ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭಾರಿ ನೂಕುನುಗ್ಗಲು: 10 ಮಂದಿ ಸಾವು.! ಇನ್ನೂ ಕೇಲವು ಮಂದಿ ಅಸ್ವಸ್ಥ.
ASHWASURYA/SHIVAMOGGA
news.ashwasurya.in
ಅಶ್ವಸೂರ್ಯ/ಬೆಂಗಳೂರು: RCB ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳ ಸಾಗರವೇ ನೆರೆದಿದೆ. ಟ್ರೋಫಿ ಗೆದ್ದ ತಂಡವನ್ನು ಕಣ್ತುಂಬಿಕೊಳ್ಳಲು ನಗರದ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಯುವಕ, ಯುವತಿಯರು ಆಗಮಿಸುತ್ತಿದ್ದು, ಕ್ರೀಡಾಂಗಣದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ.

RCB ಅಭಿಮಾನಿಗಳ ದಂಡೆ ಸಾಗರದಂತೆ
ಚಿನ್ನಸ್ವಾಮಿ ಕ್ರೀಡಾಂಗಣದೇಡೆಗೆ ಹರಿದು ಬರುತ್ತಿದ್ದು ನೂಕುನುಗ್ಗಲಾಗಿ ಕಾಲ್ತುಳಿತದಿಂದ 10 ಮಂದಿ ಸಾವಿನಮನೆ ಸೇರಿದ್ದಾರೆ. ಸಂಭ್ರಮದ ಪಡುಸಾಲೆಯಲ್ಲಿ ಸೂತಕ ಆವರಿಸಿದೆ.
ಸತತ 18 ವರ್ಷಗಳ ನಂತರ ಚೊಚ್ಚಲ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಆರಂಭವಾಗುವ ಮೋದಲೆ ಅಭಿಮಾನಿಗಳ ಸಾವಿನ ಸುದ್ಧಿ ಬೆಂಗಳೂರು ನಗರವನ್ನೇ ತಲ್ಲಣ ಗೋಳಿಸಿದೆ.

ಈ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳ ಸಾಗರವೇ ಹರಿದುಬರುತ್ತಿದ್ದು ಟ್ರೋಫಿ ಗೆದ್ದ ತಂಡವನ್ನು ಕಣ್ತುಂಬಿಕೊಳ್ಳಲು ನಗರದ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಯುವಕ, ಯುವತಿಯರು ಆಗಮಿಸುತ್ತಿದ್ದು, ಕ್ರೀಡಾಂಗಣದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ.
ಈ ವೇಳೆ 18, 19, ಮತ್ತು 20ನೇ ಗೇಟ್ ಓಪನ್ ಆಗುತ್ತಿದ್ದಂತೆ ಅಭಿಮಾನಿಗಳು ಏಕಾಏಕಿ ಒಳನುಗ್ಗಿದ್ದು, ತಳ್ಳಾಟ, ನೂಕುನುಗ್ಗಲು ಉಂಟಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

