Headlines

ಡಿಸಿಸಿ ಬ್ಯಾಂಕ್ ಹಗರಣ – ಮಾಜಿ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡರನ್ನು ಅರೆಸ್ಟ್ ಮಾಡಿದ ED ಅಧಿಕಾರಿಗಳು.!

ASHWASURYA/SHIVAMOGGA

news.ashwasurya.in

ಅಶ್ವಸೂರ್ಯ/ ಬೆಂಗಳೂರು: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC Bank Shivamogga) ಹಗರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್‍ನ ಮಾಜಿ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಅವರನ್ನು ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬಂಧಿಸಿದ್ದಾರೆ.
ಮಂಗಳವಾರ ಏಪ್ರಿಲ್ 8 ರಂದು ಆರ್ ಎಂ ಮಂಜುನಾಥ್ ಗೌಡ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ್ದರು. ಅವರ ನಿವಾಸ ಸೇರಿದಂತೆ 8 ಕಡೆ ಇಡಿ ದಾಳಿ ನಡೆಸಿದ್ದರು. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅಪೆಕ್ಸ್ ಬ್ಯಾಂಕಿನ ಗೆಸ್ಟ್‌ಹೌಸ್‌ ಮೇಲೂ ದಾಳಿ ನಡೆಸಲಾಗಿತ್ತು. ಈ ವೇಳೆ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಇಂದು (ಏ.9) ಅವರನ್ನು ಬಂಧಿಸಿ, 1ನೇ ಸಿಸಿಹೆಚ್ ಕೋರ್ಟ್‌ಗೆ ಹಾಜರುಪಡಿಸಲಾಗಿದೆ.
ಶಿವಮೊಗ್ಗ ಜಿಲ್ಲಾ ಡಿಸಿಸಿ ಬ್ಯಾಂಕಿನ ಕೋಟ್ಯಂತರ ರೂ. ಹಣ ದುರ್ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ 2018 ರಲ್ಲಿ ಡಿಸಿಸಿ ಬ್ಯಾಂಕ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ಜಿಲ್ಲಾ ಬ್ಯಾಂಕಿನ ಅಧ್ಯಕ್ಷರಾಗಿದ್ದ ಆರ್ ಎಂ ಮಂಜುನಾಥ್ ಗೌಡ ಅವರನ್ನು ಎಸಿಬಿ ಬಂಧನ ಮಾಡಿತ್ತು. ಆದರೆ ಚಾರ್ಜ್ ಶೀಟ್‌ನಲ್ಲಿ ಆರ್ ಎಂ ಮಂಜುನಾಥ್ ಗೌಡ ಅವರ ಹೆಸರನ್ನು ಕೈಬಿಡಲಾಗಿತ್ತು. ಬಳಿಕ ಇಡಿ ಇಸಿಐಆರ್ ದಾಖಲು ಮಾಡಿ ತನಿಖೆ ನಡೆಸಲು ಮುಂದಾಗಿತ್ತು.
ಇಡಿ ತನಿಖೆಗೆ ಮುಂದಾಗುತ್ತಿದ್ದಂತೆ‌ ಆರ್ ಎಂ ಮಂಜುನಾಥ್ ಗೌಡ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. ಇಡಿ ಕಾನೂನು ಹೋರಾಟದ ಬಳಿಕ ಹೈಕೋರ್ಟ್ ತಡೆಯಾಜ್ಞೆ ತೆರವು ಮಾಡಿತ್ತು. ಇಡಿಯ ಅಸಲಿ ಆಟ ಮುಂದೇನು ಅನ್ನುವುದನ್ನು ಕಾದು ನೋಡಬೇಕಿದೆ.

Leave a Reply

Your email address will not be published. Required fields are marked *

Optimized by Optimole
error: Content is protected !!