ಧರ್ಮಸ್ಥಳ : ಧರ್ಮಸ್ಥಳ ಕೇಲವು ಶವ ಹೂತಿರುವ ಪ್ರಕರಣದ ತನಿಖೆಗೆ 20 ಮಂದಿ ಹೆಚ್ಚುವರಿ ಪೊಲೀಸರ ನಿಯೋಜನೆ.!ನಿಯೋಜನೆಗೊಂಡ ಅಧಿಕಾರಿಗಳು ಯಾರು.? ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ತನಿಖೆ.
news.ashwasurya.in
ಅಶ್ವಸೂರ್ಯ/ ಬೆಂಗಳೂರು : ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದಿದೆ ಎನ್ನಲಾಗುತ್ತಿರುವ ಅಸಹಜ ಸಾವುಗಳು ಹಾಗೂ ಶವ ಹೂತಿರುವುದರ ಕುರಿತು ತನಿಖೆಗೆ ಭಾರೀ ಒತ್ತಾಯ ಕೇಳಿ ಬಂದಿದ್ದು. ಈ ಹಿನ್ನೆಲೆ ಸೂಕ್ತ ತನಿಖೆಗೆಂದು ಸಿಎಂ ಸಿದ್ದರಾಮಯ್ಯನವರು ಸರ್ಕಾರದ 4 ಹಿರಿಯ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ಎಸ್‌ಐಟಿ (SIT) ತಂಡವನ್ನ ರಚಿಸಿದೆ. ಇದೀಗ ಈ ತಂಡದ ಜೊತೆಗಿರುವ 20 ಅಧಿಕಾರಿಗಳು ಯಾರೆಂದು ಮಾಹಿತಿ ನೀಡಿದೆ.

ಎಸ್ಐಟಿ ತಂಡಕ್ಕೆ ಹೆಚ್ಚುವರಿಯಾಗಿ 20 ಮಂದಿ ಅಧಿಕಾರಿ, ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡಕ್ಕೆ 20 ಮಂದಿಯ ನಿಯೋಜನೆಯಾಗಿದೆ. ಎಂ.ಎನ್.ಅನುಚೇತ್, ಸಿಎಆರ್ ಕೇಂದ್ರದ ಉಪ ಪೊಲೀಸ್ ಆಯುಕ್ತರಾದ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ತಂಡವನ್ನು ರಾಜ್ಯ ಡಿಜಿಪಿ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.
ತನಿಖಾ ತಂಡದ ಇತರೆ ಸಿಬ್ಬಂದಿಗಳು
ಮಂಗಳೂರು ಡಿಸಿಆರ್‌ಇ ಎಸ್‌ಪಿ ಸಿ.ಎ ಸೈಮನ್, ಉಡುಪಿ ಸಿಎಎನ್ ಠಾಣೆಯ ಡಿಎಸ್‌ಪಿ ಎ.ಸಿ ಲೋಕೇಶ್, ದಕ್ಷಿಣ ಕನ್ನಡ ಸಿಇಎನ್ ಠಾಣೆಯ ಡಿಎಸ್‌ಪಿ ಮಂಜುನಾಥ್, ಸಿಎಸ್‌ಪಿ ಪೊಲೀಸ್ ಇನ್‌ಸ್ಪೆಕ್ಟರ್ ಮಂಜುನಾಥ್, ಸಿಎಸ್‌ಪಿ ಇನ್ಸ್‌ಪೆಕ್ಟರ್ ಇಸಿ ಸಂಪತ್, ಸಿಎಸ್‌ಪಿ ಪೊಲೀಸ್ ಇನ್ಸ್ಪೆಕ್ಟರ್ ಕೆ.ಕುಸುಮಧರ್ ತಂಡದಲ್ಲಿದ್ದಾರೆ.
ಉತ್ತರ ಕನ್ನಡದ ಶಿರಸಿ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ ಗೌಡ, ಉಡುಪಿ, ಬೈಂದೂರು ಇನ್ಸ್ಪೆಕ್ಟರ್ ಪಿ.ಡಿ ಸವಿತ್ರು ತೇಜ್, ಸಿಎಸ್‌ಪಿ ಸಬ್‌ಇನ್ಸ್ಪೆಕ್ಟರ್ ಕೋಕಿಲ ನಾಯಕ್, ಸಿಎಸ್‌ಪಿ ಸಬ್‌ಇನ್ಸ್ಪೆಕ್ಟರ್ ವೈಲೆಟ್ ಫೆಮಿನಾ, ಸಿಎಸ್‌ಪಿ ಸಬ್‌ಇನ್ಸ್‌ಪೆಕ್ಟರ್ ಶಿವ ಶಂಕರ್, ಉತ್ತರ ಕನ್ನಡ, ಶಿರಸಿ ಎನ್.ಎಂ. ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಾಜ್‌ಕುಮಾರ್ ಉಕ್ಕಳ್ಳಿ, ಉತ್ತರ ಕನ್ನಡ ಆಂಕೋಲ ಪೊಲೀಸ್ ಠಾಣೆಯ ಸಬ್‌ಇನ್ಸ್ಪೆಕ್ಟರ್ ಆರ್.ಸುಹಾಸ್ ಇದ್ದಾರೆ.
ಉತ್ತರ ಕನ್ನಡ ಮುಂಡಗೋಡು ಸಬ್‌ಇನ್ಸ್ಪೆಕ್ಟರ್ ವಿನೋದ್ ಎಸ್. ಕಾಳಪ್ಪನವರ್, ಮಂಗಳೂರು ಮೆಸ್ಕಾಂ ಸಬ್‌ಇನ್ಸ್ಪೆಕ್ಟರ್ ಜೆ.ಗುಣಪಾಲ್, ಉಡುಪಿ ನಗರ ಪೊಲೀಸ್ ಠಾಣೆಯ ಎಎಸ್‌ಐ ಸುಭಾಷ್ ಕಾಮತ್, ಉಡುಪಿ ಕಾಪು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಹರೀಶ್‌ಬಾಬು, ಉಡುಪಿ ಮಲ್ಪೆ ಸರ್ಕಲ್ ಕಚೇರಿಯ ಹೆಡ್‌ಕಾನ್‌ಸ್ಟೆಬಲ್ ಪ್ರಕಾಶ್, ಉಡುಪಿ ಕುಂದಾಪುರ ನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ನಾಗರಾಜ್ ಮತ್ತು ಚಿಕ್ಕಮಗಳೂರಿನ ಎಫ್‌ಎಂಎಸ್ ಹೆಡ್‌ಕಾನ್‌ಸ್ಟೆಬಲ್ ದೇವರಾಜ್ ಅವರನ್ನು ನಿಯೋಜನೆ ಮಾಡಲಾಗಿದೆ.


