Headlines

ಧರ್ಮಸ್ಥಳ: ತಲೆಬುರುಡೆ ಕೇಸ್‌ನಲ್ಲಿ ಎಸ್‌ಐಟಿ ತನಿಖೆ ಬಗ್ಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಪತ್ರಿಕಾ ಪ್ರಕಟಣೆ.

ಧರ್ಮಸ್ಥಳ: ತಲೆಬುರುಡೆ ಕೇಸ್‌ನಲ್ಲಿ ಎಸ್‌ಐಟಿ ತನಿಖೆ ಬಗ್ಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಪತ್ರಿಕಾ ಪ್ರಕಟಣೆ.

news.ashwasurya. in

ಅಶ್ವಸೂರ್ಯ/ಧರ್ಮಸ್ಥಳ: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು ಹಾಗೂ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಈ ನಡುವೆ ಧರ್ಮಸ್ಥಳ ತಲೆಬುರುಡೆ ಪ್ರಕರಣಕ್ಕೆ ಅತಿದೊಡ್ಡ ತಿರುವು ಸಿಕ್ಕಿದ್ದು, ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಸದ್ಯ ಎಸ‌ಐಟಿ ನೀಡಿರುವುದರ ಕುರಿತು ಧರ್ಮಸ್ಥಳ ದೇವಸ್ಥಾನದಿಂದ ಪ್ರಕಟಣೆ ಹೊರಡಿಸಲಾಗಿದೆ.
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವು ಪ್ರಕರಣ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕ್ಷೇತ್ರ ವಕ್ತಾರರಾದ ಕೆ.ಪಾರ್ಶ್ವನಾಥ ಜೈನ್ ಅವರಿಂದ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಪ್ರಕಟಣೆಯಲ್ಲಿ, ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ “ಹಲವಾರು ಶವಗಳನ್ನು ಹೂತಿದ್ದೆ” ಎಂಬ ದೂರು ಪ್ರಕರಣವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ತರ್ಕವಾತರ್ಕಗಳು, ಊಹಾಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿದೆ.
ಈ ಘಟನೆಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ ನಡೆಯಬೇಕೆಂಬ ನಮ್ಮ ಹಾಗೂ ಸಾರ್ವಜನಿಕರ ನಿರೀಕ್ಷೆಯ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಗೆ ರಾಜ್ಯ ಸರ್ಕಾರ ಹಸ್ತಾಂತರಿಸಿದೆ ಎಂಬುದು ತಿಳಿದು ಬಂದಿದೆ.

ಸರ್ಕಾರದ ಈ ನಿಲುವು ಉತ್ತಮವಾಗಿದೆ
ಸಮಾಜದ ನೈತಿಕತೆ ಹಾಗೂ ಶ್ರದ್ಧೆಗೆ ನಿಲುಕುವ ಬಲವಾದ ಆಧಾರವೆಂದರೆ “ಸತ್ಯ” ಆದ್ದರಿಂದ, ಈ ಪ್ರಕರಣದಲ್ಲಿ ಎಸ್‌ಐಟಿ ತನಿಖಾ ತಂಡ ಸತ್ಯಾಂಶವನ್ನು ಅತಿ ಶೀಘ್ರವಾಗಿ ಪ್ರಾಮಾಣಿಕ ತನಿಖೆ ನಡೆಸಿ ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂಬುದು ನಮ್ಮ ಆಶಯ ಎಂದು ವಕ್ತಾರರಾದ ಕೆ. ಪಾರ್ಶ್ವನಾಥ್ ಜೈನ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Optimized by Optimole
error: Content is protected !!