
ಶಿವಮೊಗ್ಗ : ಖೈದಿಗೆ ಹೊಟ್ಟೆ ನೋವು – ಆಪರೇಷನ್ ಮಾಡಿದಾಗ ಸಿಕ್ಕಿದಾದ್ರು ಏನು.?
news.ashwasurya.in
ಅಶ್ವಸೂರ್ಯ/ ಶಿವಮೊಗ್ಗ: ಶಿವಮೊಗ್ಗ ನಗರದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿಯೊಬ್ಬನಿಗೆ ಜೋರಾಗಿ ಹೊಟ್ಟೆ ನೋವು ಶುರುವಾಗಿ.ಕೇಳಿದ್ದಕ್ಕೆ ಆತ ಜೈಲಿನ ವೈದ್ಯರ ಬಳಿ ನಾನು ಕಲ್ಲು ನುಂಗಿದ್ದೇನೆ ಎಂದು ಹೇಳಿದ್ದ ತಕ್ಷಣವೆ ಆತನಿಗೆ ಶಸ್ತ್ರ ಚಿಕಿತ್ಸೆ ಮಾಡಿದಾಗ ಒಮ್ಮೆ ವೈದ್ಯರೆ ಗಾಬರಿಯಾಗಿದ್ದಾರೆ.ಕಾರಣ ಆತನ ಹೊಟ್ಟೆಯಲ್ಲಿ ಪತ್ತೆಯಾಗಿದ್ದು ಮೊಬೈಲ್ ಫೋನ್.! ಇತನ ಹೆಸರು
ದೌಲತ್ ಅಲಿಯಾಸ್ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ, ಮೂರು ಇಂಚು ಉದ್ದದ ಮೊಬೈಲ್ ಕೀ ಪ್ಯಾಡ್ ಫೋನ್ ಪತ್ತೆಯಾಗಿದೆ. ಪ್ರಕರಣವೊಂದರಲ್ಲಿ ದೌಲತ್‌ಗೆ ಶಿವಮೊಗ್ಗದ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಬಳಿಕ ಈತನನ್ನು ಜೈಲಿಗೆ ಕಳುಹಿಸಲಾಗಿತ್ತು. ಜೂ.24 ರಂದು ಜೈಲಿನ ಆಸ್ಪತ್ರೆಗೆ ಬಂದು, ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ಗುಂಡ ತಿಳಿಸಿದ್ದ.

ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದರು. ಎಕ್ಸ್ ರೇ ಮಾಡಿದಾಗ ದೌಲತ್‌ನ ಹೊಟ್ಟೆಯಲ್ಲಿ ವಸ್ತುವೊಂದು ಇರುವುದು ಗೊತ್ತಾಗಿತ್ತು. ಶಸ್ತ್ರಚಿಕಿತ್ಸೆ ನಡೆಸಿದಾಗ ಮೊಬೈಲ್ ಫೋನ್ ಪತ್ತೆಯಾಗಿದೆ. ನಿಷೇಧವಿದ್ದರೂ ಜೈಲಿನೊಳಗೆ ಮೊಬೈಲ್ ಫೋನ್ ತಲುಪಿರುವ ಕುರಿತು ತನಿಖೆ ನಡೆಸುವಂತೆ ಕೇಂದ್ರ ಕಾರಾಗೃಹದ ಅಧೀಕ್ಷಕ ರಂಗನಾಥ್.ಪಿ ಅವರು ತುಂಗಾ ನಗರ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ತನಿಖೆ ನಡೆಯುತ್ತಿದೆ


