BREAKING : ಮಂಗಳೂರಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಬಳಸಿದ್ದ ಸ್ವಿಫ್ಟ್ ಕಾರು, ತಲ್ವಾರ್ಗಳು ಪತ್ತೆ.!
ASHWASURYA/SHIVAMOGGA
news.ashwasurya.in
ಅಶ್ವಸೂರ್ಯ/ಮಂಗಳೂರು : ಕರಾವಳಿ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಿ ಕೊಲೆ ಮಾಡಲಾಗಿದ್ದು,ಸಂಪೂರ್ಣ ಮಂಗಳೂರು ಬೆಚ್ಚಿ ಬಿದ್ದಿದೆ.
ಹತ್ಯೆಮಾಡಿದ ಹಂತಕರು ಕಾರಿನಲ್ಲಿ ಎಸ್ಕೇಪ್ ಆಗುವ ಸಂಧರ್ಭದಲ್ಲಿ ಹಂತಕರನ್ನು ಮಾತನಾಡಿಸಿದ ಅನ್ಯಕೋಮಿನ ಮಹಿಳೆ ಯಾರು.!?
ಜಿಲ್ಲೆಯಾದ್ಯಂತ ಸೂತಕದ ಛಾಯೆ ಆವರಿಸಿದ್ದು ಬಿಗುವಿನ ವಾತವರಣ ಸೃಷ್ಟಿಯಾಗಿದೆ. ಈ ಹಿನ್ನೆಲೆ ಮೇ 5 ರವರೆಗೂ ನಿಷೇಧಾಜ್ಷೆ ಜಾರಿಗೊಳಿಸಲಾಗಿದೆ.

ಹಿಂದೂ ಕಾರ್ಯಕರ್ತ ಸುಹಾಸ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯಕ್ಕೆ ಬಳಸಿದ್ದ ಸ್ವಿಫ್ಟ್ ಕಾರು ಪತ್ತೆಯಾಗಿದೆ. ಹಾಗೂ ಕಾರಿನೊಳಗೆ 2 ತಲ್ವಾರ್ಗಳು ಪತ್ತೆಯಾಗಿದೆ. ಬಜ್ಪೆ ಪೊಲೀಸರು ಕಾರನ್ನು ವಶಕ್ಕೆ ಪಡೆದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಸುರತ್ಕಲ್ ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಸುಹಾಸ್ ಶೆಟ್ಟಿಯ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಸ್ಸೊ ಇಚ್ಚೆ ಹೊಡೆದು ಹತ್ಯೆ ಮಾಡಿದ್ದಾರೆ.
ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ.!

ಮಂಗಳೂರಿನ ಬಜಪೆ, ಕಿನ್ನಿಪದವು ಸಮೀಪ ಈ ಘಟನೆ ನಡೆದಿದೆ. 2022ರ ಜುಲೈ 28 ರಂದು ಫಾಜಿಲ್ ಕೊಲೆ ನಡೆದಿತ್ತು. ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಜಿಲ್ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದ ಕಾರ್ಯಕರ್ತನಾಗಿದ್ದ.

ಸುಹಾಸ್ ಶೆಟ್ಟಿ. ಹಲವಾರು ಕೊಲೆ, ಕೊಲೆ ಯತ್ನ ಕೇಸ್ ನ ಆರೋಪಿಯಾಗಿದ್ದು.ರೌಡಿಶೀಟರ್ ಆಗಿದ್ದ.ಸುಹಾಸ್ ಶೆಟ್ಟಿಯ ಹತ್ಯೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.


