Headlines

ಕಾರವಾರ: ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಸ್ಯ ನಟ ಚಂದ್ರಶೇಖರ್ ಸಿದ್ಧಿ ಆತ್ಮಹತ್ಯೆಗೆ ಶರಣು.!

ಕಾರವಾರ: ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಸ್ಯ ನಟ ಚಂದ್ರಶೇಖರ್ ಸಿದ್ಧಿ
ಆತ್ಮಹತ್ಯೆಗೆ ಶರಣು.!

news.ashwasurya.in

ಅಶ್ವಸೂರ್ಯ/ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಮನಳ್ಳಿಯ ಸಿದ್ದಿ ಜನಾಂಗದ ಬಡ ಯುವಕ ಚಂದ್ರಶೇಖರ್ ಸಿದ್ಧಿ ಅವರು ವರದಿಗಳ ಪ್ರಕಾರ ಇತ್ತೀಚೆಗೆ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಮನಳ್ಳಿಯ ಸಿದ್ದಿ ಜನಾಂಗದ ಯುವಕನಾಗುದ್ದ ಚಂದ್ರುಶೇಖರ್ ಸಿದ್ದಿ ಜೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ಜನಪ್ರಿಯ ಶೋನಲ್ಲಿ ಭಾಗವಹಿಸಿ ಸಾಕಷ್ಟು ಜನಪ್ರಿಯತೆಯನ್ನು ಗಳಿಸಿ ತನ್ನದೆಯಾದ ಅಭಿಮಾನಿಗಳ ಬಳಗವನ್ನು ಹೊಂದಿದ್ದರು.

ನಿನಾಸಂ’ನಲ್ಲಿ ಅಭಿನಯದ ತರಬೇತಿ ಪಡೆದಿದ್ದ ಚಂದ್ರಶೇಖರ್ ಸಿದ್ದಿ ಕೆಲವು ಧಾರವಾಹಿಗಳಲ್ಲಿ ಕೂಡ ನಟಿಸಿದ್ದರು ಇನ್ನೂ ಇತ್ತೀಚೆಗೆ ಇವರಿಗೆ ಅವಕಾಶಗಳು ಹೆಚ್ಚು ಸಿಗದೇ ಕೂಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ. ಪತ್ನಿ ಜೊತೆ ಮನೆಯೊಂದಕ್ಕೆ ಕೆಲಸಕ್ಕಾಗಿ ತೆರಳಿದಾಗ ಅರಣ್ಯಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಊರಲ್ಲಿ ನಾಟಕ ಗಳಲ್ಲಿ ನಟಿಸಿ ಹೆಸರು ಮಾಡಿದ್ದ ಚಂದ್ರಶೇಖರ್ ಸಿದ್ದಿ ಇಂದು ನಮ್ಮೊಂದಿಗೆ ಇಲ್ಲ “ಹಳ್ಳಿ ಹುಡುಗರ ಪ್ಯಾಟೆ ಲೈಫ್” ರಿಯಾಲಿಟಿ ಶೋನಲ್ಲಿ ಭಾಗವಹಿಸಿ ಗೆದ್ದು ಬಿಗಿದ ರಾಜೇಶ ಒಂದೆರಡು ಚಿತ್ರಗಳಲ್ಲಿ ಅಭಿನಯಿಸಿ ನಂತರ ಖಿನ್ನತೆಗೆ ಒಳಗಾಗಿ ಮನೆಯ ಮಹಡಿಯಿಂದ ಬಿದ್ದು ಸಾವಿನ ಮನೆ ಸೇರಿದ್ದರು..ಈಗ “ಕಾಮಿಡಿ ಕಿಲಾಡಿಗಳು” ಜನಪ್ರಿಯ ಟಿವಿ ಶೋನಲ್ಲಿ ಅಭಿನಯಿಸಿದ ಇನ್ನೊಂದು ಜೀವ ಚಂದ್ರಶೇಖರ್ ಸಿದ್ದಿ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿ ಬಲಿಯಾಗಿದ್ದಾನೆ …

Leave a Reply

Your email address will not be published. Required fields are marked *

Optimized by Optimole
error: Content is protected !!