ಶಿಕ್ಷಣ ಸಚಿವ ಮಧು ಬಂಗಾರಪ್ಪ
ಎಸ್ ಎಸ್ ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಇನ್ಮುಂದೆ ವರ್ಷಕ್ಕೆ ಮೂರು ಬಾರಿ ಪರೀಕ್ಷೆಗೆ ಅವಕಾಶ : ಶಿಕ್ಷಣ ಸಚಿವ ಮಧು ಬಂಗಾರಪ್ಪ
news.ashwasurya.in
ಬೆಂಗಳೂರು: ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ವಿಧಾನಸೌಧದಲ್ಲಿಇಂದು ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಘೋಷಣೆ ಮಾಡಿದರು. ಈ ನಿಯಮದ ಪ್ರಕಾರ ವಿದ್ಯಾರ್ಥಿಗಳು, ಕೆಲ ವಿಷಯಗಳಲ್ಲಿ ಫೇಲ್ ಆದರೂ ಮುಂದಿನ ತರಗತಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ.
2023-24ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ವರ್ಷಕ್ಕೆ ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು, ಫೇಲ್ ಅಥವಾ ಕಡಿಮೆ ಅಂಕ ಬಂದವರು ಮೂ ಬಾರಿ ಪರೀಕ್ಷೆ ಬರೆಯಬಹುದು. 32.44 ಲಕ್ಷ ಮಕ್ಕಳಿಗೆ ಕಲಿಕಾ ಬಲವರ್ಧನೆ ಕಾರ್ಯಕ್ರಮ ನಡೆಸುತ್ತೇವೆ ಎಂದು ಅವರು ಮಾಹಿತಿ ನೀಡಿದರು.
ಶೈಕ್ಷಣಿಕ ಪ್ರಗತಿ, ಅರ್ಥಪೂರ್ಣ ಕಲಿಕೆ, ಜ್ಞಾನಧಾರಣೆ ವೃದ್ಧಿಸುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದ್ದು, ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ನಡೆಸಲಿರುವ ಮೂರು ಪರೀಕ್ಷೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಗುರು,ಕಮ್ಮರಡಿ