Headlines

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಶವವಾಗಿ ಪತ್ತೆ.!

ಅಶ್ವಸೂರ್ಯ/ ಹಾಸನ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದು ಸುದ್ದಿಯಾಗಿದ್ದ ಆರೋಪಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕಲ್ಲಹಳ್ಳಿ ಬಳಿ ಶವವಾಗಿ ಪತ್ತೆಯಾಗಿದ್ದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಸಂಪತ್ ಕುಮಾರ್ ಮೃತ ವ್ಯಕ್ತಿ. 2022ರಲ್ಲಿ ಸಿದ್ದರಾಮಯ್ಯ ಅವರು ಕೊಡಗು ಭೂಕುಸಿತ ಅವಲೋಕನಕ್ಕೆಂದು ಭೇಟಿ ನೀಡಿದ್ದ ಸಂಧರ್ಭದಲ್ಲಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಸಂಪತ್ ಕುಮಾರ್ ಎಂಬಾತ ಮೊಟ್ಟೆ ಎಸೆದಿದ್ದ ಘಟನೆ ನೆಡೆದಿತ್ತು. ಇದೀಗ ಈ ಪ್ರಕರಣದ ಆರೋಪಿ ಎನ್ನಲಾದ ಸಂಪತ್ ಕುಮಾರ್ ನ ಶವ ಹಾಸನದಲ್ಲಿ ಪತ್ತೆಯಾಗಿದ್ದು ಸಾಕಷ್ಟು ಅನುಮಾನಗಳು ಮೂಡಿದ್ದು ಇದು ಸಹಜ ಸಾವೊ ಹತ್ಯೆಯೊ ಎನ್ನುವುದು ಪೊಲೀಸರ ತನಿಖೆಯಿಂದ ಬಯಲಾಗಬೇಕಿದೆ.

ಏಪ್ರಿಲ್ 9ರಂದು ಕೊಡಗಿನ ಕುಶಾಲನಗರದಿಂದ ಸ್ನೇಹಿತನ ಕಾರು ತೆಗೆದುಕೊಂಡು ಹಾಸನಕ್ಕೆ ಬಂದಿದ್ದ. ಏ.10ರಂದು ಸಂಪತ್ ಕುಮಾರ್ ತೆಗೆದುಕೊಂಡು ಹೋಗಿದ್ದ ಕಾರು ಹಾಸನ ಜಿಲ್ಲೆಯ ಸಕಲೇಶಪುರದ ಕಲ್ಲಹಳ್ಳಿಬಳಿ ಪತ್ತೆಯಾಗಿತ್ತು. ಕಾರಿನಲ್ಲಿ ರಕ್ತದ ಕಲೆಗಳು ಇದ್ದವು. ಆದರೆ ಸಂಪತ್ ಸುಳಿವು ಮಾತ್ರ ಸಿಕ್ಕಿರಲಿಲ್ಲ. ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಸಂಪತ್ ಕುಮಾರ್ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಇತ್ತ ಕಾರು ಪತ್ತೆಯಾದ ಬಗ್ಗೆ ಸ್ಥಳೀಯರು ಯಸಳೂರು ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಹೋಗಿ ಪರಿಶೀಲಿಸಿದ್ದರು. ಆದರೆ ಈಗ ಸಂಪತ್ ಕುಮಾರ್ ಮೃತದೇಹ ಕಲ್ಲಹಳ್ಳಿ ಬಳಿ ಪತ್ತೆಯಾಗಿದೆ.
ಮೇಲ್ನೋಟಕ್ಕೆ ಕೊಲೆಯಾಗಿರುವಂತೆ ಕಂಡುಬಂದಿದ್ದು .ಹಂತಕರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದು, ಬಳಿಕ ಶವವನ್ನು ಕಾರಿನಲ್ಲಿ ತಂದು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.ಕುಶಾಲನಗರ ಪೊಲೀಸರ ತನಿಖೆಯಿಂದ ಈ ಹತ್ಯೆಯ ಹಿಂದಿನ ಅಸಲಿ ಸತ್ಯ ಬಯಲಾಗಬೇಕಿದೆ.

Leave a Reply

Your email address will not be published. Required fields are marked *

Optimized by Optimole
error: Content is protected !!