ತೀರ್ಥಹಳ್ಳಿ:600ಕ್ಕೆ 599 ಅಂಕ ಪಡೆದು ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದೀಕ್ಷಾ ಆರ್.
ತೀರ್ಥಹಳ್ಳಿಯ ವಾಗ್ದೇವಿ ಶಿಕ್ಷಣ ಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ದೀಕ್ಷಾ ಆರ್
ರಾಜ್ಯಕ್ಕೆ ಪ್ರಥಮ.
ಅಶ್ವಸೂರ್ಯ/ತೀರ್ಥಹಳ್ಳಿ : ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ತೀರ್ಥಹಳ್ಳಿಯ ವಾಗ್ದೇವಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ದೀಕ್ಷಾ ಆರ್. ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ತೀರ್ಥಹಳ್ಳಿಯ ಬೆಟ್ಟಮಕ್ಕಿ ನಿವಾಸಿ, ರಾಘವೇಂದ್ರ ಕಲ್ಕೂರ್ ಹಾಗೂ ಉಷಾ ದಂಪತಿಗಳ ಪುತ್ರಿ ದೀಕ್ಷಾ ತೀರ್ಥಹಳ್ಳಿಯ ವಾಗ್ದೇವಿ ಪಿ.ಯು. ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದರು. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ 600 ಅಂಕಗಳಿಗೆ 599 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಅಪ್ಪ ಅಮ್ಮ ಇಬ್ಬರೂ ಸರಕಾರಿ ಶಾಲೆ ಶಿಕ್ಷಕರಾಗಿದ್ದು ಮಗಳ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ. ತಂದೆ ರಾಘವೇಂದ್ರ ಕಲ್ಕೂರು ಮೇಗರವಳ್ಳಿ ಶಾಲೆಯಲ್ಲಿ ಶಿಕ್ಷಕ, ತಾಯಿ ಉಷಾ.ವಿ. ತೀರ್ಥಹಳ್ಳಿಯ ಬಾಲಕಿಯ ಪ್ರೌಢಶಾಲೆ ಶಿಕ್ಷಕ.
“ನಾನು ಪ್ರತಿದಿನ ಓದುತ್ತಿದ್ದೆ. ಕಾಲೇಜಿನಲ್ಲಿ ಉಪನ್ಯಾಸಕರು ಚೆನ್ನಾಗಿ ಕಲಿಸುತ್ತಿದ್ದರು. ಯಾವುದೇ ಡೌಟುಗಳಿದ್ದರು ತಿಳಿಸಿ ಕೊಡುತ್ತಿದ್ದರು. ಅಲ್ಲದೆ ಯೂ ಟ್ಯೂಬ್‌ನಲ್ಲಿಯೂ ವಿಷಯಕ್ಕೆ ಸಂಬಂಧಿಸಿದ ವಿಡಿಯೋಗಳನ್ನು ನೋಡುತ್ತಿದ್ದೆ. ಆದ್ದರಿಂದ ವಿಷಯಗಳು ಹೆಚ್ಚು ಮನದಟ್ಟಾದವು. ಇದು ಪರೀಕ್ಷೆಯಲ್ಲಿ ಅನುಕೂಲವಾಯಿತು. ಮುಂದೆ ಇಂಜಿನಿಯರ್ ಆಗಬೇಕು ಎಂಬ ಹಂಬಲವಿದೆ ” ಎಂದು ದೀಕ್ಷಾ.ಆರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

