Headlines

ಮೂಡುಬಿದಿರೆ: ಇಬ್ಬರು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ.! ಬೆಂಗಳೂರಿನಲ್ಲಿ ಆರೋಪಿಗಳ ಬಂಧನ

ಮೂಡುಬಿದಿರೆ: ಇಬ್ಬರು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ.! ಬೆಂಗಳೂರಿನಲ್ಲಿ ಆರೋಪಿಗಳ ಬಂಧನ

news.ashwasurya.in

ಅಶ್ವಸೂರ್ಯ/ಮಂಗಳೂರು : ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ಸೇರಿದಂತೆ ವಿದ್ಯಾರ್ಥಿನಿಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ, ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ.

ವಿಧ್ಯಾರ್ಥಿನಿಗೆ ನೋಟ್ಸ್ ನೀಡುವ ನೆಪದಲ್ಲಿ ಅತ್ಯಾಚಾರ : ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿಯ ಜೋತೆಗೆ ಆತ್ಮೀಯತೆ ಬೆಳಸಿ ಹತ್ತಿರವಾಗಿದ್ದನೆ. ಬಳಿಕ ಹಂತ ಹಂತವಾಗಿ ಆಕೆಗೆ ಚಾಟ್ ಮಾಡುವುದು, ನೋಟ್ಸ್ ನೀಡುವುದು ಮಾಡಿದ್ದನಂತೆ. ಹಾಗೆಯೇ ವಿದ್ಯಾರ್ಥಿನಿ ಜತೆ ಸಲುಗೆ ಬೆಳೆಸಿಕೊಂಡಿದ್ದ ಉಪನ್ಯಾಸಕ, ಆಕೆ ಬೆಂಗಳೂರಿಗೆ ಬಂದ ನಂತರವೂ ಚಾಟ್ ಮಾಡುವುದನ್ನು ನೋಟ್ಸ್ ನೀಡುವುದನ್ನು ಮುಂದುವರಿಸಿದ್ದನಂತೆ. ಅದೇ ನೆಪದಲ್ಲಿ ಮಾರತಹಳ್ಳಿಯ ಗೆಳೆಯನ ರೂಮ್​​ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಅಷ್ಟೇ ಅಲ್ಲದೆ, ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದನಂತೆ.!

ಬ್ಲ್ಯಾಕ್​ಮೇಲ್, ಮತ್ತೆ ಅತ್ಯಾಚಾರ – ಉಪನ್ಯಾಸಕ ನರೇಂದ್ರ ದುಷ್ಕೃತ್ಯ ಎಸಗಿದ ಬಳಿಕ ಬಯಾಲಜಿ ಉಪನ್ಯಾಸಕ ಸಂದೀಪ್ ಕೂಡ ಅ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದನಂತೆ. ಆ ಸಂದರ್ಭದಲ್ಲಿ ಆಕೆ ವಿರೋಧ ವ್ಯಕ್ತಪಡಿಸಿದ್ದಳು. ಆಗ, ನೀನು ನರೇಂದ್ರನ ಜೊತೆಗೆ ಇರುವ ಫೋಟೊ ಹಾಗೂ ವಿಡಿಯೋ ತನ್ನ ಬಳಿ ಇದೆ. ಅದನ್ನು ಕಾಲೇಜಿನಲ್ಲಿ ಎಲ್ಲರಿಗೂ ಗೊತ್ತಾಗುವಂತೆ ಮಾಡುವೆ’ ಎಂದು ಬ್ಲ್ಯಾಕ್​ಮೇಲ್ ಮಾಡಿದ್ದ ಸಂದೀಪ್, ಅತ್ಯಾಚಾರ ಎಸಗಿದ್ದ.
ವಿದ್ಯಾರ್ಥಿನಿ ಮೇಲೆ ಸಂದೀಪ್ ಅತ್ಯಾಚಾರ ಎಸಗಿದ ರೂಮ್ ಅನೂಪ್​ ಎಂಬಾತನದ್ದಾಗಿತ್ತು. ಘಟನೆ ಬೆನ್ನಲ್ಲೇ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದ ಅನೂಪ್, ‘ನೀನು ನನ್ನ ರೂಮ್​ಗೆ ಬಂದಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ನನ್ನ ರೂಮ್​​ನಲ್ಲಿ ಸಿಸಿಟಿವಿ ಇದೆ’ ಎಂದು ಬೆದರಿಕೆ ಹಾಕಿದ್ದ. ಬಳಿಕ ಆತನಿಂದಲೂ ಯುವತಿ ಮೇಲೆ ಅತ್ಯಾಚಾರ ನಡೆದಿದೆ.

ಉಪನ್ಯಾಸಕರನ್ನು ಎದುರಿಸಲು ಸಾಧ್ಯವಾಗದೆ ಆರಂಭದಲ್ಲಿ ಸುಮ್ಮನಿದ್ದ ವಿದ್ಯಾರ್ಥಿನಿ, ನಂತರ ಸಮಸ್ಯೆ ಹೆಚ್ಚಾಗಲು ಆರಂಭವಾದಾಗ ಕೃತ್ಯದ ಬಗ್ಗೆ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಪೊಷಕರು ಆಕೆಯನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಪೊಲೀಸರಿಗೆ ದೂರು ಕೊಡಿಸಿದ್ದಾರೆ. ಸದ್ಯ ಮೂವರು ಆರೋಪಿಗಳನ್ನು ಬಂಧಿಸಿರುವ ಮಾರತಹಳ್ಳಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಈ ಉಪನ್ಯಾಸಕರು ಈ ಹಿಂದೆಯೂ ಕೆಲವು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಮಾಡಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿರುವ ಅನುಮಾನ ವ್ಯಕ್ತವಾಗಿದ್ದು, ಈ ಕುರಿತು ತನಿಖೆ ಮುಂದುವರೆದಿದೆ…

Leave a Reply

Your email address will not be published. Required fields are marked *

Optimized by Optimole
error: Content is protected !!