Headlines

ಓಂ ಪ್ರಕಾಶ್ ಮರ್ಡರ್ ಪ್ರಕರಣ : ಓಂ ಪ್ರಕಾಶ್‌ ಕೊಲೆ ಬಳಿಕ ಆರೋಪಿ ಪತ್ನಿ Monsterನ ಮುಗಿಸಿದೆ ಎಂದು ಮೇಸೆಜ್ .!

ಅಶ್ವಸೂರ್ಯ/ಬೆಂಗಳೂರು: ಮಾಜಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಪಲ್ಲವಿಯನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದುಬಂದಿದೆ. ಓಂ ಪ್ರಕಾಶ್ ಅವರನ್ನು 8 ರಿಂದ 10 ಬಾರಿ ಚಾಕುವಿನಿಂದ ಇರಿದು ಅವರ ಪತ್ನಿ ಕೊಲೆ ಮಾಡಿರುವುದು ವರದಿಯಾಗಿದೆ. ಇನ್ನೂ ಕೊಲೆ ಮಾಡಿದ ಬಳಿಕ I Have Finished Monster ಎಂದು ವಾಟ್ಸ್ ಆಪ್ ಗ್ರೂಪಿಗೆ ಮೇಸೆಜ್ ಮಾಡಿದ್ದರು ಎನ್ನುವುದು ತಿಳಿದುಬಂದಿದೆ.?.

