WALK AND RUN 5 KM JOIN US AT DAR GROUND ON 29/6/25 AT 6 AM TO BE ANTI DRUG SOLDIER .

ತಮ್ಮನ ಅಂತ್ಯ ಸಂಸ್ಕಾರಕ್ಕೆ ಬಂದ ಅಕ್ಕನ ಸಾವು.! ವಿಧಿ ನಿನೇಷ್ಟೂ ಕ್ರೂರಿ.!
news.ashwasurya.in
ಅಶ್ವಸೂರ್ಯ/ಶಿವಮೊಗ್ಗ : ತಮ್ಮನ ಅಂತ್ಯ ಸಂಸ್ಕಾರಕ್ಕೆ ಚೆನ್ನೈನಿಂದ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಸಾವಿನ ಮನೆ ಸೇರಿದ್ದಾಳೆ.!
ಮಂಗಳೂರು ನಗರದ ಹೊರವಲಯದ ಪಾವಂಜೆ ಬಳಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ಯುವತಿಗೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ನಗರದ ಬಂಗ್ರಕೂಳೂರು ನಿವಾಸಿ ಶ್ರುತಿ (27) ಮೃತ ಯುವತಿ.!
ಕಂಪ್ಯೂಟರ್ ಎಂಜಿನಿಯರಿಂಗ್ ಮುಗಿಸಿರುವ ಶ್ರುತಿ, ಚೆನ್ನೈನಲ್ಲಿ ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದರು ಮೆಕ್ಯಾನಿಕ್ ಆಗಿದ್ದ ತನ್ನ ಸಹೋದರ ಸುಜಿತ್, ಜೂನ್ 10ರಂದು ಮೃತಪಟ್ಟ ಹಿನ್ನೆಲೆಯಲ್ಲಿ ಅವರು ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲು ಕೆಲಸಕ್ಕೆ ರಜೆ ಹಾಕಿ ಚೆನ್ನೈನಿಂದ ಮನೆಗೆ ಬಂದಿದ್ದಳು.
ಈ ನಡುವೆ ಬ್ಯಾಂಕ್ ಕೆಲಸಕ್ಕೆಂದು ತಂದೆಯೊಂದಿಗೆ ಸ್ಕೂಟರ್ನಲ್ಲಿ ಕಿನ್ನಿಗೋಳಿ ಕಡೆಗೆ ಹೋಗಿ ಕೆಲಸ ಮುಗಿಸಿ ಮತ್ತೆ ಮನೆಯತ್ತ ಹಿಂದಿರುಗುತ್ತಾವೇಳೆ ಮಳೆ ಬಂದ ಹಿನ್ನೆಲೆಯಲ್ಲಿ ಪಾವಂಜೆ ಬಳಿ ಸ್ಕೂಟರ್ ರಸ್ತೆ ಬದಿ ನಿಲ್ಲಿಸಿ, ರೈನ್ ಕೋಟ್ ಹಾಕುತ್ತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಸ್ಕೂಟರ್ ಹಾಗೂ ಅಲ್ಲೇ ನಿಂತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಕಾರು, ಯುವತಿಯ ಸಹಿತ ಎಳೆದೊಯ್ದು ಹೆದ್ದಾರಿ ಬದಿಯಿದ್ದ ಸಿಮೆಂಟ್ ಸ್ಲ್ಯಾಬ್‌ಗೆ ಅಪ್ಪಳಿಸಿದೆ.
ಇದರಿಂದ ಗಂಭೀರ ಗಾಯಗೊಂಡ ಶ್ರುತಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದಾಳೆ. ಈಕೆಯ ಜತೆಗಿದ್ದ ತಂದೆ ಗೋಪಾಲ ಆಚಾರ್ಯ (57) ಕೂಡ ಅಪಘಾತದಲ್ಲಿ ಗಾಯಗೊಂಡಿದ್ದು, ಅವರ ಕಾಲಿನ ಮೂಳೆ ಮುರಿದಿದೆ. ಘಟನೆಯಲ್ಲಿ ಮತ್ತೊಬ್ಬ ಮಹಿಳೆಯೂ ಗಾಯಗೊಂಡಿದ್ದಾರೆ.
ಗೋಪಾಲ ಆಚಾರ್ಯರಿಗೆ ಇಬ್ಬರೇ ಮಕ್ಕಳಿದ್ದು, ಪುತ್ರ 15 ದಿನಗಳ ಹಿಂದಷ್ಟೇ ಮೃತಪಟ್ಟಿದ್ದ. ಆ ನೋವು ಮಾಸುವ ಮುನ್ನವೇ ಪುತ್ರಿಯೂ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾಳೆ. ಅಪಘಾತದ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


