Headlines

ಪಹಲ್ಗಾಮ್ | ಉಗ್ರರ ಅಟ್ಟಹಾಸಕ್ಕೆ ಪತ್ನಿ ಎದುರೇ ಬೆಂಗಳೂರಿನ ಟೆಕ್ಕಿ ಸಾವು.!

ಪಹಲ್ಗಾಮ್ | ಉಗ್ರರ ಅಟ್ಟಹಾಸಕ್ಕೆ ಪತ್ನಿ ಎದುರೇ ಬೆಂಗಳೂರಿನ ಟೆಕ್ಕಿ ಸಾವು.!

ASHWASURYA/SHIVAMOGGA

news.ashwasurya.in

ಅಶ್ವಸೂರ್ಯ/ಬೆಂಗಳೂರು: ಕಾಶ್ಮೀರದಲ್ಲಿ ಮಂಗಳವಾರ ನಡೆದ ಭೀಕರ ಉಗ್ರರ ಅಟ್ಟಹಾಸಕ್ಕೆ ಬೆಂಗಳೂರು ಮೂಲದ ಟೆಕ್ಕಿ ಭರತ್ ಭೂಷಣ್ ಪ್ರಾಣ ಕಳೆದುಕೊಂಡಿದ್ದಾರೆ.
ಕಾಶ್ಮೀರದ ಆನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಅಟ್ಟಹಾಸಕ್ಕೆ 30ರ ಗಡಿದಾಟಿದೆ. ಬೆಂಗಳೂರಿನ ಮೂಲದ ಟೆಕ್ಕಿ ಭರತ್ ಭೂಷಣ್ ಕೂಡ ಕುಟುಂಬದೊಂದಿಗೆ ಪ್ರವಾಸಕ್ಕೆ ಹೋಗಿ, ಉಗ್ರರ ಅಟ್ಟಹಾಸಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಶುಕ್ರವಾರ ಬೆಂಗಳೂರಿನಿಂದ ವೆಕೆಷನ್‌ಗಾಗಿ ಭರತ್ ಭೂಷಣ್, ಪತ್ನಿ, ಹಾಗೂ ಮೂರು ವರ್ಷದ ಮಗ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ನಾಲ್ಕೈದು ದಿನಕ್ಕೆ ಪ್ರವಾಸಕ್ಕೆ ತೆರಳಿದ್ದ ಕುಟುಂಬ ಗುರುವಾರ ಮಧ್ಯಾಹ್ನ ಬೆಂಗಳೂರಿಗೆ ವಾಪಸ್ ಆಗಬೇಕಿತ್ತು. ಆದರೆ ಮಂಗಳವಾರ ನಡೆದ ಉಗ್ರರ ಗುಂಡಿನ ದಾಳಿಗೆ ಭರತ್ ಭೂಷಣ್ ಉಸಿರು ಚಲ್ಲಿದ್ದಾರೆ.!
ಪಹಲ್ಗಾಮ್‌ನಲ್ಲಿ ಪ್ರವಾಸದಲ್ಲಿದ್ದ ವೇಳೆ ಮಂಗಳವಾರ ಮಧ್ಯಾಹ್ನ ಏಕಾಏಕಿ ಉಗ್ರರ ದಾಳಿ ನಡೆದಿದೆ. ಈ ವೇಳೆ ದಾಳಿಯಾದ ಸ್ಥಳದಲ್ಲೇ ಇದ್ದ ಭೂಷಣ್ ಕುಟುಂಬ, ದಾಳಿಯಿಂದ ತಪ್ಪಿಸಿಕೊಳ್ಳಲು ಓಡಿಹೋಗಿದ್ದಾರೆ.

ಅಲ್ಲೇ ಇದ್ದ ಮರವೊಂದರ ಬಳಿ ಮಗು ಜೊತೆ ಅವಿತುಕುಳಿತಿದ್ದ ಭರತ್ ಭೂಷಣ್‌ಗೆ ಉಗ್ರರು ನೇರವಾಗಿ ಶೂಟ್ ಮಾಡಿದ್ದಾರೆ. ಬುಲೆಟ್ ನೇರ ಭೂಷಣ್ ತಲೆಗೆ ಬಿದ್ದಿದ್ದು ಸ್ಥಳದಲ್ಲೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಕೂಡಲೇ ಭೂಷಣ್ ಅವರನ್ನು ಪರಿಶೀಲಿಸಿದ ಪತ್ನಿ, ಭೂಷಣ್ ಸಾವನ್ನಪ್ಪಿರುವುದು ತಿಳಿದ ಕೂಡಲೆ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.
ಭರತ್ ಕಳೆದ ಎಂಟು ವರ್ಷದ ಹಿಂದೆ ಮತ್ತಿಕೆರೆ ಮೂಲದ ಯುವತಿಯನ್ನು ಮದುವೆಯಾಗಿದ್ದರು. ಟೆಕ್ಕಿಯಾಗಿದ್ದ ಭರತ್ ಇತ್ತೀಚಿಗೆ ಕೆಲಸ ಬಿಟ್ಟು ಸ್ವಂತ ಬಿಸಿನೆಸ್ ಆರಂಭಿಸುವುದಕ್ಕೆ ಮುಂದಾಗಿದ್ದರಂತೆ. ಅದರಂತೆ ಕೆಲಸ ಬಿಟ್ಟಿದ್ದ ಕಾರಣ ರಜೆಯಿದ್ದಿದ್ದರಿಂದ ಮಗುವಿಗೆ ಕಾಶ್ಮೀರ ತೋರಿಸಬೇಕೆಂಬ ಕಾರಣಕ್ಕೆ ಪ್ರವಾಸ ಕೈಗೊಂಡಿದ್ದರು. ಆದರೆ ದುರಾದೃಷ್ಟವಶಾತ್ ಉಗ್ರರ ಬಂದೂಕಿನ ಗುಂಡು ಭರತ್ ಅವರ ಉಸಿರು ನಿಲ್ಲಿಸಿದೆ.

Leave a Reply

Your email address will not be published. Required fields are marked *

Optimized by Optimole
error: Content is protected !!