ಚೈತ್ರಾ ಕುಂದಾಪುರ , ಅಭಿನವ ಹಾಲಾಶ್ರೀ
ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮೂರನೇ ಆರೋಪಿ ‘ಅಭಿನವ ಹಾಲಶ್ರೀ’ ಯನ್ನು ಕೊನೆಗೂ ಬಂಧಿಸಿದ್ದಾರೆ.
ಹೇಗಿತ್ತು ಕಾರ್ಯಾಚರಣೆ..? ಹಾಲಶ್ರೀ ಇರುವುದನ್ನು ಸುಳಿವು ನೀಡಿದ್ದು ಯಾರು..?
ತಲೆಮರೆಸಿಕೊಂಡಿದ್ದ ಹಾಲಶ್ರೀ ಸ್ವಾಮೀಜಿ ಕಡೆಯವರು ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಪೊಲೀಸರು ಹಾಲಶ್ರೀ ಕಾರು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೆಲವು ಮಾಹಿತಿ ಗೊತ್ತಾಗಿದೆ. ಚಾಲಕನ ಫೋನ್ ಕರೆ ಮೇಲೆ ಹದ್ದಿನ ಕಣ್ಣಿಟ್ಟಿದ್ದ ಸಿಸಿಬಿ ಪೊಲೀಸರು ಬಂದ ಕರೆಗಳ ಆಧಾರದಲ್ಲಿ ಸ್ವಾಮೀಜಿ ಅವಿತಿರುವ ಸ್ಥಳವನ್ನು ಕಲೆ ಹಾಕಲಾಯಿತು. ಸ್ವಾಮೀಜಿ ಇದ್ದ ಲೋಕೇಶನ್ ಕಲೆಹಾಕಿದ ಸಿಸಿಬಿ ಪೊಲೀಸರು ಚಲಿಸುತ್ತಿದ್ದ ರೈಲಿನಲ್ಲೇ ಸ್ವಾಮೀಜಿಯನ್ನು ಬಂಧಿಸಿದ್ದಾರೆ.
ಸಿಸಿಬಿ ಮೂರು ತಂಡ ಸ್ವಾಮೀಜಿ ಬಂಧನಕ್ಕೆ ಬಲೆ ಬೀಸಿತ್ತು. ಆಗಾಗ ಸ್ವಾಮೀಜಿ ಸ್ಥಳ ಬದಲಾಯಿಸುತ್ತಿದ್ದರಿಂದ ಸ್ವಾಮೀಜಿ ಬಂಧನ ತಡವಾಯಿತು ಎಂದು ಹೇಳಲಾಗಿದೆ. ಒಡಿಶಾದ ಕಟಕ್, ಆ ನಂತರ ಬಿಹಾರಕ್ಕೆ ಹೋಗಿ ತಲೆ ಮರೆಸಿಕೊಳ್ಳುವ ಪ್ಲ್ಯಾನ್ ಮಾಡಿದ್ದರು ಎನ್ನಲಾಗಿದೆ.
ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಎಂಬುವವರಿಗೆ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ಬರೋಬ್ಬರಿ 5 ಕೋಟಿ ವಂಚಿಸಿತ್ತು. ಕಬಾಬ್ ಮಾರುವ ವ್ಯಕ್ತಿ, ಸಲೂನ್ ಮೇಕಪ್ ಮ್ಯಾನ್ ಹಾಗೂ ಇನ್ನೋರ್ವನಿಗೆ ಆರ್.ಎಸ್.ಎಸ್ ಮುಖಂಡನ ವೇಷ, ಬಿಜೆಪಿ ಕೇಂದ್ರ ನಾಯಕರ ವೇಷ ತೊಡಿಸಿ ನಾಟಕವಾಡಲು ರಂಗತಾಲೀಮು ನಡೆಸಿ ಉದ್ಯಮಿಯನ್ನು ವಂಚಿಸಿದ್ದರು.
ಬಗೆದಷ್ಟು ಬಯಲಾಗುತ್ತಿದೆ ಚೈತ್ರ ಕುಂದಾಪುರ ದೋಖಾ ಯಾತ್ರೆ ಮನೆ ಹಾಗೂ ಕಾರು ಬೆಲೆ ಎಷ್ಟು ಗೊತ್ತಾ, ಅಂಧ ಭಕ್ತರ ನೆಚ್ಚಿನ ಚೈತ್ರಳಾ ಬಂಡವಾಳ ಬಯಲು
ಬಗೆದಷ್ಟು ಬಯಲಾಗುತ್ತಿದೆ ಚೈತ್ರ ಕುಂದಾಪುರ ದೋಖಾ ಯಾತ್ರೆ ಮನೆ ಹಾಗೂ ಕಾರು ಬೆಲೆ ಎಷ್ಟು ಗೊತ್ತಾ, ಅಂಧ ಭಕ್ತರ ನೆಚ್ಚಿನ ಚೈತ್ರಳ ಬಂಡವಾಳ ಬಯಲು
ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂಪಾಯಿ ಪಡೆದು ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ವಂಚಿಸಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಹಿಂದೂಪರ ಸಂಘಟನೆಯ ವಾಗ್ಮಿ ಚೈತ್ರಾ ಕುಂದಾಪುರ ಬಂಡವಾಳ ಒಂದೊಂದಾಗಿಯೇ ಬಹಿರಂಗವಾಗುತ್ತಿದೆ. ಆಕೆ ಆಪ್ತನ ಹೆಸರಲ್ಲಿ ಸಹಕಾರಿ ಬ್ಯಾಂಕ್‌ನಲ್ಲಿ ಇಟ್ಟಿದ್ದ 65 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, 40 ಲಕ್ಷ ರೂಪಾಯಿ ಠೇವಣಿ ಇಟ್ಟಿರುವುದು ಪತ್ತೆಯಾಗಿದೆ.
