ರಾಜು ಕಾಗೆ: ರಾಜ್ಯ ಕಾಂಗ್ರೆಸ್ನಲ್ಲಿ ಶಾಸಕರ ಅಸಮಧಾನ ಜೋರಾಗುತ್ತಿದೆ. ವಸತಿ ಯೋಜನೆಯಡಿ ಮನೆ ಹಂಚಿಕೆಯಲ್ಲಿ ಲಂಚ ಪಡೆದಿರುವ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕರು ಸರ್ಕಾರದ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ರಾಜೀನಾಮೆಯ ಅಸ್ತ್ರ ಪ್ರಯೋಗ ಮಾಡುತ್ತಿದ್ದಾರೆ. ಈ ನಡುವೆಯೇ ಇದೀಗ ರಾಜು ಕಾಗೆ ಅವರು ಇದೆ ಹಾದಿ ಹಿಡಿದು ಅಚ್ಚರಿ ಮೂಡಿಸಿದ್ದಾರೆ.
BREAKING: ತಮ್ಮದೇ ಸರ್ಕಾರದ ವಿರುದ್ಧ ಮತ್ತೋರ್ವ ಕಾಂಗ್ರೆಸ್ ಶಾಸಕ ಅಸಮಾಧಾನ : ಇನ್ನೇರಡು ದಿನದಲ್ಲಿ ರಾಜೀನಾಮೆ ಸುಳಿವು ನೀಡಿದ ರಾಜು ಕಾಗೆ.

news.ashwasurya.in
ಅಶ್ವಸೂರ್ಯ/ಬೆಳಗಾವಿ: ಕಾಂಗ್ರೆಸ್ ನ ಬಿ.ಆರ್.ಪಾಟೀಲ್ ಬಳಿಕ ಇದೀಗ ಶಾಸಕ ರಾಜು ಕಾಗೆ ಕೂಡ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪದಿಸಿದ್ದು, ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯಾಗದಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ರಾಜು ಕಾಗೆ ಅವರು ಬಿ.ಆರ್.ಪಾಟೀಲ್ ಹೇಳಿದ್ದು ಸುಳ್ಳಲ್ಲ ಅದು ಸತ್ಯ ಅವರಪ್ಪನ ಹಾಗಾಗಿದೆ ನನ್ನ ಸ್ಥಿತಿ ಕೂಡ. ನಮ್ಮ ಸರ್ಕಾರದ ಅವಧಿಯಲ್ಲಿ ಯಾವುದೇ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಆಡಳಿತ ವ್ಯವಸ್ಥೆ ಹಾಳಾಗಿದೆ. 25 ಕೋಟಿ ಅನುದಾನ ಬಿಡುಗಡೆಯಾಗಿ ಎರಡು ವರ್ಷ ಕಳೆದರು ಕಾಮಗಾರಿ ಕೆಲಸ ಆರಂಭವಾಗಿಲ್ಲ. ವರ್ಕ್ ಆರ್ಡರ್ ನೀಡುತ್ತಿಲ್ಲ ಎಂದರೆ ಏನರ್ಥ? ಎಂದು ಗುಡುಗಿದರು.
ಇದರಿಂದ ನನ್ನ ಮನಸ್ಸಿಗೆ ತುಂಬಾ ಬೇಸರವಾಗಿದೆ. ನಾನೂ ಸಹ ರಾಜೀನಾಮೆ ನೀಡುವ ಸ್ಥಿತಿ ಬಂದು ನಿಂತಿದ್ದೇನೆ. ಇನ್ನೆರಡು ದಿನಗಳಲ್ಲಿ ಸಿಎಂ ಗೆ ರಾಜೀನಾಮೆ ಕೊಟ್ಟರೂ ಆಶ್ಚರ್ಯವಿಲ್ಲ ಎಂದು ಹೇಳಿದರು.

