ಆನೇಕಲ್: | ಟ್ಯೂಷನ್‌ಗೆ ಹೋಗುತ್ತಿದ್ದ ಬಾಲಕನ ಅಪಹರಸಿ ಹತ್ಯೆಮಾಡಿದ ಹಂತಕರು.!

news.ashwasurya.in

ಆನೇಕಲ್ನಲ್ಲಿ 5 ಲಕ್ಷ ರೂಪಾಯಿ ಹಣಕ್ಕೆ ಸಹಾಯಕ ಪ್ರಾಧ್ಯಾಪಕನಿಗೆ ಬೇಡಿಕೆ ಇಟ್ಟಿದ್ದ ಅಪಹರಣಕಾರರು.!ಹಣ ತಲುಪುವ ಮೊದಲೇ ಬಾಲಕನನ್ನು ಹತ್ಯೆ ಮಾಡದ ಹಂತಕರು.!
ಅಶ್ವಸೂರ್ಯ/ಬೆಂಗಳೂರು : ಟ್ಯೂಷನ್‌ಗೆ ಹೋಗುತಿದ್ದ ಬಾಲಕನನ್ನು ದುಷ್ಕರ್ಮಿಗಳು ಗ್ಯಾಂಗ್ ಅಪಹರಣ ಮಾಡಿ ಬಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆನೇಕಲ್ ನಿಂದ ವರದಿಯಾಗಿದೆ.
13 ವರ್ಷದ ನಿಶ್ಚಿತ್ ಹತ್ಯೆಯಾದ ಬಾಲಕ ಎಂದು ತಿಳಿದುಬಂದಿದೆ. ಬುಧವಾರ ರಾತ್ರಿ ಅರಕೆರೆ ಶಾಂತಿನಿಕೇತನ ಬಡಾವಣೆ ಬಳಿ ಟ್ಯೂಷನ್‌ನಿಂದ ವಾಪಸ್ ಮನೆಗೆ ಬರುತ್ತಿದ್ದ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿದ್ದರು.
ಬಾಲಕನ ತಂದೆ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿದ್ದರಿಂದ ಅಪಹರಣಕಾರರು ಬಾಲಕನ ತಂದೆಗೆ ಕರೆ ಮಾಡಿ ನಿಮ್ಮ ಮಗನನ್ನು ಕಿಡ್ನ್ಯಾಪ್ ಮಾಡಿದ್ದೇವೆ ನಮಗೆ 5 ಲಕ್ಷ ರೂಪಾಯಿ ಹಣ ಕೊಟ್ಟರೆ ನಿಮ್ಮ ಮಗನನ್ನು ಬಿಡುತ್ತೇವೆ ಎಂದು ಡಿಮ್ಯಾಂಡ್ ಮಾಡಿದ್ದರಂತೆ.! ಅಪಹರಣಕಾರರ ಕಡೆಯಿಂದ ಫೋನ್ ಬರುತ್ತಿದ್ದಹಾಗೆ ಬಾಲಕ ಪೋಷಕರು ಹುಳಿಮಾವು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು.
ದೀರು ದಾಖಲಿಸಿಕೊಂಡ ಪೊಲೀಸರು ತಕ್ಷಣವೇ ಅಪಹರಣಕಾರರಿಗಾಗಿ ಹುಡುಕಾಟ ಆರಂಭಿಸಿದ್ದರು.

ಪೊಲೀಸರು ಲೊಕೇಶನ್ ಟ್ರೇಸ್ ಮಾಡಿ ಕಾರ್ಯಚರಣೆಗೆ ಇಳಿದಿದ್ದರು. ಮತ್ತೊಂದೆಡೆ 5 ಲಕ್ಷ ರೂಪಾಯಿ ಹಣವನ್ನು ಕೈಯಲ್ಲಿ ಹಿಡಿದುಕೊಂಡು ಪೋಷಕರು ಕಾದು ಕುಳಿತ್ತಿದ್ದರು.
ಆದರೆ ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಕಗ್ಗಲೀಪುರ ರಸ್ತೆಯ ನಿರ್ಜನ ಪ್ರದೇಶದಲ್ಲಿ ಬಾಲಕನ ಮೃತದೇಹ ಸುಟ್ಟ ರೀತಿಯಲ್ಲಿ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ್ ಹಾಗೂ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ ಬಾಬಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಹುಳಿಮಾವು ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.



