BREAKING: ಕಾಕೀ ಖದರ್ ತೋರಿಸಿ ಡೀಲ್‌ಗೆ ಮುಂದಾದ ಪೊಲೀಸರ ಮೇಲೆ ಲೋಕಾಯುಕ್ತ ದಾಳಿ: ಸ್ಥಳದಿಂದ ಎಸ್ಕೇಪ್ ಅದ ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಇನ್ಸ್ ಪೆಕ್ಟರ್ ಕುಮಾರ್.!
ASHWASURYA/SHIVAMOGGA
news.ashwasurya.in
ಅಶ್ವಸೂರ್ಯ/ಬೆಂಗಳೂರು: ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆಯಾಗಿ ಅದು ಕೊರಳಿಗೇರುವ ಮುನ್ನವೇ ಇನ್ಸ್ಪೆಕ್ಟರ್‌ಗೆ ಲೋಕಾಯುಕ್ತ ಪೊಲೀಸರು ಸರಿಯಾದ ಶಾಕ್ ನೀಡಿದ್ದಾರೆ.
ಲೋಕಾಯುಕ್ತ ಬಂಧನ ಭೀತಿಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕುಮಾರ್ ಎಸ್ಕೇಪ್ ಆಗಿದ್ದಾರೆ. ಲೋಕಾಯುಕ್ತ ಕಾರ್ಯಾಚರಣೆ ವೇಳೆಯಲ್ಲಿ ಇನ್ಸ್ಪೆಕ್ಟರ್ ಕುಮಾರ್ ಪರಾರಿಯಾಗಿದ್ದಾರೆ.
ಸುಳ್ಳು ಪ್ರಕರಣ ದಾಖಲಿಸಿ 4 ಕೋಟಿ ರೂಪಾಯಿ ಮೌಲ್ಯದ ಮನೆ ಮಾರಾಟಕ್ಕೆ ಒತ್ತಡ ಹಾಕಿದ್ದರು ಎಂದು ತಿಳಿದುಬಂದಿದೆ.! ನಾಗರಬಾವಿಯ ಖಾಸಗಿ ಹೋಟೆಲ್ ನಲ್ಲಿ ಈ ಸಂಭಂದ ಡೀಲ್ ನಡೆಸುವ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಡೀಲ್ ಮಾಡುವ ವೇಳೆ ಇಬ್ಬರು ಪೊಲೀಸ್ ಕಾನ್ಸ್ಟೇಬಲ್‌ಗಳು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಅಧಿಕಾರ ದುರ್ಬಳಕೆ ಆರೋಪದಡಿ ಇಬ್ಬರು ಪಿಸಿಗಳು ಸೇರಿ ಐವರನ್ನು ಬಂಧಿಸಲಾಗಿದೆ.
ಭ್ರಷ್ಟಾಚಾರ ತಡೆ ಕಾಯ್ದೆಯಡಿ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಗಳನ್ನು ಬಂಧಿಸಲಾಗಿದೆ. ಸಿವಿಲ್ ಗುತ್ತಿಗೆದಾರ ಚನ್ನೇಗೌಡರ ಪತ್ನಿ ಅನುಷಾಗೆ ಅನ್ನಪೂರ್ಣೇಶ್ವರಿ ನಗರ ಠಾಣೆ ಪಿಎಸ್ಐ ಕುಮಾರ್ ಅವರು ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.
ಸುಳ್ಳು ಪ್ರಕರಣ ದಾಖಲಿಸಿ ಸಿವಿಲ್ ಗುತ್ತಿಗೆದಾರ ಚನ್ನೇಗೌಡರಿಗೆ ಸೇರಿದ 4 ಕೋಟಿ ರೂಪಾಯಿ ಮೌಲ್ಯದ ಮನೆ ಮಾರಾಟಕ್ಕೆ ಒತ್ತಡ ಹಾಕಿದ್ದರು.ಕಡಿಮೆ ಮೊತ್ತಕ್ಕೆ ನೋಂದಣಿ ಮಾಡಿಕೊಡುವಂತೆ ಇನ್ಸ್ಪೆಕ್ಟರ್ ಕಿರುಕುಳ ನೀಡಿದ್ದರು ಎಂದು ಆರೋಪಿಸಲಾಗಿದೆ.
