ಬೆಂಗಳೂರು : ಅಪ್ಪ, ಮಗ ಒಟ್ಟೊಟ್ಟಿಗೆ ಕಿರುತೆರೆಯ ಜ್ಯೋತಿಷ್ಯ ಕಾರ್ಯಕ್ರಮದಲ್ಲಿ ವಿಜ್ರಂಭಿಸುವುದರ ಜೋತೆಗೆ ಇನ್ನಿತರೆ ದಾರ್ಮಿಕ ಕಾರ್ಯಕ್ರಮದಲ್ಲಿ ಗಂಡ ಹೆಂಡತಿ ಮಗ ವಿಜ್ರಂಭಿಸುತ್ತಿರುವ ಸಂಧರ್ಭದಲ್ಲಿ ಪ್ರಖ್ಯಾತ ಜ್ಯೋತಿಷ್ಯ ಆನಂದ್ ಗುರೂಜಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎನ್ನುವುದು ವರದಿಯಾಗಿದೆ.! ಈ ಹಿನ್ನೆಲೆಯಲ್ಲಿ ದಿವ್ಯಾ ವಸಂತ್ ಸೇರಿ ಇಬ್ಬರ ವಿರುದ್ಧ FIR ದಾಖಲು.

ASHWASURYA/SHIVAMOGGA
news.ashwasurya.in
ಪ್ರಖ್ಯಾತ ಜ್ಯೋತಿಷ್ಯ ಆನಂದ್ ಗುರೂಜಿಗೆ ನಿಮ್ಮ ಸೇ… ವಿಡಿಯೋ ಇದೆ ಎಂದು ಬೆದರಿಸಿ ಬ್ಲ್ಯಾಕ್ ಮೇಲ್ ಮಾಡಿದ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ.!
ಅಶ್ವಸೂರ್ಯ/ಬೆಂಗಳೂರು: ಹೆಸರಾಂತ ಜ್ಯೋತಿಷಿ ಆನಂದ್ ಗುರೂಜಿ ಅವರಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದ್ದು ಆನಂದ್ ಗುರುಜೀ ದೂರುಕೊಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿಕ್ಕಜಾಲ ಠಾಣೆಯಲ್ಲಿ ಇಬ್ಬರ ವಿರುದ್ಧ ದೂರು ದಾಖಲಾದ ಕಾರಣಕ್ಕೆ ಕೃಷ್ಣಮೂರ್ತಿ (ಎ1) ಹಾಗೂ ಟಿವಿ ನಿರೂಪಕಿ ದಿವ್ಯಾ ವಸಂತ (ಎ2) ಸೇರಿ ಇಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆನಂದ್ ಗುರೂಜಿ ವಿಡಿಯೋ ಮತ್ತು ಜಮೀನು ಖರೀದಿಯ ಬಗ್ಗೆ ಕೋರ್ಟ್ನಿಂದ ತಡೆಯಾಜ್ಞೆ ತಂದರೂ ಬೆದರಿಕೆ ಹಾಕಲಾಗಿದೆ. ಆನಂದ ಗುರೂಜಿಯ ಕಾರು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪದಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ವಿಡಿಯೋ ಇದೆ ಪ್ರತಿನಿತ್ಯ ಹಣಕ್ಕಾಗಿ ಆರೋಪಿಗಳು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಕೋರ್ಟ್ನಿಂದ ತಡೆಯಾಜ್ಞೆ ತಂದರೂ ಹಣಕ್ಕಾಗಿ ಬೆದರಿಸಿ ಬ್ಲ್ಯಾಕ್ ಮೇಲ್, ಜೀವಬೆದರಿಕೆ ಹಾಕಿದ್ದಾರೆ. ಅಲ್ಲದೇ ಕಾರು ಅಡ್ಡಗಟ್ಟಿ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದಾರೆ ಎಂದು ಆನಂದ್ ಗುರೂಜಿ ದೂರಿನಲ್ಲಿ ಆರೋಪಿಸಿದ್ದಾರೆ. ಈ ಬಗ್ಗೆ ಸದ್ಯ ಚಿಕ್ಕಜಾಲ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಹಲವಾರು ಯುಟ್ಯೂಬ್ ಚಾನೆಲ್ಗಳ ಮೂಲಕ ಮಾನಹಾನಿ ಮಾಡಿದ್ದಾರೆ. ಮುಖವಾಡ, ಸಾಮ್ರಾಟ್ ಹೆಸರಿನ ಯೂಟ್ಯೂಬ್ ಚಾನೆಲ್ಗಳಲ್ಲೂ ಚಾರಿತ್ರ್ಯ ತೇಜೋವಧೆ ಮಾಡಿದ್ದಾರೆ ಎಂದು ಆನಂದ ಗುರೂಜಿ ಆರೋಪಿಸಿದ್ದಾರೆ.
ಇಲ್ಲಿ ಯಾವುದು ಸತ್ಯ ಯಾವುದು ಸುಳ್ಳು ಎನ್ನುವುದು ಮಾತ್ರ ಪೊಲೀಸರ ತನಿಖೆಯಿಂದ ಸತ್ಯಾಂಶ ಹೊರ ಬರಬೇಕಿದೆ.?


