Headlines

ಇಂದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ತೀರ್ಪು ಪ್ರಕಟ.

ಇಂದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ತೀರ್ಪು ಪ್ರಕಟ.

news.ashwasurya.in

ಅಶ್ವಸೂರ್ಯ/ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಕೆಆರ್ ನಗರ ಮೂಲದ ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಯ್ದಿರಿಸಿದ ತೀರ್ಪು ಪ್ರಕಟಿಸಲಿದೆ.
ಪ್ರಜ್ವಲ್ ರೇವಣ್ಣ ತಪ್ಪಿತಸ್ಥ ಎಂದು ಸಾಬೀತಾದಲ್ಲಿ ಜೈಲು ಶಿಕ್ಷೆ ಖಚಿತವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 18ರಂದು ವಾದ ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಇಂದು ತೀರ್ಪು ಪ್ರಕಟಿಸಲಿದ್ದಾರೆ.
ಜೈಲು ಅಧಿಕಾರಿಗಳು ತೀರ್ಪು ಪ್ರಕಟಿಸುವ ವೇಳೆ ಆರೋಪಿ ಪ್ರಜ್ವಲ್ ರೇವಣ್ಣರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದಡಿ ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕು ಪ್ರಕರಣ ದಾಖಲಾಗಿವೆ. ಇವುಗಳಲ್ಲಿ ಸಿಐಡಿ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣ ಸಂಬಂಧ ಸಿಐಡಿ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದರು. ಪ್ರಜ್ವಲ್ ಪ್ರಕರಣದಲ್ಲಿ ಪ್ರಕಟವಾಗುತ್ತಿರುವ ಮೊದಲ ತೀರ್ಪು ಇದಾಗಿದೆ.

Leave a Reply

Your email address will not be published. Required fields are marked *

Optimized by Optimole
error: Content is protected !!