ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಕುತೂಹಲ ಮೂಡಿಸಿರುವ ತಡ ರಾತ್ರಿಯ ಮಿಟೀಂಗ್.!
ASHWASURYA/SHIVAMOGGA
news.ashwasurya.in
ಅಶ್ವಸೂರ್ಯ/ಬೆಂಗಳೂರು: ಮಂಗಳವಾರ ತಡ ರಾತ್ರಿ ಬೆಂಗಳೂರಿನಲ್ಲಿ ನಡೆದ ಮೀಟಿಂಗ್ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಸಾಕಷ್ಟು ಚರ್ಚೆಯ ಜೋತೆಗೆ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಅವರ ಜತೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ಮಧ್ಯರಾತ್ರಿ ಸಮಾಲೋಚನೆ ನಡೆಸಿದರು.

ಸಮಾಲೋಚನೆಯ ವಿಷಯ ಬಹಿರಂಗವಾಗಿಲ್ಲ. ಆದರೆ ಫೋಟೋ ಮತ್ತು ವಿಡಿಯೋ ಹೊರಬಿದ್ದಿದ್ದು ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಸಾಧ್ಯತೆ ಎದ್ದು ಕಾಣುತ್ತಿದೆ.

