ಜೆಸಿಐ ಶಿವಮೊಗ್ಗ ಭಾವನದ ವತಿಯಿಂದ ಬಾಪೂಜಿ ನಗರದ ಕೃಷ್ಣಪ್ಪ ಮಹಿಳಾ ಹಾಸ್ಟೆಲ್ ನ ವಿದ್ಯಾರ್ಥಿಗಳು ಹಾಗೂ ಮಹಿಳೆಯರಿಗಾಗಿ ಗುತ್ತಿ ಮಲ್ನಾಡ್ ಆಸ್ಪತ್ರೆಯ ಸಹಕಾರದಲ್ಲಿ ಆರೋಗ್ಯ ಅರಿವು ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.

ಜೆಸಿಐ ಶಿವಮೊಗ್ಗ ಭಾವನದ ವತಿಯಿಂದ ಬಾಪೂಜಿ ನಗರದ ಕೃಷ್ಣಪ್ಪ ಮಹಿಳಾ ಹಾಸ್ಟೆಲ್ ನ ವಿದ್ಯಾರ್ಥಿಗಳು ಹಾಗೂ ಮಹಿಳೆಯರಿಗಾಗಿ ಗುತ್ತಿ ಮಲ್ನಾಡ್ ಆಸ್ಪತ್ರೆಯ ಸಹಕಾರದಲ್ಲಿ ಆರೋಗ್ಯ ಅರಿವು ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.

ಶಿವಮೊಗ್ಗ ಭಾವನದ ಅಧ್ಯಕ್ಷೆ ಪೂರ್ಣಿಮಾ ಸುನಿಲ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಗುತ್ತಿ ಮಲ್ನಾಡ್ ನ ಡಾಕ್ಟರ್ ರೇಖಾ ಅವರು ಹೆಣ್ಣು ಮಕ್ಕಳು ಹೇಗೆ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಅದರಲ್ಲೂ ಹಾಸ್ಟೆಲ್ ನಲ್ಲಿ ಇರುವ ಹೆಣ್ಣು ಮಕ್ಕಳು ಹೆಚ್ಚಿನ ಶುಚಿತ್ವ ಹಾಗೂ ಆಹಾರದ ಬಗ್ಗೆ ಗಮನ ನೀಡಬೇಕೆಂಬ ಬಗ್ಗೆ ಮಾಹಿತಿಯನ್ನು ನೀಡಿದರು ನಂತರ ಆರೋಗ್ಯ ತಪಾಸಣೆ ನಡೆಸಿ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇರುವವರಿಗೆ ಗುತ್ತಿ ಮಲ್ನಾಡ್ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡುವುದಾಗಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಹಾಸ್ಟೆಲ್ ವಾರ್ಡನ್ ಸೈದಾ ಬಾನು
ಲೇಡಿ ಜೆಸಿ ಶಾರದಾ ಶೇಷಗಿರಿ ಗೌಡ ಕಾರ್ಯದರ್ಶಿ ಕವಿತಾ ಜೋಯಿಸ್ ಉಪಾಧ್ಯಕ್ಷ ಕಲ್ಪನಾ ಸುಧಾಮ ಅವರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

Optimized by Optimole
error: Content is protected !!