ಆತ್ಮಹತ್ಯೆಗೆ ಶರಣಾದ ಮಾಧುರಿ
ನನಗೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಮನನೊಂದು ಮೊಬೈಲ್‌ನಲ್ಲಿ ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಾಮನಗರ : ರಾಮನಗರ ಜಿಲ್ಲೆಯ ಚನ್ನಪಟ್ಟಣ ಠಾಣೆಯ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಗೃಹಿಣಿಯೊಬ್ಬರು ಮೊಬೈಲ್‌ನಲ್ಲಿ ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ರ್ಘಟನೆ ನಡೆದಿದೆ.
ಚನ್ನಪಟ್ಟಣ ನಗರದ ಕೋಟೆ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಮಾಧುರಿ (31) ಸಾವನ್ನಪ್ಪಿರುವ ಮಹಿಳೆ ಆಗಿದ್ದಾಳೆ. ಈಕೆ ಅಗಸ್ಟ್ 2ರ ರಾತ್ರಿ ನಿದ್ದೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದರಂತೆ ವಿಷಯ ತಿಳಿದ ಈಕೆಯ ಮನೆಯವರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಮಾಧುರಿ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಸಾಯುವ ಮುನ್ನ ತನ್ನ ಸಾವಿಗೆ ಚನ್ನಪಟ್ಟಣ ಪೊಲೀಸರು ನೀಡಿದ ಕಿರುಕುಳ ಹಾಗೂ ಅವರ ನಿರ್ಲಕ್ಷ್ಯವೇ ಕಾರಣವಾಗಿದೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ! ಈ ಒಂದು ಆತ್ಮಹತ್ಯೆಯ ಪ್ರಕರಣದಿಂದ ಚನ್ನಪ್ಪಟ್ಟಣ ಪೊಲೀಸರಿಗೆ ನಡುಕ ಶುರುವಾಗಿದೆ.
ಇನ್ನೂ ಗೃಹಿಣಿ ಸೆಲ್ಫಿ ವೀಡಿಯೋ ಮಾಡಿ ಸಾಕಷ್ಟು ನಿದ್ರೆಮಾತ್ರೆ ತಿಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.ತಕ್ಷಣ ಈಕೆಯನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದ ಹಿನ್ನಲೆಯಲ್ಲಿ ಸಾವನ್ನಪ್ಪಿದ್ದಾರೆ.
ಮೃತ ಮಹಿಳೆ ಮಾಧುರಿ ದೂರು ನೀಡಲು ಪೋಲಿಸ್ ಠಾಣೆಗೆ ಹೋದಾಗ ಪೊಲೀಸರು ದೂರನ್ನು ಸ್ವೀಕರಿಸದೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಮಾಡಿದ್ದಾಳಂತೆ! ವ್ಯಕ್ತಿಯೊಬ್ಬರ ಜೋತೆ ಹಣದ ವಿಚಾರಕ್ಕೆ ಗಲಾಟೆ ಮಾಡಿಕೊಂಡು ದೂರು ನೀಡಲು ಹೋದಾಗ ಪೋಲಿಸರು ನನಗೆ ಅವಮಾನ ಮಾಡಿದ್ದಾರೆ. ಜೊತೆಗೆ ನಿನ್ನ ಮೇಲೆ ಹಳೆಯ ಕೇಸುಗಳಿವೆ ಎಂದು ಆಕೆಯನ್ನು ಪೊಲೀಸ್ ಠಾಣೆಯಿಂದ ಪೊಲೀಸರು ವಾಪಸ್ ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾಳೆ.
ಚನ್ನಪಟ್ಟಣ ಟೌನ್ ಪೊಲೀಸರ ವಿರುದ್ಧ ದೂರು ಸ್ವೀಕರಿಸದ ಆರೋಪ ಮಾಡಿದ್ದಾಳೆ. ಇನ್ನೂ ಪೊಲೀಸರು ಮಾಡಿದ ಅವಮಾನದಿಂದಲೇ ಬೇಸತ್ತು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ವಿಡಿಯೋದಲ್ಲಿ ಹೇಳಿದ್ದಾಳೆ. ವೀಡಿಯೊದಲ್ಲಿ ನಾನು ಸತ್ತ ಮೇಲಾದರೂ ನನಗೆ ನ್ಯಾಯಕೊಡಿಸುವಂತೆ ಮನವಿ ಮಾಡಿದ್ದಾಳೆ! ಚನ್ನಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಈ ಬಗ್ಗೆ ಪ್ರಕರಣ ದಾಖಲು ಆಗಿರುವ ಬಗ್ಗೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ. ಆದರೆ, ನ್ಯಾಯ ಕೇಳಲು ಹೋದ ವ್ಯಕ್ತಿ ಯಾರೇ ಆಗಿದ್ದರೂ ಪೊಲೀಸರು ದೂರು ದಾಖಲಿಸಿಕೊಂಡು ನ್ಯಾಯ ಕೊಡಿಸಲು ಮುಂದಾಗುವುದು ಅವರ ಕರ್ತವ್ಯ ಎಂದು ಮೃತ ಮಹಿಳೆಯ ಕುಟುಂಬದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಿಕರು ನ್ಯಾಯ ಕೋರಿ ರಾಮನಗರ ಎಸ್ಪಿಗೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ ಚನ್ನಪಟ್ಟಣ ಟೌನ್ ಇನ್ಸ್ಪೆಕ್ಟರ್ ಶೋಭಾ ಹಾಗೂ ಪೊಲೀಸ್ ಸಿಬ್ಬಂದಿ ವಿರುದ್ಧ ಆರೋಪ ಮಾಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಬದುಕಿ ಎದುರಿಸಿ ತೋರಿಸ ಬೇಕಾದ ಮಾಧುರಿ ಆತ್ಮಹತ್ಯೆಗೆ ಶರಣಾಗಿದ್ದು ಮಾತ್ರ ದುರಂತವೆ ಹೌದು. ಆದರೆ ಬುದ್ಧಿಹೇಳಿ ಗದರಿಸಿ ಕಳುಹಿಸಿದ ಪೋಲಿಸರು ಮಾತ್ರ ಆಕೆಯ ಮಾಡಿರುವ ವಿಡಿಯೋದಿಂದ ನಡುಗಿ ಹೋಗಿದ್ದಾರೆ
ಸುಧೀರ್ ವಿಧಾತ,ಶಿವಮೊಗ್ಗ