ಗದಗ್: ಮೂರು ಮಕ್ಕಳ ತಾಯಿಯ ಲವ್ವಿ ಡವ್ವಿ, ಪ್ರೇಮಿಯಿಂದಲೇ ಮಟಾಶ್ ಅದ್ಲಾ.!
ASHWASURYA/SHIVAMOGGA
news.ashwasurya.in
ಅಶ್ವಸೂರ್ಯ/ಗದಗ್: ಮೂರು ಮಕ್ಕಳ ತಾಯಿಯ ಲವ್ವಿ ಡವ್ವಿ ಪ್ರೇಮಿಯಿಂದಲೇ ಹತ್ಯೆಯಾದ ಮಹಿಳೆ.!
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ಬಳಿ ಅನಾಮಧೇಯ ಮಹಿಳೆ ಶವವೊಂದು ಪತ್ತೆಯಾಗಿರುವ ಪ್ರಕರಣಕ್ಕೆ ತಿರುವು ಸಿಕ್ಕಿದೆ.ಹತ್ಯೆಯಾದ ಮಹಿಳೆಯ ಮೊಬೈಲ್ ಕಾಲ್ ಲಿಸ್ಟ್ ಹಿಡಿದು ಹಂತಕನ ಬೆನ್ನಟ್ಟಿದ ಪೊಲೀಸರು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕೊಲೆಯಾದ ಮಹಿಳೆ ಮೂರು ಮಕ್ಕಳ ತಾಯಿಯಾಗಿದ್ದು ಮಹಿಳೆಗೆ ಗಂಡನಿದ್ದು ಮತ್ತೊಬ್ಬ ಯುವಕನೊಂದಿಗೆ ಅಕ್ರಮ ಸಂಭಂಧದ ಜೋತೆಗೆ ಪ್ರೇಮ ಪ್ರಣಯದಲ್ಲಿ ಗುಂಗಿನಲ್ಲಿದ್ದಳು.ಯುವಕನೊಂದಿಗಿನ ಅತಿರೇಕದ ಪ್ರೇಮವೇ ಈಕೆ ಕೊಲೆಯಾಗುವ ಮಟ್ಟಕ್ಕೆ ಬಂದು ನಿಂತಿತ್ತು.!
ಅಂದು 2025 ಏಪ್ರಿಲ್ 23 ರಂದು ಸೂರಣಗಿ ಗ್ರಾಮದ ದೊಡ್ಡೂರ ರಸ್ತೆಯ ಬಯಲು ಬಸವೇಶ್ವರ ದೇವಸ್ಥಾನ ಬಳಿ 35ವರ್ಷದ ಮಹಿಳೆ ಅಪರಿಚಿತ ಶವ ಪತ್ತೆಯಾಗಿತ್ತು.! ಗಾಬರಿಯಾದ ಸೂರಣಗಿ ಗ್ರಾಮಸ್ಥರು ತಕ್ಷಣ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಲಕ್ಷ್ಮೇಶ್ವರ ಠಾಣೆಯ ಸಿಪಿಐ ನಾಗರಾಜ್ ಮಾಡಳ್ಳಿ ಮತ್ತು ತಂಡ ಸ್ಥಳ ಪರಿಶೀಲನೆ ಮಾಡಿ ಶವದ ಮೇಲಿನ ಗಾಯ ಬಿದ್ದ ಸ್ಥಿತಿಯನ್ನು ಕಂಡು ಇದು ಸಹಜ ಸಾವಲ್ಲ ಕೊಲೆ ಅನ್ನೋ ಅನುಮಾನ ಪೊಲೀಸರಲ್ಲಿ ಮೂಡಿತ್ತು.
ಪ್ರಕರಣದ ತನಿಖೆ ಚುರುಕುಗೊಳಿಸಿದ ಪೊಲೀಸರಿಗೆ ಕೊಲೆಯಾದ ಮಹಿಳೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ನೇಲೊಗಲ್ ಗ್ರಾಮದ ಲಕ್ಷ್ಮೀ ಇಂಗಳಗಿ ಎನ್ನುವುದು ಗೊತ್ತಾಗಿದೆ. ಆಗ ಮೃತಳ ಸಹೋದರಿ ಅಕ್ಕನ ಸಾವು ಸಹಜವಲ್ಲ ಈಕೆಯ ಕೊಲೆ ಮಾಡಲಾಗಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಳು.! ಸಹೋದರಿ ದೂರಿನ ಮೇರೆಗೆ ತನಿಖೆ ಕೈಗೊಂಡ ಪೊಲೀಸರಿಗೆ ಆಕೆಯ ಮೊಬೈಲ್ ಫೋನ್ನಿಂದ ಸಣ್ಣ ಸುಳಿವು ಸಿಕ್ಕಿತ್ತು. ಅದೇ ಸುಳಿವಿನ ಮೇಲೆ ತನಿಖೆ ನಡೆಸಿದ ಪೊಲೀಸರಿಗೆ ಹಂತಕನ ಸುಳಿವು ಸಿಕ್ಕಿದೆ.

