ಬೆಂಗಳೂರು : ರೌಡಿಶೀಟರ್ ಶಿವು ಹತ್ಯೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ: ಉದ್ದೇಶ ಪೂರ್ವಕವಾಗಿ ನನ್ನ ಮೇಲೆ FIR ದಾಖಲಿಸಲಾಗಿದೆ: ಮಾಜಿ ಸಚಿವ ಬೈರತಿ ಬಸವರಾಜ್.
news.ashwasurya.in
ಅಶ್ವಸೂರ್ಯ/ಬೆಂಗಳೂರು : ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಹತ್ಯೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಆತ ಯಾರು.? ನನಗೆ ಅವನ ಪರಿಚಯವೆ ಇಲ್ಲ ಆತ ಯಾರು ಅಂತ ಗೊತ್ತಿಲ್ಲ ಎಂದು ಬಿಜೆಪಿ ಮಾಜಿ ಸಚಿವ ಬೈರತಿ ಬಸವರಾಜ್ ತಿಳಿಸಿದ್ದಾರೆ.

ರೌಡಿ ಶೀಟರ್ ಕೊಲೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ವಿಚಾರವಾಗಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಬೈರತಿ ಬಸವರಾಜ್, ಕೊಲೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಉದ್ದೇಶ ಪೂರ್ವಕವಾಗಿ ನನ್ನ ವಿರುದ್ಧ ಆರೋಪ ಮಾಡಿ ಪ್ರಕರಣ ದಾಖಲಿಸಲಾಗಿದೆ ಎಂದರು.
ಸುಖಾಸುಮ್ಮನೇ ನನ್ನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ನಾನು ಕಾನೂನು ಹೋರಾಟ ಮಾಡುತ್ತೇನೆ. ಯಾರೋ ದೂರು ನೀಡಿದ್ದಾರೆ ಎಂದ ಮಾತ್ರಕ್ಕೆ ಎಫ್ ಐ ಆರ್ ದಾಖಲಿಸಬಹುದಾ? ಎಫ್‌ಐಆರ್ ದಾಖಲಿಸುವಾಗ ನನಗೆ ಮಾಹಿತಿ ಕೂಡ ನೀಡಿಲ್ಲ. ಈ ನಿಟ್ಟಿನಲ್ಲಿ ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದಿದ್ದಾರೆ.

