ಬಸ್‌ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಂಬಾಕು ನಿಯಂತ್ರಣ : ಕಾನೂನುಗಳನ್ನು ಉಲ್ಲಂಘಿಸುವವರ ವಿರುದ್ಧ ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಸಹಭಾಗಿತ್ವದಲ್ಲಿ ಸೂಕ್ತ ಕ್ರಮ

ಶಿವಮೊಗ್ಗ, ಸೆಪ್ಟೆಂಬರ್‌ 13 : ಇಂದು ಶಿವಮೊಗ್ಗ ನಗರದ ಬಸ್‌ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಂಬಾಕು ನಿಯಂತ್ರಣ ಕಾನೂನುಗಳನ್ನು ಉಲ್ಲಂಘಿಸುವವರ ವಿರುದ್ಧ ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಸಹಭಾಗಿತ್ವದಲ್ಲಿ ದಾಳಿಗಳನ್ನು ಹಮ್ಮಿಕೊಳ್ಳಲಾಯಿತು.
ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಚಂದ್ರಶೇಖರ್‌ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 32 ಪ್ರಕರಣಗಳನ್ನು ದಾಖಲಿಸಿ, 6.000 ರೂ ದಂಡವನ್ನು ಸಂಗ್ರಹಿಸಲಾಯಿತು. ದಾಳಿಯ ಸಂದರ್ಭದಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಪಾ ಕಾಯ್ದೆ ಕುರಿತು ಅರಿವು ಮೂಡಿಸಲಾಯಿತು.
ಈ ಕಾರ್ಯಾಚರಣೆಯಲ್ಲಿ ದೊಡ್ಡಪೇಟೆ ಪೊಲೀಸ್‌ ಠಾಣೆ ಪಿಎಸ್‌ಐ ವಸಂತ್‌, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಹೇಮಂತ್‌ರಾಜ್‌ ಅರಸ್‌, ಸಮಾಜ ಕಾರ್ಯಕರ್ತರಾದ ರವಿರಾಜ್‌, ಕುವೆಂಪು ವಿಶ್ವವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು ಹಾಗೂ ಪೊಲೀಸ್‌ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

ಸುಧೀರ್ ವಿಧಾತ , ಶಿವಮೊಗ್ಗ

Leave a Reply

Your email address will not be published. Required fields are marked *

Optimized by Optimole
error: Content is protected !!