ಬೆಂಗಳೂರು :ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಬಂದ ಮಂಜುನಾಥ್, ಭರತ್ ಮೃತದೇಹ: ಆಂಬುಲೆನ್ಸ್ ನಲ್ಲಿ ಮಂಜುನಾಥ್ ಮೃತದೇಹ ಶಿವಮೊಗ್ಗಕ್ಕೆ ಬರಲಿದೆ.
ಪಹಲ್ಗಾಮ್’ನ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ ಕನ್ನಡಿಗರಾದ ಶ್ರೀ ಮಂಜುನಾಥ್ ರಾವ್ ಹಾಗೂ ಶ್ರೀ ಭರತ್ ಭೂಷಣ್ ಅವರ ಪಾರ್ಥಿವ ಶರೀರಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವೀಕರಿಸಲಾಯಿತು.


ಇದೇ ವೇಳೆ ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಸಿದ,ಕೇಂದ್ರ ಸಚಿವ ವಿ ಸೋಮಣ್ಣ ಅವರು ದುಃಖ ತಪ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು ಈ ಸಂಧರ್ಭದಲ್ಲಿ ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕೂಡ ಇದ್ದರೂ.
ASHWASURYA/SHIVAMOGGA
news.ashwasurya.in
ಅಶ್ವಸೂರ್ಯ/ಬೆಂಗಳೂರು: ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟ ಕರ್ನಾಟಕದ ಮಂಜುನಾಥ್ ಮತ್ತು ಭರತ್ ಭೂಷಣ್ ಅವರ ಮೃತದೇಹಗಳನ್ನು ದೆಹಲಿಯಿಂದ ಬೆಂಗಳೂರಿಗೆ ವಿಮಾನದ ಮೂಲಕ ತರಲಾಗಿದೆ.
ಉಗ್ರರ ದಾಳಿಗೆ ಬಲಿಯಾದ ಭರತ್ ಭೂಷಣ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೃತದೇಹಗಳನ್ನ ತಂದು ಅಲ್ಲಿಂದ ಆಂಬುಲೆನ್ಸ್ ನಲ್ಲಿ ಸ್ವಗೃಹಕ್ಕೆ ಕೊಂಡೊಯ್ಯಲಾಗಿದೆ.
ಶಿವಮೊಗ್ಗದ ಮಂಜುನಾಥ್ ಮೃತದೇಹವನ್ನು ಆಂಬುಲೆನ್ಸ್ ಮೂಲಕ ಬೆಂಗಳೂರಿನಿಂದ ತುಮಕೂರು, ಚಿತ್ರದುರ್ಗ, ಚನ್ನಗಿರಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆಗೆದುಕೊಂಡು ಬರಲಾಗುತ್ತಿದೆ. ಬೆಳಗ್ಗೆ 9 ಗಂಟೆಗೆ ಮಂಜುನಾಥ್ ನಿವಾಸದಲ್ಲಿ ಅಂತಿಮ ವಿಧಿ ವಿಧಾನಗಳು ನಡೆಯಲಿದ್ದು, ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಬೆಂಗಳೂರಿನ ಮತ್ತಿಕೆರೆಯ ನಿವಾಸಕ್ಕೆ ಭರತ್ ಭೂಷಣ್ ಮೃತದೇಹ ಕೊಂಡೊಯ್ದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬ್ಯಾರಿಕೇಡ್ ಅಳವಡಿಸಿ ಪೊಲೀಸರು ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ಮನೆ, ಸುತ್ತಲಿನ ರಸ್ತೆಯ ಬಳಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಮಂಜುನಾಥ್ ಮೃತದೇಹ ಇಂದು ಬೆಳಿಗ್ಗೆ 9 ಗಂಟೆಗೆ ಶಿವಮೊಗ್ಗಕ್ಕೆ ಆಗಮನ:

ಉಗ್ರದ ದಾಳಿಗೆ ತುತ್ತಾದ ಮಂಜುನಾಥ್ ಅವರ ಅಂತ್ಯಕ್ರಿಯೆ ಶಿವಮೊಗ್ಗದಲ್ಲಿ ನೆಡೆಯಲಿದ್ದು ಇವರಿಗೆ ಗೌರವ ಸೂಚಕವಾಗಿ ಇಂದು ಸ್ವಯಂ ಪ್ರೇರಿತರಾಗಿ ವರ್ತಕರು,ಹೋಟೆಲ್ ಮಾಲಿಕರು ಇನ್ನಿತರರು ಅಂಗಡಿ ಮುಂಗಟ್ಟುಗಳನ್ನು ಅರ್ದ ದಿನ ಬಂದ್ ಮಾಡಿ ಸಂತಾಪ ಸೂಚಿಸಲಿದ್ದಾರೆ. ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಗೆ ಬಲಿಯಾದ ಉದ್ಯಮಿ ಮಂಜುನಾಥ್ ರಾವ್ ಪಾರ್ಥಿವ ಶರೀರ ಗುರುವಾರ ಬೆಳಗ್ಗೆ 9 ಗಂಟೆಗೆ ಶಿವಮೊಗ್ಗಕ್ಕೆ ಬರಲಿದ್ದು ಮಧ್ಯಾಹ್ನ 12.30ರ ವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ, ಅ ನಂತರದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಪಾರ್ಥಿವ ಶರೀರದ ಅಂತಿಮ ಯಾತ್ರೆ ನಡೆಯಲಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತಿಮ ದರ್ಶನಕ್ಕೆ ಜಿಲ್ಲಾಧಿಕಾರಿಗಳು ಮತ್ತು ರಕ್ಷಣಾ ಅಧಿಕಾರಿಗಳು ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಿಂದ ಅಂಬುಲೇನ್ಸ್ ವಾಹನದಲ್ಲಿ ರಸ್ತೆ ಮೂಲಕ ಶಿವಮೊಗ್ಗಕ್ಕೆ ಮಂಜುನಾಥ್ ಮೃತದೇಹವನ್ನು ತರಲಾಗುತ್ತಿದೆ. ಮೃತದೇಹ ಶಿವಮೊಗ್ಗ ಪ್ರವೇಶಿಸಿದ ಕೂಡಲೇ ಬೈಕ್ ಜಾಥಾ ಮೂಲಕ ಬರಮಾಡಿಕೊಳ್ಳಲಾಗುವುದು. ಅಂತಿಮ ದರ್ಶನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗಮಿಸಲಿದ್ದಾರೆ.ಸಾವಿರಾರು ಜನ ಉಗ್ರರ ದಾಳಿಯಲ್ಲಿ ಬಲಿಯಾದ ಮಂಜುನಾಥ್ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದ್ದು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅನಂತರ ಮಂಜುನಾಥ್ ಅವರ ಕುಟುಂಬಸ್ಥರ ಪದ್ಧತಿಯಂತೆ ಅಂತಿನ ವಿಧಿವಿಧಾನ ನೆಡೆದು ಅಂತ್ಯ ಸಂಸ್ಕಾರ ನೆರವೇರಲಿದೆ.


