ಇವರು ತಮ್ಮ ಪತ್ನಿ ಮತ್ತು ಪುತ್ರನೊಂದಿಗೆ ಏ.19ರಂದು ಜಮ್ಮು ಪ್ರವಾಸಕ್ಕೆಂದು ತೆರಳಿದ್ದರು. ಏ.24ರಂದು ಅವರು ವಾಪಾಸ್ ಬರಬೇಕಿತ್ತು. ಇದರ ನಡುವೆ ಅವಘಡ ಸಂಭವಿಸಿಹೋಗಿದೆ. ಭಯೋತ್ಪಾದಕರ ಗುಂಡಿಗೆ ಮಂಜುನಾಥ್ ರಾವ್ ಬಲಿಯಾಗಿರುವುದನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ದೃಢಪಡಿಸಿದ್ದಾರೆ. ಮೃತ ದೇಹ ತರಲು ಜಿಲ್ಲಾಡಳಿತ ಎಲ್ಲಾ ವ್ಯವಸ್ಥೆ ಮಾಡಲಿದೆ ಎಂದು ತಿಳಿಸಿದ್ದಾರೆ.
ಉಗ್ರರ ದಾಳಿಗೆ ಶಿವಮೊಗ್ಗದ ರೀಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು: ಪತ್ನಿ, ಪುತ್ರನ ರಕ್ಷಣೆ.
ASHWASURYA/SHIVAMOGGA
news.ashwasurya.in
ಅಶ್ವಸೂರ್ಯ/ಶಿವಮೊಗ್ಗ: ಶ್ರೀನಗರ, ಏ.22- ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಶಿವಮೊಗ್ಗದ ಪ್ರವಾಸಿಗರೊಬ್ಬರು ಮೃತಪಟ್ಟಿದ್ದಾರೆ. ದಾಳಿಯಲ್ಲಿ 12 ಮಂದಿ ಗಾಯಗೊಂಡಿದ್ದಾರೆ.
ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಮೃತ ಪಟ್ಟಿದ್ದಾರೆ.


ಶಿವಮೊಗ್ಗದ ವಿಜಯನಗರ ನಿವಾಸಿಯಾಗಿರುವ ಮಂಜುನಾಥ್ ಅವರು ಪತ್ನಿ ಪಲ್ಲವಿ ಹಾಗೂ ಪುತ್ರ ಅಭಿಜೇಯ ಜೊತೆ ಪ್ರವಾಸಕ್ಕೆ ಹೋಗಿದ್ದ ವೇಳೆ ಉಗ್ರರು ದಾಳಿ ನಡೆಸಿದ ವೇಳೆ ಈ ಘಟನೆ ನೆಡೆದಿದೆ.
ಏ19 ರಂದು ಶಿವಮೊಗ್ಗದಿಂದ ಕಾಶ್ಮೀರ ಪ್ರವಾಸಕ್ಕೆ ಮಂಜುನಾಥ್ ಕುಟುಂಬಸ್ಥರು ತೆರಳಿದ್ದರು. ದಾಳಿಯಲ್ಲಿ ಸ್ಥಳದಲ್ಲೇ ಮಂಜುನಾಥ್ ರಾವ್ ಮೃತಪಟ್ಟಿದ್ದಾರೆ ಮಂಜುನಾಥ್ ಪತ್ನಿ ಹಾಗೂ ಪುತ್ರರನ್ನ ರಕ್ಷಿಸಿ ಸ್ಥಳೀಯರು ಬೇರೆಡೆ ಕರೆದುಕೊಂಡು ಬಂದಿದ್ದಾರೆ.


