ಶಿವಮೊಗ್ಗ:ವೃತ್ತಿ ಜೀವನದ ಕೊನೆಯ ದಿನವು ಲಂಚದ ಹಣಕ್ಕೆ ಕೈಯೊಡ್ಡಿ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಮುಖ್ಯಸ್ಥ ಕೃಷ್ಣಪ್ಪ.!
ASHWASURYA/SHIVAMOGGA
news.ashwasurya.in
ಅಶ್ವಸೂರ್ಯ/ಶಿವಮೊಗ್ಗ: ಶಿವಮೊಗ್ಗ ನಗರದ ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಧಿಕಾರಿಯೊಬ್ಬರು ತಮ್ಮ ವೃತ್ತಿ ಜೀವನದ ಕೊನೆಯ ದಿನವು ಲಂಚದ ಹಣಕ್ಕೆ ಕೈಯೊಡ್ಡಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸ್ಮಾರ್ಟ್ ಸಿಟಿ ಮುಖ್ಯಸ್ಥನಾಗಿದ್ದ ಕೃಷ್ಣಪ್ಪ, ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಿಗೆ ಇಂದು ಅಧಿಕಾರ ಹಸ್ತಾಂತರಿಸಿ ನಿವೃತ್ತಿ ಜೀವನದ ಕಡೆಗೆ ಹೆಜ್ಜೆ ಹಾಕಬೇಕಿತ್ತು. ಆದರೆ ಲಂಚದ ಹಣದ ದುರಾಸೆಗೆ ಬಿದ್ದಿದ್ದ ಕೃಷ್ಣಪ್ಪ ಕೊನೆಯ ದಿನ ಲಂಚದ ಹಣಕ್ಕೆ ಕೈಯೊಡ್ಡಲು ಹೋಗಿ ಅರೆಸ್ಟ್ ಆಗಿದ್ದಾರೆ. ಕೃಷ್ಣಪ್ಪ ಶಿವಮೊಗ್ಗ ನಗರದಲ್ಲಿ ಟಿವಿ, ಎಲ್‍ಇಡಿ ಪರದೆ ಅಳವಡಿಸುವ ಸಂಬಂಧ ಬಿಲ್ ಮಾಡಲು ಮುಂಬೈ ಮೂಲದ ಕಂಪೆನಿಯವರಿಂದ ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರಂತೆ.!
ಈ ವಿಷಯವಾಗಿ ಹಣ ಪಡೆಯುವ ಸಂಧರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿಮಾಡಿ ಕೃಷ್ಣಪ್ಪನನ್ನು ಬಲೆಗೆ ಕೆಡವಿ ಕೊಂಡು ಬಂಧಿಸಿದ್ದಾರೆ.
ಹಣ ಕೊಡದೇ ಇದ್ದರೆ, ಮುಂಬೈ ಮೂಲದ ಕಂಪೆನಿ ಸರಿಯಾಗಿ ಸರ್ವಿಸ್ ಮಾಡಿಲ್ಲ ಎಂದು ಷರಾ ಬರೆಯುವುದಾಗಿ ಅವರು ಬೆದರಿಕೆ ಹಾಕಿದ್ದರಂತೆ.! ಎಂದು ತಿಳಿದುಬಂದಿದೆ.