ದೆಹಲಿ ವಿಮಾನ ನಿಲ್ದಾಣದಲ್ಲಿ ತೀರ್ಥಹಳ್ಳಿ ಮೂಲದ ಶಂಕಿತ ಉಗ್ರನ ಬಂಧನ

ಕಿನ್ಯಾದ ನೈರೋಬಿಯಿಂದ ರಾಜಧಾನಿ ದೆಹಲಿ ಆಗಮಿಸಿದ್ದ ಕರ್ನಾಟಕದ ಶಂಕಿತ ಉಗ್ರನನ್ನು ವಿಮಾನ ನಿಲ್ದಾಣದಲ್ಲೇ ಎನ್​​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಶಂಕಿತ ಉಗ್ರನನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಅರಾಫತ್ ಅಲಿ ಎಂದು ಗುರುತಿಸಲಾಗಿದೆ.
2019 ರಲ್ಲಿ ತೀರ್ಥಹಳ್ಳಿ ತೊರೆದು ಬೆಂಗಳೂರಿಗೆ ವಲಸೆ ಹೋಗಿದ್ದ ಎಂದು ಹೇಳಲಾದ ಶಂಕಿತ ಉಗ್ರ ಅರಾಫತ್ ಅಲಿ ಬೆಂಗಳೂರಿನಲ್ಲಿಯೇ ಇಂಜಿನಿಯರಿಂಗ್ ಸೇರಿಕೊಂಡಿದ್ದ ಆತ 2020 ರ ನವಂಬರ್ 27 ರ ಮಂಗಳೂರು ಗೋಡೆ ಬರಹ ಪ್ರಕರಣಕ್ಕೆ ಪ್ರಚೋದನೆ ನೀಡಿದ್ದ ಆರೋಪ ಈತನ ಮೇಲಿತ್ತು….