ಯುವಕನಿಗೆ ಹಣಕ್ಕಾಗಿ ಬ್ಲ್ಯಾಕ್ಮೇಲ್
ಕೊಲೆಯಾದ ಲಕ್ಷ್ಮೀಗೆ ಮೂವರು ಮಕ್ಕಳಿದ್ದಾರೆ. ಆದರೆ ಗಂಡನಿಂದ ಲಕ್ಷ್ಮೀ ದೂರವಾಗಿದ್ದಳಂತೆ. ಮಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದಳಂತೆ. ಆ ವೇಳೆಯಲ್ಲಿ ಹಾವೇರಿ ಜಿಲ್ಲೆಯ ಸುನಿಲ್ ಎನ್ನುವ ಹದಿಹರೆಯದ ಯುವಕ ಸ್ನೇಹವಾಗಿತ್ತು. ಇಬ್ಬರ ನಡುವೆ ಪ್ರೀತಿಯಾಗಿದ್ದು ಅದು ದೈಹಿಕ ಸಂಬಂಧ ವರೆಗೆ ತಲುಪಿದೆ 30 ವರ್ಷದ ಸುನೀಲ್ ಮದುವೆ ಮಾಡಲು ಅವರ ಕುಟುಂಬಸ್ಥರು ತಯಾರಿ ನಡೆಸಿದ್ದರು. ಅದೇ ವೇಳೆ ಲಕ್ಷ್ಮೀ 5 ಲಕ್ಷ ಹಣ ಕೊಡಬೇಕು ಎಂದು ಪಟ್ಟು ಹಿಡಿದಿದ್ದಾಳೆ. ಇಲ್ಲವಾದರೆ ನಮ್ಮ ಅನೈತಿಕ ಸಂಬಂಧ ವಿಷಯ ಬಹಿರಂಗ ಮಾಡುತ್ತೇನೆ ಎಂದು ಹೆದರಿಸಿದ್ದಾಳೆ.
ಲಕ್ಷ್ಮೀಯ ಬ್ಲ್ಯಾಕ್ಮೇಲ್ನಿಂದ ಕಂಗಾಲಾದ ಯುವಕ ಸುನೀಲ್, ಗೆಳೆಯರಾದ ಸಿದ್ದಪ್ಪ, ನಟರಾಜ್, ರಮೇಶ್ ಸೇರಿಕೊಂಡು ಆಕೆಯನ್ನು ಕೊಲೆ ಮಾಡಲು ಪ್ಲ್ಯಾನ್ ಮಾಡಿದ್ದಾರೆ. ಅದರಂತೆ ಏಪ್ರಿಲ್ 22ರಂದು ಲಕ್ಷ್ಮೀಯನ್ನು ಕಾರಿನಲ್ಲಿ ಮಂಗಳೂರಿಗೆ ಕರೆದುಕೊಂಡು ಹೋಗುವಾಗ ಕೇಬಲ್ ವೈಯರಿನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾರೆ. ನಂತರ ಮೃತ ದೇಹವನ್ನು ಸೂರಣಗಿ ಬಳಿ ಎಸೆದು ಪರಾರಿಯಾಗಿದ್ದರು. ಪೊಲೀಸರು ಪ್ರಕರಣ ಭೇದಿಸಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಕೃತ್ಯಕ್ಕೆ ಬಳಸಿದ ಕಾರು, ಮೊಬೈಲ್, ಕತ್ತು ಹಿಸುಕಲು ಬಳಸಿದ್ದ ಕೇಬಲ್ ವೈರ್ ವಶಕ್ಕೆ ಪಡೆದು ಆರೋಪಿಗಳಿಗೆ ಜೈಲಿಗೆ ಕಳುಹಿಸಿದ್ದಾರೆ.
ಕಾಮದ ತೆವಲಿಗೆ ಬಿದ್ದ ಯುವಕನೊಬ್ಬ ಮೂರು ಮಕ್ಕಳ ತಾಯಿಯೊಂದಿಗೆ ಪ್ರೀತಿ ಪ್ರೇಮ ಎಂದು ಸುತ್ತಾಡಿ.ಆಕೆಯನ್ನು ದೈಹಿಕವಾಗಿ ಬಳಸಿಕೊಂಡು ಬೆರಬ್ಬೊಳು ಹುಡುಗಿಯ ಜೋತೆಗೆ ಹಸೆಮಣೆ ಏರುವ ಹೊತ್ತಿಗೆ ಸೆರೆಮನೆ ಸೇರಿದ್ದು ಮಾತ್ರ ದುರಂತವೆ ಹೌದು.?