ಜೊತೆಗೆ 1.08 ಕೋಟಿ ರೂಪಾಯಿ ಆಸ್ತಿ-ಪಾಸ್ತಿ ದಾಖಲೆಗಳು ಕೂಡ ಬೆಂಗಳೂರಿನ ಸಿಸಿಬಿ ಪೊಲೀಸರ ಕೈಸೇರಿವೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಬೈಂದೂರು, ಕುಂದಾಪುರ, ಬ್ರಹ್ಮಾವರ ಮತ್ತು ಉಡುಪಿಗೆ ಭೇಟಿ ನೀಡಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಮತ್ತು ಆಕೆಯ ಆಪ್ತರ ಆಸ್ತಿ, ಬ್ಯಾಂಕ್ ಖಾತೆಗಳನ್ನು ಜಾಲಾಡುತ್ತಿದ್ದು, ಈ ವೇಳೆ ಬೇನಾಮಿ ಹೆಸರಲ್ಲಿರುವ ಒಂದಷ್ಟು ಆಸ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ಸದ್ಯ ಬಂಧನದಲ್ಲಿರುವ ಪ್ರಕರಣದ ಆರೋಪಿಗಳಲ್ಲೊಬ್ಬನಾದ ಶ್ರೀಕಾಂತ್‌ನ ಬಾಯ್ಬಿಡಿಸಿದ ಸಿಸಿಬಿ ಪೊಲೀಸರು ಆತನನ್ನು ಬೆಂಗಳೂರಿನಿಂದ ಉಪ್ಪೂರಿಗೆ ಕರೆತಂದು ಆಸ್ತಿ-ಪಾಸ್ತಿ ದಾಖಲೆ ಪರಿಶೀಲಿಸಿದ್ದಾರೆ. ಉಪ್ಪೂರಿನ ಶ್ರೀರಾಮ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯಲ್ಲಿ ಶ್ರೀಕಾಂತ್ ಹೆಸರಿನಲ್ಲಿ ಚೈತ್ರಾ ಇಟ್ಟಿದ್ದ 40 ಲಕ್ಷ ಠೇವಣಿ ಮತ್ತು 65 ಲಕ್ಷದ ರೂಪಾಯಿ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಜೊತೆಗೆ ಈ ವೇಳೆ ಚೈತ್ರಾಗೆ ಸೇರಿದ್ದೆನ್ನಲಾದ 1.08 ಕೋಟಿ ರೂಪಾಯಿ ಆಸ್ತಿ-ಪಾಸ್ತಿ ದಾಖಲೆಗಳು ಕೂಡ ಬೆಂಗಳೂರಿನ ಸಿಸಿಬಿ ಪೊಲೀಸರ ಕೈಸೇರಿದೆ ಎಂದು ಹೇಳಲಾಗುತ್ತಿದೆ. ನಿಜವಾದ ಒಡತಿ ಚೈತ್ರಾ ಕುಂದಾಪುರ ಆದರೂ ಗೆಳೆಯ ಶ್ರೀಕಾಂತ್ ಹೆಸರಿನಲ್ಲಿ ಮಾಡಿದ ಬೇನಾಮಿ ಆಸ್ತಿ ಇದಾಗಿತ್ತು ಎನ್ನಲಾಗ್ತಿದೆ.ಉದ್ಯಮಿ ಗೋವಿಂದ ಪೂಜಾರಿಯಿಂದ ಬಂದಿದ್ದ ಹಣದಲ್ಲಿ ಸಾಕಷ್ಟು ಹಣವನ್ನು ಚೈತ್ರಾ ಜಮೀನು, ಮನೆ ನಿರ್ಮಾಣದಲ್ಲಿ ಹೂಡಿಕೆ ಮಾಡಿರುವುದು ಬೆಳಕಿಗೆ ಬಂದಿದೆ.
ಕುಂದಾಪುರದಲ್ಲಿರುವ ಆಕೆಯ ಹಳೆಯ ಮನೆಯ ಪಕ್ಕದಲ್ಲಿ ಚೈತ್ರಾ ಭೂಮಿ ಖರೀದಿಸಿದ್ದು, ಅಲ್ಲಿ ಮಹಡಿ ಮನೆಯೊಂದನ್ನು ಕಟ್ಟಿದ್ದಾರೆ. ಇದೇ ಮನೆಯಲ್ಲಿ ಚೈತ್ರಾ ಮತ್ತು ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಗಗನ್ ಕಡೂರು ಮತ್ತು ಶ್ರೀಕಾಂತ್ ಸೇರಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಕೊಟ್ಟಿದ್ದ 3 ಕೋಟಿ ರೂಪಾಯಿಗಳನ್ನು ಹಂಚಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಶ್ರೀಕಾಂತ್ ಕೂಡ ತನ್ನ ಪಾಲಿಗೆ ಬಂದಿದ್ದ ಹಣದಲ್ಲಿ ಕಾರ್ಕಳದಲ್ಲಿ ಜಮೀನು ಖರೀದಿಸಿ ಮನೆ ಕಟ್ಟಲಾರಂಭಿಸಿದ್ದು ನಿರ್ಮಾಣ ಹಂತದಲ್ಲಿರುವ ಮಹಡಿ ಮನೆಯನ್ನು ಪೊಲೀಸರು ಇದೀಗ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ
ಸುಧೀರ್ ವಿಧಾತ , ಶಿವಮೊಗ್ಗ