Headlines

ರೌಡಿಶೀಟರ್ ಶಿವಪ್ರಕಾಶ್ ಕೊಲೆ ಪ್ರಕರಣ – ಮಾಜಿ ಸಚಿವ ಬೈರತಿ ಬಸವರಾಜ್ A5 ಆರೋಪಿ.

ರೌಡಿಶೀಟರ್ ಶಿವಪ್ರಕಾಶ್ ಕೊಲೆ ಪ್ರಕರಣ – ಮಾಜಿ ಸಚಿವ ಬೈರತಿ ಬಸವರಾಜ್ A5 ಆರೋಪಿ.

ಅಶ್ವಸೂರ್ಯ/ಬೆಂಗಳೂರು: ಭಾರತಿನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕೆಆರ್‌ ಪುರಂನ ಬಿಜೆಪಿ ಶಾಸಕ ಬೈರತಿ ಬಸವರಾಜ್ ಹೆಸರು ತಳುಕು ಹಾಕಿಕೊಂಡಿದೆ.

ಕೊಲೆ ಸಂಬಂಧಿಸಿದಂತೆ ಶಿವಪ್ರಕಾಶ್‌ ತಾಯಿ ವಿಜಯಕ್ಷ್ಮಿ ಭಾರತಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಬೈರತಿ ಬಸವರಾಜ್‌ ಎ5 ಆರೋಪಿಯಾಗಿದ್ದು ಜಗದೀಶ್ ಎ1 , ಕಿರಣ್ ಎ2 ವಿಮಲ್ ಎ3, ಅನಿಲ್ ಎ4 ಆರೋಪಿಗಳಾಗಿದ್ದಾರೆ.
ಹತ್ಯೆಯಾದ ರೌಡಿಶೀಟರ್ ತಾಯಿ ನೀಡಿದ ದೂರಿನಲ್ಲಿ ಏನಿದೆ.?
ಕಿತ್ತಕನೂರು ಜಾಗದ ವಿಚಾರವಾಗಿ ಕೊಲೆ ಮಾಡಲಾಗಿದೆ. ಬಿಳಿ ಬಣ್ಣದ ಸ್ಕಾರ್ಪಿಯೋದಲ್ಲಿ 8 ರಿಂದ 9 ಮಂದಿ ಬಂದು ಲಾಂಗು ಮಚ್ಚಿನಿಂದ ಹೊಡೆದಿದ್ದಾರೆ. ಕೊಲೆ ಮಾಡಿರುವ ಆರೋಪಿಗಳು ಹಲವು ಬಾರಿ ನನ್ನ ಮಗನಿಗೆ ಬೆದರಿಕೆ ಹಾಕಿದ್ದರು. ಮಾಜಿ ಸಚಿವ ಬೈರತಿ ಬಸವರಾಜ್ , ಜಗದೀಶ್ ಮತ್ತು ಇತರರಿಂದ ನನಗೆ ಪ್ರಾಣ ಬೆದರಿಕೆಯಿದೆ ಎಂದು ಹಲವು ಬಾರಿ ಮಗ ಹೇಳಿದ್ದ. ಬಸವರಾಜ್ ಕುಮ್ಮಕ್ಕಿನಿಂದಲೇ ಕೊಲೆ ನಡೆದಿದೆ ಎಂದು ಆರೋಪಿಸಿದ್ದಾರೆ.
ದೂರು ನೀಡಿದ್ದ ಶಿವಪ್ರಕಾಶ್‌ :
ಈ ಫೆಬ್ರವರಿ 21 ರಂದು ಶಿವಪ್ರಕಾಶ್‌ ಜಗದೀಶ್‌ ಮತ್ತು ಇತರರ ವಿರುದ್ಧ ಭಾರತಿ ನಗರ ಠಾಣೆಯಲ್ಲಿ ದೂರು ನೀಡಿದ್ದ. ಕಿತ್ತಕನೂರು ಬಳಿ ನಾನು ಜಾಗವನ್ನು ಖರೀದಿಸಿದ್ದೆ. ಈ ಜಾಗವನ್ನು ಮಾರಾಟ ಮಾಡಬೇಕೆಂದು ಜಗದೀಶ್‌ ಮತ್ತು ಇತರರು ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ದೂರು ನೀಡಿದ್ದ. ಈ ಸಂಬಂಧ ಜಗದೀಶ್‌ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು ಎಂದು ತಿಳಿದುಬಂದಿದೆ.

ಪ್ರಕರಣದ ಹಿನ್ನೆಲೆ :
ಬೆಂಗಳೂರಿನ ಭಾರತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯ ಹಲಸೂರು ಬಳಿಯ ವಾರ್ ಮೆಮೋರಿಯಲ್ ಸರ್ಕಲ್‌ನಲ್ಲಿ ನಡೆದಿದೆ.
ಶಿವಕುಮಾರ್ @ ಬಿಕ್ಲು ಶಿವ (40) ಹತ್ಯೆಯಾದ ರೌಡಿಶೀಟರ್ , ಸ್ಥಳಕ್ಕೆ ಭಾರತಿನಗರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ರೌಡಿಶೀಟರ್ ಶಿವು ಮನೆ ಹೊರಗಡೆ ನಿಂತಿದ್ದಾಗ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮಾರಕಾಸ್ತ್ರಳಿಂದ ಕೊಚ್ಚಿ ಕೊಲೆ ಮಾಡಿ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಕಾರಿನಲ್ಲಿ ಬಂದ ನಾಲ್ಕೈದು ಮಂದಿ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ.
ಸ್ಥಳಕ್ಕೆ ಭಾರತೀನಗರ ಪೊಲೀಸರು, ಡಿಸಿಪಿ ಡಿ.ದೇವರಾಜ್, ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು. ಆರೋಪಿಗಳ ಪತ್ಯೆಗೆ ಪೊಲೀಸರ ವಿಷೇಶ ತಂಡ ರಚಿಸಿ ಬಂಧನಕ್ಕಾಗಿ ಭಲೇ ಬಿಸಿದ್ದಾರೆ ಎಂದು ತಿಳಿದುಬಂದಿದೆ..

Leave a Reply

Your email address will not be published. Required fields are marked *

Optimized by Optimole
error: Content is protected !!