ಸರ್ಕಾರಿ ಉದ್ಯೋಗದಲ್ಲಿರುವ ಗುತ್ತಿಗೆದಾರ ಚನ್ನೇಗೌಡರ ಪತ್ನಿ ಅನುಷಾ ಅವರ ವಿರುದ್ಧ ಈ ಹಿಂದೆ ದಾಖಲಾಗಿದ್ದ ಪ್ರಕರಣಕ್ಕೆ ಬಿ ರಿಪೋರ್ಟ್ ಹಾಕುತ್ತೇನೆ. ಮನೆ ಬರೆದು ಕೊಡಿ ಎಂದು ಇನ್ಸ್ಪೆಕ್ಟರ್ ಕುಮಾರ್ ಕಿರುಕುಳ ನೀಡುತ್ತಿದ್ದರು. ಈ ಹಿಂದೆ ಚನ್ನೇಗೌಡರ ಮನೆಗೆ ಕೆಲವು ಗೂಂಡಾಗಳನ್ನು ನುಗ್ಗಿಸಿದ್ದರಂತೆ. ಈ ವೇಳೆಗೆ ಸಿವಿಲ್ ಕಂಟ್ರಾಕ್ಟರ್ ಚನ್ನೇಗೌಡ ವಿಡಿಯೋ ಮಾಡಿಕೊಂಡಿದ್ದರು.
ಠಾಣೆಗೆ ಚನ್ನೇಗೌಡನ ಕರೆಸಿ ಒತ್ತಾಯ ಪೂರ್ವಕವಾಗಿ ಅಗ್ರಿಮೆಂಟ್‌ಗೆ ಸಹಿ ಹಾಕಿಸಿದ್ದರು.ಆನ್ಲೈನ್ ಮೂಲಕ 4 ಲಕ್ಷ ರೂಪಾಯಿ ವರ್ಗಾವಣೆ ಮಾಡಿ ಅಗ್ರಿಮೆಂಟ್ ಮಾಡಲಾಗಿತ್ತು. ಸೋದರ ಸಂಬಂಧಿ ಗವಿ ಗೌಡ ಮತ್ತು ದಿವ್ಯಾ ಹೆಸರಿಗೆ ಮನೆ ನೋಂದಣಿ ಮಾಡುವಂತೆ ಒತ್ತಡ ಹೇರಿದ್ದರಂತೆ.!
ನಿನ್ನೆ ಸಂಜೆ ಅಗ್ರಿಮೆಂಟ್ ಗೆ ಸಹಿ ಹಾಕಿಸಲು ಇನ್ಸ್ಪೆಕ್ಟರ್ ಕುಮಾರ್ ಕರೆಸಿದ್ದ. ನಾಗರಬಾವಿಯ ಖಾಸಗಿ ಹೋಟೆಲ್ ಗೆ ಇನ್ಸ್ಪೆಕ್ಟರ್ ಕುಮಾರ್ ಕರೆಸಿದ್ದರು. ಚನ್ನೇಗೌಡನ ಪತ್ನಿ ಅನುಷಾ ಸಹಿ ಹಾಕಿಸಿಕೊಳ್ಳಲು ಕರೆಸಿದ್ದ ವೇಳೆ ಲೋಕಾಯುಕ್ತ ದಾಳಿ ವಿಚಾರ ತಿಳಿದು ಇನ್ಸ್ಪೆಕ್ಟರ್ ಕುಮಾರ್ ಪರಾರಿಯಾಗಿದ್ದಾರೆ. ಇಬ್ಬರು ಕಾನ್ಸ್ ಟೇಬಲ್ ಗಳು ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಏಪ್ರಿಲ್ 01ರ ಸಂಜೆ 5 ಗಂಟೆಯಿಂದ ಇಂದು ಮುಂಜಾನೆ 3 ಗಂಟೆಗೆ ಕಾರ್ಯಾಚರಣೆ ನಡೆದಿದೆ ಎನ್ನಲಾಗಿದೆ.