ದೆಹಲಿ ವಿಮಾನ ನಿಲ್ದಾಣದಲ್ಲಿ ತೀರ್ಥಹಳ್ಳಿ ಮೂಲದ ಶಂಕಿತ ಉಗ್ರನ ಬಂಧನ

ತೀರ್ಥಹಳ್ಳಿ : ಉಗ್ರರನ್ನು ಮಟ್ಟಹಾಕಲು ಹಗಲಿರುಳು ಕಾರ್ಯಚರಣೆಗೆ ಇಳಿದ ಎನ್ಐಎ ತಂಡ ದೆಹಲಿ ಏರ್ ಪೋರ್ಟ್ ನಲ್ಲಿ ತೀರ್ಥಹಳ್ಳಿ ಮೂಲದ ಶಂಕಿತ ಉಗ್ರ ಅರಾಫತ್ ಅಲಿಯನ್ನು ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. 2019 ರಲ್ಲಿ ತೀರ್ಥಹಳ್ಳಿ ತೊರೆದು ಬೆಂಗಳೂರಿಗೆ ವಲಸೆ ಹೋಗಿದ್ದ ಎಂದು ಹೇಳಲಾದ ಶಂಕಿತ ಉಗ್ರ ಅರಾಫತ್ ಅಲಿ ಬೆಂಗಳೂರಿನಲ್ಲಿಯೇ ಇಂಜಿನಿಯರಿಂಗ್ ಸೇರಿಕೊಂಡಿದ್ದ ಆತ 2020 ರ ನವಂಬರ್ 27 ರ ಮಂಗಳೂರು ಗೋಡೆ ಬರಹ ಪ್ರಕರಣಕ್ಕೆ ಪ್ರಚೋದನೆ ನೀಡಿದ್ದ ಆರೋಪ ಈತನ ಮೇಲಿತ್ತು.
ಶಿವಮೊಗ್ಗದಲ್ಲಿ ನೆಡೆದ ಟ್ರಯಲ್ ಬ್ಲಾಸ್ಟ್ ಪ್ರಕರಣದ ಆರೋಪಿಗಳ ನೇರ ಸಂಪರ್ಕ ಹೊಂದಿದ್ದ ಆರಾಫತ್, ಮೊಹಮದ್ ಶಾರೀಖ್ ಹಾಗೂ ಇತರ ಆರೋಪಿಗಳ ಜೊತೆಗೆ ಸಂಪರ್ಕ ಹೊಂದಿದ್ದ ಹಾಗೂ ಮಂಗಳೂರು ಕುಕ್ಕರ್ ಬ್ಲಾಸ್ಟ್ ಹಾಗೂ ಗೋಡೆ ಬರಹಕ್ಕೆ ಪ್ರಚೋದನೆ ನೀಡಿದ್ದನಂತೆ. ತೀರ್ಥಹಳ್ಳಿ ಮೂಲದ ಈತ ಪಟ್ಟಣದ ಇಂದಿರಾನಗರದ ನಿವಾಸಿಯಾಗಿದ್ದಾನೆ.ಈ ಪ್ರಕರಣದ ಜಾಡು ಹಿಡಿದು ಹೊರಟ ಎನ್ಐಎ ತಂಡ
ಈ ವಿಚಾರವಾಗಿ ಈಗಾಗಲೇ ಶಿವಮೊಗ್ಗ ನಗರಕ್ಕೂ ಭೇಟಿ ನೀಡಿದ್ದರು. ಎನ್ಐಎ ತಂಡ ಶಂಕಿತ ಉಗ್ರ ಅರಾಫತ್ ಅಲಿಯನ್ನು ಕೊನೆಗೂ ದೆಹಲಿ ಏರ್ ಪೋರ್ಟ್‌ ನಲ್ಲಿ ಬಂಧಿಸಿದೆ ಈತನ ವಿಚಾತಣೆಯ ನಂತರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ತಂಡ ಮತ್ತೆ ತೀರ್ಥಹಳ್ಳಿ ಮತ್ತು ಶಿವಮೊಗ್ಗದಲ್ಲಿ ಮಾಹಿತಿ ಕಲೆ ಹಾಕುವ ಸಾಧ್ಯತೆ ಇದೆ. ದುಬೈನ ಫರ್ಫ್ಯೂಮ್ ಕಂಪನಿಯೊಂದರಲ್ಲಿ ಕೆಲಸಕ್ಕೆ ಸೇರಿದ್ದ ಅರಾಫತ್ ಅಲಿ ಬಳಿಕ ನಾಪತ್ತೆಯಾಗಿದ್ದ. ಕಳೆದ 2020 ರಿಂದಲೂ ತಲೆಮರೆಸಿಕೊಂಡಿದ್ದ ಅರಾಫತ್ ಇದೀಗ ಕೀನ್ಯಾದ ನೈರೋಬಿಯಿಂದ ದೆಹಲಿಗೆ ಬಂದು ಇಳಿಯುತ್ತಿದ್ದಂತೆ ಈತನ ಜಾಡು ಹಿಡಿದು ಹೊರಟಿದ್ದ ಎನ್ಐಎ ತಂಡಕ್ಕೆ ಈತ ಭಾರತಕ್ಕೆ ಬರುವ ಮಾಹಿತಿ ಮೊದಲೆ ತಲುಪಿತ್ತು.! ವಿಮಾನ ನಿಲ್ದಾಣದಲ್ಲಿ ಈತನ ಬಂಧನಕ್ಕೆ ಬೇಕಾದ ಎಲ್ಲಾ ತಯಾರಿ ಮಾಡಿಕೊಂಡಿದ್ದ ಎನ್ಐಎ ಅಧಿಕಾರಿಗಳು ಆರಾಫತ್ ಅಲಿ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ವಶಕ್ಕೆ ಪಡೆದಿದ್ದಾರೆ.
ಐಸಿಸ್ ಹಾಗೂ ಭಯೋತ್ಪಾದನಾ ಕೃತ್ಯಕ್ಕೆ ಪ್ರಚೋದನೆ ಹಾಗೂ ಹಣದ ಸಹಾಯ ನೀಡುತ್ತಿದ್ದ ಆರೋಪದ ಮೇಲೆ ಆರಾಫತ್ ಆಲಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ಸುಧೀರ್ ವಿಧಾತ ,ಶಿವಮೊಗ್ಗ

Leave a Reply

Your email address will not be published. Required fields are marked *

Optimized by Optimole
error: Content is protected !!