BREAKINNG NEWS/ ಶಿವಮೊಗ್ಗ: ಪ್ರಿಯಕರನೊಂದಿಗೆ ವಿಷ ಸೇವಿಸಿದ ಮಹಿಳೆ,ಇಬ್ಬರ ಸಾವು.!ಅನಾಥರಾದ ಆಕೆಯ ಇಬ್ಬರು ಮಕ್ಕಳು.?
ASHWASURYA/SHIVAMOGGA
news.ashwasurya.in
ಅಶ್ವಸೂರ್ಯ/ಹೊಸನಗರ: ಹೊಸನಗರ ತಾಲೂಕಿನ ತಮಿಡಿಕೊಪ್ಪ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ.ತನ್ನ ಗಂಡನಿಂದ ದೂರವಾಗಿದ್ದ ಮಹಿಳೆ ತನ್ನ ಪ್ರಿಯಕರನೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಇಬ್ಬರೂ ಗಂಭೀರ ಸ್ಥಿತಿಯಲ್ಲಿದ್ದುದನ್ನು ಕಂಡ ಗ್ರಾಮಸ್ಥರು ಸಚಿನ್ ಮತ್ತು ಸುಜಾತಾಳನ್ನು ಕೂಡಲೇ ಶಿವಮೊಗ್ಗದ ಮೆಗ್ಗಾನ್ ಸರ್ಕಾರಿ ಜಿಲ್ಲಾಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ವಿಷ ಸೇವಿಸಿದ ಇಬ್ಬರೂ ಪ್ರೇಮಿಗಳು ಸಾವನ್ನಪ್ಪಿದ್ದಾರೆ.

ಈ ಪ್ರಕರಣಕ್ಕೆ ಸಂಭಂಧಿಸಿದಂತೆ ನನ್ನ ಸಹೋದರಿ ಸುಜಾತಾಗೆ ಸಚಿನ್ ಎಂಬಾತನೇ ಬಲವಂತವಾಗಿ ವಿಷ ಕುಡಿಸಿದ್ದಾನೆ ಎಂದು ಸಹೋದರಿ ಗೀತಾ ಆರೋಪ ಮಾಡಿದ್ದಾರೆ. ಒಟ್ಟಾರೆಯಾಗಿ ಈ ಹೃದಯವಿದ್ರಾವಕ ಘಟನೆಯಿಂದ ಕುಟುಂಬಸ್ಥರು ಮತ್ತು ಗ್ರಾಮಸ್ಥರು ದುಃಖದಲ್ಲಿ ಮುಳುಗಿದ್ದಾರೆ. ಆದರೆ, ಸುಜಾತಾ ಮಾಡಿದ ತಪ್ಪಿನಿಂದಾಗಿ ಆಕೆಯ ಇಬ್ಬರು ಸಣ್ಣ ಮಕ್ಕಳ ಭವಿಷ್ಯ ಪ್ರಶ್ನೆಯಾಗಿ ಉಳಿದಿದೆ. ಈ ಘಟನೆ ಸಂಬಂಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

