Big braking News : ಕಾಮಿಡಿ ಕಿಲಾಡಿ ಸ್ಟಾರ್ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು.!
ASHWASURYA/SHIVAMOGGA
news.ashwasurya.in
ಅಶ್ವಸೂರ್ಯ/ಬೆಂಗಳೂರು: ಸಿನಿಮಾ ಬಿಡುಗಡೆ ಮುನ್ನಾ ದಿನವೇ ನಾಯಕ ನಟನ ಮೇಲೆ ಎಫ್ಐಆರ್ ದಾಖಲಾಗಿದೆ.
ಕಾಮಿಡಿ ಕಿಲಾಡಿಗಳು ಸ್ಟಾರ್ ಹಾಗೂ ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣವೊಂದು ದಾಖಲಾಗಿದೆ.
ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ನಟ ಮಡೆನೂರು ಮನು ವಿರುದ್ಧ ಸಹ ಕಲಾವಿದೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ಮಡೆನೂರು ಮನು ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದಾರೆ ನಾಳೆ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಈ ಹೊತ್ತಲ್ಲೇ ನಟನ ಮೇಲೆ ಎಫ್ಐಆರ್ ದಾಖಲಾಗಿದೆ.

ಕಾಮಿಡಿ ಕಿಲಾಡಿಯ ಸಹ ಕಲಾವಿದೆಯಿಂದಲೇ ಅತ್ಯಾಚಾರ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ನಟ ತಲೆಮರೆಸಿಕೊಂಡಿದ್ದಾನೆ. ಆರೋಪಿ ನಟ ಮಡೆನೂರು ಮನುಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.


