Headlines

UAE :ಗಂಡನ ಮನೆಯವರ ಕಿರುಕುಳ .! ಮಗುವನ್ನು ಕೊಂದು.! ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ.!

ಅಶ್ವಸೂರ್ಯ/ಯುಎಇ : ಗಂಡ ಗಂಡನ‌ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಬೆಸತ್ತು ಹೆತ್ತ ಮಗುವನ್ನು ಕೊಲೆ ಮಾಡಿ ತಾನು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನ ಶಾರ್ಜಾದಲ್ಲಿ ಕೇರಳದ ಮಹಿಳೆಯೋರ್ವರು ತನ್ನ ಪುಟ್ಟ ಮಗುವನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.! ನನ್ನ ಮಗಳಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡಲಾಗಿದೆ ಎಂದು ಮಹಿಳೆಯ ತಾಯಿ ಕೇರಳದಲ್ಲಿ ದೂರು ದಾಖಲಿಸಿದ್ದಾರೆ.

ಜುಲೈ 8ರಂದು ಶಾರ್ಜಾದ ಅಲ್ ನಹ್ದಾದಲ್ಲಿ ವಿಪಂಜಿಕಾ ಮಣಿ(32) ತನ್ನ ಒಂದೂವರೆ ವರ್ಷದ ಮಗಳು ವೈಭವಿಯೊಂದಿಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.! ಮಗುವಿನ ಕೊಲೆ ಬಳಿಕ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಈ ಕುರಿತು ಕೊಲ್ಲಂ ಜಿಲ್ಲೆಯ ಕುಂದರ ಪೊಲೀಸ್ ಠಾಣೆಯಲ್ಲಿ ವಿಪಂಜಿಕಾ ಪತಿ ನಿಧೀಶ್, ಆತನ ಸಹೋದರಿ ನೀತು ಮತ್ತು ಆತನ ತಂದೆಯ ವಿರುದ್ಧ ದೂರು ದಾಖಲಿಸಲಾಗಿದೆ. ವರದಕ್ಷಿಣೆಗಾಗಿ ವಿಪಂಜಿಕಾಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಕಿರುಕುಳ ನೀಡಲಾಗಿದೆ. ಆಕೆಯ ಕೂದಲನ್ನು ಕತ್ತರಿಸಿ ಚಿತ್ರಹಿಂಸೆ ನೀಡಲಾಗಿದೆ. ಪತಿಯ ವಿವಾಹೇತರ ಸಂಬಂಧಗಳನ್ನು ಪ್ರಶ್ನಿಸಿದ್ದಕ್ಕೆ ವಿಚ್ಛೇದನ ನೋಟಿಸ್ ಕಳುಹಿಸಲಾಗಿತ್ತು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 85, ಸೆಕ್ಷನ್ 108 ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ-1961ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆತ್ಮಹತ್ಯೆಗೆ ಮೊದಲು ವಿಪಂಜಿಕಾ ಅನುಭವಿಸಿದ ಚಿತ್ರಹಿಂಸೆ ಬಗ್ಗೆ ಆಕೆ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ ಎಂದು ಹೇಳಲಾಗಿದ್ದು ಇನ್ನಷ್ಟೇ ತಿಳಿದು ಬರಬೇಕಿದೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ವಿಪಂಜಿಕಾ ತಾಯಿ, ʼಮಗಳು ಅನುಭವಿಸಿದ ಕಿರುಕುಳದ ಬಗ್ಗೆ ನಮಗೆ ಮೊದಲು ತಿಳಿದಿರಲಿಲ್ಲ. ಆರೋಪಿಗಳಿಗೆ ಸೂಕ್ತ ಶಿಕ್ಷೆ ನೀಡಬೇಕು. ಆಗ ಮಾತ್ರ ನನ್ನ ಮಗಳ ಆತ್ಮಕ್ಕೆ ಶಾಂತಿ ದೊರೆಯುತ್ತದೆʼ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

Optimized by Optimole
error: Content is protected !!