
ಧರ್ಮಸ್ಥಳ : ಎಸ್ಐಟಿ ಯಿಂದ ತಲೆಬುರುಡೆ ದೊರೆತ ಸ್ಥಳದ ಸ್ಥಳ ಮಹಜರು ಪ್ರಕ್ರಿಯೆ ಆರಂಭ.
news.ashwasurya.in

ಅಶ್ವಸೂರ್ಯ/ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿಯ ಹೇಳಿದ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ತಂಡ ಇಂದು ಧರ್ಮಸ್ಥಳದಲ್ಲಿ ಆತ ಹೇಳಿದ ಜಾಗಗಳ ಸ್ಥಳ ಮಹಜರು ಆರಂಭಿಸಿದೆ .

ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಅನುಚೇತ್, ಮತ್ತು ಎಸ್ಪಿ ಸಿ.ಎ.ಸೈಮನ್ ಬೆಳ್ತಂಗಡಿ ಎಸ್.ಐ.ಟಿ. ಕಚೇರಿಗೆ ಮುಂಜಾನೆಯೇ ಆಗಮಿಸಿದ್ದರು. ದೂರುದಾರ ಬೆಳಗ್ಗೆ 11 ಗಂಟೆಗೆ ಕಚೇರಿಗೆ ಹಾಜರಾಗಿದ್ದಾನೆ.
ಕೆಲವು ತಾಸು ಮಾತುಕತೆ ನಡೆಸಿದ ಬಳಿಕ ದಾಖಲೆ ಪಡೆದು ದೂರುದಾರನ ಸಹಿ ಹಾಕಿ ಬಳಿಕ ಬಿಗಿ ಭದ್ರತೆಯಲ್ಲಿ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಆಗಮಿಸಿದರು. ಅರಣ್ಯ ಇಲಾಖೆಯ ಜಾಗಕ್ಕೆ ಸೇರಿದ ಸ್ಥಳದಲ್ಲಿ ತಲೆ ಬರುಡೆ ಅಗೆದಿರುವ ಮಾಹಿತಿಯಿದ್ದು, ಅದೇ ಜಾಗದಲ್ಲಿ ಮಹಜರು ನಡೆಸಲಾಯಿತು.



