
ರಾಮನಗರ:ವಿಷ ಕುಡಿದು ಪತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಗಂಡನನ್ನೇ ಕೊಲೆ ಮಾಡಿಸಿದ ಗ್ರಾಮ ಪಂಚಾಯತಿ ಸದಸ್ಯೆ.!
news.ashwasurya.in
ಅಶ್ವಸೂರ್ಯ/ರಾಮನಗರ: ವಿಷ ಕುಡಿದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಪೊಲೀಸರ ತನಿಖೆಯಿಂದ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ತನಿಖೆಯಲ್ಲಿ ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂದು ತಿಳಿದು ಬಂದಿದ್ದು, ಹೆಂಡತಿಯ ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಗಂಡನನ್ನೇ ಸುಪಾರಿ ಕೊಟ್ಟು ಗ್ರಾ.ಪಂ ಸದಸ್ಯೆ ಕೊಲೆ ಮಾಡಿಸಿರುವುದು ಬೆಳಕಿಗೆ ಬಂದಿದೆ.
ಹೌದು, ಕಳೆದ ಜೂ. 24ರಂದು ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರದೊಡ್ಡಿ ಗ್ರಾಮದಲ್ಲಿ ಗ್ರಾ.ಪಂ ಸದಸ್ಯೆ ಚಂದ್ರಕಲಾ ಅವರ ಪತಿ ಲೋಕೇಶ್ (45) ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಲೋಕೇಶ್ ಶವದ ಬಳಿ ವಿಷದ ಬಾಟಲಿ ಇಟ್ಟು. ಸೂಸೈಡ್ ಎಂದು ಬಿಂಬಿಸಲಾಗಿತ್ತು. ಈ ಸಂಬಂಧ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಬಳಿಕ ಚಂದ್ರಕಲಾ ತಾನೇ ಸುದ್ದಿಗೋಷ್ಠಿ ನಡೆಸಿ, ಪತಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಳು.

ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಚಂದ್ರಕಲಾ ಫೋನ್‌ನಿಂದ ಆಕೆಯ ಅನೈತಿಕ ಸಂಬಂಧದ ಮಹತ್ವದ ಸುಳಿವು ಸಿಕ್ಕಿತ್ತು. ಮೃತ ವ್ಯಕ್ತಿ ಲೋಕೇಶನ ಹೆಂಡತಿ ಚಂದ್ರಕಲಾನಿಗೆ
ಯೋಗೇಶ್ ಎಂಬಾತನೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಇದಕ್ಕೆ ಪತಿ ಅಡ್ಡಿಯಾಗಿದ್ದ ಹಿನ್ನೆಲೆಯಲ್ಲಿ ಪ್ರಿಯಕರನ ಜೊತೆ ಸೇರಿ ಗಂಡ ಕೊಲೆಗೆ ಸ್ಕೆಚ್ ಹಾಕಿದ್ದಳು. ಬೆಂಗಳೂರಿನಿಂದ ನಾಲ್ವರು ಸುಫಾರಿ ಕಿಲ್ಲರ್‌ಗಳಿಗೆ ಹಣ ಕೊಟ್ಟ ಈ ಮಹಿಳೆ ಪತಿ ಲೋಕೇಶನ ಕೊಲೆಗೆ ಸುಫಾರಿ ಕೊಟ್ಟು ಕೊಲೆ ಮಾಡಿಸಿರುವುದು ತನಿಖೆ ವೇಳೆ ಬಯಲಾಗಿದೆ.
ಸದ್ಯ ಎಂ.ಕೆ.ದೊಡ್ಡಿ ಪೊಲೀಸರು ಗ್ರಾ.ಪಂ ಸದಸ್ಯೆ ಚಂದ್ರಕಲಾಳನ್ನ ಬಂಧಿಸಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.