ಓಂ ಪ್ರಕಾಶ್ ಅವರ ಎದೆ, ಹೊಟ್ಟೆ, ಕೈಗೆ ಚಾಕುವಿನಿಂದ ಇರಿದು ಪತ್ನಿ ಪಲ್ಲವಿ ಹತ್ಯೆಗೈದಿದ್ದಾರೆ. ಚಾಕುವಿನಿಂದ ಎಲ್ಲೆಂದರಲ್ಲಿ ಇರಿದ ಕಾರಣಕ್ಕೆ ನೆಲ ಮಹಡಿಯಲ್ಲಿ ರಕ್ತದ ಮಡುವಿನಲ್ಲಿ ಒದ್ದಾಡಿ ಒದ್ದಾಡಿ ಮಾಜಿ ಡಿಜಿ ಮತ್ತು ಐಜಿಪಿ ಪ್ರಾಣ ಬಿಟ್ಟಿದ್ದಾರೆಂದು ತಿಳಿದು ಬಂದಿದೆ. ಕೊಲೆ ಬಳಿಕ ನಾನು ರಾಕ್ಷಸನನ್ನು ಮುಗಿಸಿದೆ ಎಂದು ವಿಡಿಯೊ ಕಾಲ್‌ನಲ್ಲಿ ಪತ್ನಿ ಪಲ್ಲವಿ ಹೇಳಿರುವುದಾಗಿ ತಿಳಿದುಬಂದಿದೆ.
ಕೊಲೆಯಾಗಿರುವ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರಿಗೆ 68 ವರ್ಷ ವಯಸ್ಸಾಗಿತ್ತು. 1981ನೇ ಬ್ಯಾಚ್​ನ ಐಪಿಎಸ್​ ಅಧಿಕಾರಿ ಓಂ ಪ್ರಕಾಶ್ ಅವರು ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದರು. 2015ರ ಅವಧಿಯಲ್ಲಿ ಡಿಜಿ ಮತ್ತು ಐಜಿಪಿಯಾಗಿದ್ದ ಓಂ ಪ್ರಕಾಶ್ ಅವರು ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ನಲ್ಲಿ ವಾಸವಿದ್ದರು.
ಓಂ ಪ್ರಕಾಶ್‌ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಓಂ ಪ್ರಕಾಶ್ ಅವರು ತಮ್ಮ ಪತ್ನಿ ಪಲ್ಲವಿ ಜೊತೆ ವಾಸಿಸುತ್ತಿದ್ದರು. ಕೆಲವು ದಿನಗಳಿಂದ ಗಂಡ ಹೆಂಡತಿಯ ನಡುವೆ ಮನಸ್ತಾಪವಿತ್ತು ಆಗಾಗ ಇಬ್ಬರ ನಡುವೆ ವೈಯಕ್ತಿಕ ವಿಚಾರಕ್ಕೆ ಆಗಾಗ ಗಲಾಟೆ ನಡೆಯುತ್ತಿತ್ತು ಎಂದು ತಿಳಿದುಬಂದಿದೆ. ಇದೇ ಕಾರಣಕ್ಕೆ ಚಾಕುವಿನಿಂದ ಇರಿದು ಪತ್ನಿಯೇ ಗಂಡನನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಆಸ್ತಿ ವಿಚಾರಕ್ಕೆ ಹತ್ಯೆಯಾದ್ರ ಓಂ ಪ್ರಕಾಶ್.?
ಇತ್ತೀಚಿನ ದಿನಗಳಲ್ಲಿ ಓಂ ಪ್ರಕಾಶ್ ಕುಟುಂಬಕ್ಕೆ ಹಣಕಾಸಿನ ಸಮಸ್ಯೆ ಎದುರಾಗಿತ್ತು ಎನ್ನುವ ಮಾತು ಕೇಳಿಬಂದಿದ್ದು. ಈ ಹಿನ್ನೆಲೆಯಲ್ಲಿ ಮಾಜಿ ಡಿಜಿ ಮತ್ತು ಐಜಿಪಿ ಸಾಕಷ್ಟು ಸಾಲ ಮಾಡಿಕೊಂಡಿದ್ದರಂತೆ.! ಇದಕ್ಕೆ ಸಂಬಂಧಿಸಿ ಆಗಾಗ್ಗೆ ಮನೆಯಲ್ಲಿ ಜಗಳ ಕೂಡ ನಡೆಯುತ್ತಿತ್ತು. ಇದೇ ಜಗಳ ಕೊಲೆಗೆ ಕಾರಣವಾಗಿರಬಹುದು ಎಂದು ಅನುಮಾನ ವ್ಯಕ್ತವಾಗಿದೆ. ಮತ್ತೊಂದೆಡೆ, ಓಂ ಪ್ರಕಾಶ್ ಅವರು ಸಂಪಾದನೆ ಮಾಡಿದ್ದ ಆಸ್ತಿಯನ್ನು ಹೆಂಡತಿಗೆ ಕೊಡದೇ ನೇರವಾಗಿ ಮಗನ ಹೆಸರಿಗೆ ಬರೆದಿದ್ದರು.ಇದೇ ಕಾರಣಕ್ಕೆ ಹೆಂಡತಿ ಕೋಪಗೊಂಡು ಕೊಲೆ ಮಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ತನಿಖೆಯ ನಂತರವೇ ಸತ್ಯಾಂಶ ಹೊರಬರಬೇಕಿದೆ.
ಓಂ ಪ್ರಕಾಶ್ ಮೂಲತ ಬಿಹಾರದವರು. ಬಿಹಾರ ರಾಜ್ಯದ ಚಂಪಾರಣ್ ಜಿಲ್ಲೆಯ ಓಂ ಪ್ರಕಾಶ್ ಅವರು ಐಪಿಎಸ್ ಅಧಿಕಾರಿಯಾದ ನಂತರ ಮೊದಲ ಬಾರಿಗೆ ಅಂದಿನ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ಎಎಸ್‌ಪಿ ಆಗಿ ರಾಜ್ಯದಲ್ಲಿ ವೃತ್ತಿ ಆರಂಭಿಸಿದ್ದರು. ಇದಾದ ನಂತರ ಶಿವಮೊಗ್ಗ, ಉತ್ತರಕನ್ನಡ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ರಾಜ್ಯ ವಿಜಿಲೆನ್ಸ್ ಸೆಲ್‌ನ ಎಸ್‌ಪಿಯಾಗಿ, ಕರ್ನಾಟಕ ಲೋಕಾಯುಕ್ತದಲ್ಲಿ, ಅಗ್ನಿಶಾಮಕ ದಳದ ಡಿಐಜಿ, ಸಿಐಡಿ ಐಜಿಪಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದರು. 2015 ಮಾರ್ಚ್‌ನಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕವಾಗಿದ್ದ ಓಂ ಪ್ರಕಾಶ್ ಅವರು 2017ರಲ್ಲಿ ನಿವೃತ್ತಿ ಹೊಂದಿದ್ದರು.ಖಡಕ್ ಅಧಿಕಾರಿಯಾಗಿದ್ದ ಓಂ ಪ್ರಕಾಶ್ ಇಂದು ತಮ್ಮ ಮಡದಿಯ ಕೈಯಿಂದಲೇ ಹತ್ಯೆಯಾಗಿ ಹೋಗಿದ್ದು ಮಾತ್ರ ದುರಂತವೆ ಹೌದು.!

Leave a Reply

Your email address will not be published. Required fields are marked *

Optimized by Optimole
error: Content is protected !!