ಸೇರಿದಂತೆ ಮೈಸೂರು, ಮಂಗಳೂರು, ದಾವರಣಗೆರೆ ಮತ್ತು ತುಮಕೂರು ಈ ಐದು ಮಹಾನಗರ ಪಾಲಿಕೆಯಲ್ಲಿ ಚುನಾಯಿತ ಜನಪ್ರತಿನಿದಿಗಳ ಅವದಿ ಮುಕ್ತಾಯಗೊಂಡು ವರ್ಷಗಳೆ ಕಳೆದಿದೆ. ಈ ಐದೂ ಮಹಾನಗರ ಪಾಲಿಕೆಯಲ್ಲಿ ಚುನಾವಣೆ ನಡೆಸಬೇಕಾಗಿದ್ದು, ಚುನಾವಣಾ ಆಯೋಗ ರಾಜ್ಯ ಸರ್ಕಾರದ ಬಳಿ ಮೀಸಲು ಪಟ್ಟಿ ನೀಡಲು ಮನವಿ ಮಾಡಿದೆ. ನಿಯಮಾನುಸಾರ ಸರ್ಕಾರ ಮೀಸಲು ಪಟ್ಟಿ ಕೊಟ್ಟ ಬಳಿಕ ಅದರಂತೆ ಚುನಾವಣೆ ನಡೆಸಲಾಗುತ್ತದೆ. ಆದರೆ ಸರ್ಕಾರ ಇನ್ನೂ ಮೀಸಲು ಪಟ್ಟಿ ನೀಡುವ ವಿಚಾರದಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗೊಂದು ವೇಳೆ ಮೀಸಲು ಪಟ್ಟಿ ನೀಡದೇ ಹೊದರೆ ಈ ಹಿಂದಿನ ಮೀಸಲು ಪಟ್ಟಿಯ ಆಧಾರದಲ್ಲಿ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯಕ್ತರಾದ ಜಿ.ಎಸ್. ಸಂಗ್ರೇಶಿ ಮಾಹಿತಿ ನೀಡಿದ್ದಾರೆ. ಮತದಾರರ ಪಟ್ಟಿ ಸಿದ್ಧವಾಗಿದೆಯಾದ್ರೂ ಮೀಸಲು ಪಟ್ಟಿಗಾಗಿ ಮಾತ್ರ ಕಾಯಲಾಗುತ್ತಿದೆ. ಎಂದು ಅವರು ಮಾಹಿತಿ ನೀಡಿದ್ದಾರೆ.