Headlines

2nd PUC Result: ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ,ಹೀಗೆ ನೋಡಿ

2nd PUC Result: ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ,ಹೀಗೆ ನೋಡಿ

ASHWASURYA/SHIVAMOGGA

news.ashwasurya.in

ಅಶ್ವಸೂರ್ಯ/ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) 2025 ರ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ (2nd PUC Exam Result)ಫಲಿತಾಂಶ ಇಂದು ಪ್ರಕಟ ಆಗಲಿದೆ. ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು (Second PU Exam) ನಡೆದಿದ್ದವು. ಮಾರ್ಚ್ 21 ರಂದು ಆನ್ಸರ್ ಕೀ (Second PUC Answer Key) ಬಿಡುಗಡೆ ಮಾಡಲಾಗಿತ್ತು.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025: ನೋಡುವುದು ಎಲ್ಲಿ?

ಪತ್ರಿಕಾಗೋಷ್ಠಿ ಮೂಲಕ ಕೆಎಸ್​​ಸಿಎಬಿ ಫಲಿತಾಂಶ ಪ್ರಕಟಿಸಲಿದೆ. ಆ ನಂತರ ಆನ್​ಲೈನ್ ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಜತೆಗೆ, ಅಂಕಪಟ್ಟಿ ಡೌನ್​ಲೋಡ್ ಮಾಡಿಕೊಳ್ಳಬಹುದಾಗಿದೆ. ಈ ಕೆಳಗಿನ ಎರಡು ವೆಬ್​ಸೈಟ್​ಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಲಭ್ಯವಿರಲಿದೆ.

https://kseab.karnataka.gov.in

https://karresults.nic.in

ರಿಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್‌ವರ್ಡ್ ನಮೂದಿಸಬೇಕು.
Second PU Results 2025 ಎಂಬುದು ಸ್ಕ್ರೀನ್​ನಲ್ಲಿ ಕಾಣಿಸುತ್ತದೆ.
ನಂತರ ರಿಸಲ್ಟ್ ನೋಡಬಹುದು. ಅಲ್ಲಿಯೇ ಪಿಡಿಎಫ್ ಡೌನ್​ಲೋಡ್ ಮಾಡಲು ಅವಕಾಶ ಇರುತ್ತದೆ.

ಮಾರ್ಚ್ 1ರಿಂದ 20ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ
ಮಾರ್ಚ್ 1ರಿಂದ 20ರವರೆಗೆ ನಡೆದ ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಕಳೆದ ಮೂರು ವರ್ಷಗಳ ದ್ವಿತೀಯ ಪಿಯುಸಿ ಫಲಿತಾಂಶಗಳಲ್ಲಿ ಹುಡುಗಿಯರು ನಿರಂತರವಾಗಿ ಹುಡುಗರಿಗಿಂತ ಮೇಲುಗೈ ಸಾಧಿಸಿದ್ದಾರೆ. 2022 ರಲ್ಲಿ ಶೇ 13.5 ರಷ್ಟು ಗಮನಾರ್ಹ ಅಂತರದೊಂದಿಗೆ ಮೇಲುಗೈ ಸಾಧಿಸಿದ್ದರು.

Leave a Reply

Your email address will not be published. Required fields are marked *

Optimized by Optimole
error: Content is protected !!