ಆರ್ಯ ಈಡಿಗರ ಸಂಘದ ನೂತನ ವಿದ್ಯಾರ್ಥಿ ನಿಲಯದ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಹಾಗೂ ಎಸ್ ಬಂಗಾರಪ್ಪ ಮತ್ತು ದಿ.ಡಾ.ಪುನೀತ್ ರಾಜ್ ಕುಮಾರ್ ಅವರ ಪುತ್ತಳಿಯ ಆನಾವರಣ ಕಾರ್ಯಕ್ರಮವು ಸೆ.19ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ನೆರವೆರಿಸಲಿದ್ದು ಈ ಕಾರ್ಯಕ್ರಮಕ್ಕೆ ಈಡಿಗರ ಸಂಘದ ಅಧ್ಯಕ್ಷರೂ ಮತ್ತು ಸದಸ್ಯರು ಸರ್ವರನ್ನೂ ಆಮಂತ್ರಿಸಿದ್ದಾರೆ…
ತೀರ್ಥಹಳ್ಳಿ: ಆರ್ಯ ಈಡಿಗರ ಸಂಘದ ನೂತನ ವಿದ್ಯಾರ್ಥಿ ನಿಲಯ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ಹಾಗೂ ಎಸ್ ಬಂಗಾರಪ್ಪ ಮತ್ತು ದಿ.ಡಾ.ಪುನೀತ್ ರಾಜ್ ಕುಮಾರ್ ಅವರ ಪುತ್ತಳಿಯ ಆನಾವರಣ ಕಾರ್ಯಕ್ರಮವು ಸೆಪ್ಟೆಂಬರ್ 19ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ನೆರವೆರಿಸಲಿದ್ದು ಈ ಕಾರ್ಯಕ್ರಮಕ್ಕೆ ಸರ್ವರನ್ನೂ ಈಡಿಗರ ಸಂಘದ ಅಧ್ಯಕ್ಷರಾದ ಮಟ್ಟಿನ ಮನೆ ರಾಮಚಂದ್ರ ಸ್ವಾಗತಿಸಿದ್ದಾರೆ.
ತೀರ್ಥಹಳ್ಳಿ ಪಟ್ಟಣದ ಕೋಳಿಕಾಲು ಗುಡ್ಡದಲ್ಲಿರುವ ಸಂಘದ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಎರಡು ಕೋಟಿ ರೂಪಾಯಿ ಮೊತ್ತದ ವೆಚ್ಚದಲ್ಲಿ ನೂತನ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ.ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಬ್ರಹ್ಮಶ್ರೀ ನಾರಾಯಣ ಗುರು ಮಹಾ ಸಂಸ್ಥಾನ ಮಠದ ಶ್ರೀ ಶ್ರೀ ಶ್ರೀ ರೇಣುಕಾನಂದ ಸ್ವಾಮೀಜಿ
ವಹಿಸಲಿದ್ದಾರೆ.ನೂತನ ಕಟ್ಟಡದ ಉದ್ಘಾಟನೆಯನ್ನು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ನೆರವೆರಿಸಲಿದ್ದು ಕಾರ್ಯಕ್ರಮ ಉದ್ಘಾಟನೆಯನ್ನು ಸಂಸದ ಬಿ. ವೈ ರಾಘವೇಂದ್ರ ಮಾಡಲಿದ್ದಾರೆ. ನೂತನ ಕಚೇರಿ ಉದ್ಘಾಟನೆಯನ್ನು ಶಾಸಕರಾದ ಅರಗ ಜ್ಞಾನೇಂದ್ರರವರು ಮಾಡಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈಡಿಗ ಸಮುದಾಯದ ನಾಯಕ, ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಮತ್ತು ಪುನೀತ್ ರಾಜ್ ಕುಮಾರ್ ಅವರ ಪುತ್ತಳಿಯನ್ನು ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿಗಳಾದ ಎಸ್. ರಾಮಪ್ಪನವರು ಹಾಗೂ ಮಾಜಿ ಸಭಾಧ್ಯಕ್ಷರು ಹಿರಿಯ ರಾಜಕಾರಣಿಗಳಾದ ಕಾಗೋಡು ತಿಮ್ಮಪ್ಪನವರು ಅನಾವರಣಗೊಳಿಸಲಿದ್ದಾರೆ.
ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಹಾಗೂ ಶಿರಸಿ – ಸಿದ್ದಾಪುರ ಕ್ಷೇತ್ರದ ಶಾಸಕರಾದ ಭೀಮಣ್ಣ ನಾಯಕ್, ಆರ್ಯ ಈಡಿಗರ ಸಂಘದ ರಾಜ್ಯಾಧ್ಯಕ್ಷರಾದ ಡಾ. ತಿಮ್ಮೇಗೌಡನವರು ಹಾಗೂ ನಾರಾಯಣ ಸ್ವಾಮಿ ಗ್ರೂಪ್ ಚೇರ್ಮನ್ ಸುಧಾಕರ್ ಅವರನ್ನು ಸನ್ಮಾನಿಸಲಾಗುತ್ತದೆ ಮತ್ತು ಕಿಮ್ಮನೆ ರತ್ನಾಕರ್, ಆರ್ ಎಂ ಮಂಜುನಾಥ್ ಗೌಡ್ರು ಹಾಗೂ ನಿವೃತ್ತ ಪೊಲೀಸ್ ಅಧಿಕ್ಷಕರಾದ ಎಂ.ಜಿ ಸುಬ್ರಮಣ್ಯ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸರ್ವರೂ ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕಾಗಿ ಎಂದರು
ಈ ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ರಾಘವೇಂದ್ರ ಮುಡುಬ, ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಚಿಪ್ಪಿನಕೊಡಿಗೆ, ನಿರ್ದೇಶಕರಾದ ಕವಿರಾಜ್, ಡಿ ಲಕ್ಷಣ್ ಮುಂಡಿಗೆ ಮನೆ, ಎಂ ಪಿ ಚಂದ್ರಶೇಖರ್ ಮರಹಳ್ಳಿ, ಶ್ರೀಧರಮೂರ್ತಿ, ಹೊದಲ ಶಿವು, ನಾಗರಾಜ್ ಕುರುವಳ್ಳಿ, ಗುರು ಕಮ್ಮರಡಿ, ವಿನಂತಿ ಹಾಗೂ ಶಿವಾನಂದ ಕರ್ಕಿ ಸೇರಿ ಹಲವರು ಉಪಸ್ಥಿತರಿದ್ದರು.
ಸುಧೀರ್ ವಿಧಾತ, ಶಿವಮೊಗ್ಗ