ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ: ಯೂಟೂಬರ್‌ಗಳ ಮೇಲೆ ಸ್ಥಳೀಯರಿಂದ ಹಲ್ಲೆ.! ಪೊಲೀಸರಿಂದ ಲಾಠಿ ಚಾರ್ಜ್.!
ಸ್ಥಳದಲ್ಲಿ ಬಿಗ್ ಬಾಸ್ ಖ್ಯಾತಿಯ ರಜತ್ ಅವರನ್ನು ನೋಡಿದ ಯೂಟ್ಯೂಬರ್‌ಗಳು ರಜತ್ ಅವರ ಬೈಟ್ ತೆಗೆದುಕೊಳ್ಳುಲು ಮುಂದಾಗಿದ್ದಾರು.ಅ ಸಂಧರ್ಭದಲ್ಲಿ ಕೆಲವು ದುಷ್ಕರ್ಮಿಗಳು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ..
news.ashwasurya. in
ಅಶ್ವಸೂರ್ಯ/ಶಿವಮೊಗ್ಗ: ಧರ್ಮಸ್ಥಳದ ಪಾಂಗಳ ಪ್ರದೇಶದಲ್ಲಿ ಮೂವರು ಯೂಟ್ಯೂಬರ್ ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ವಿನಾಕಾರಣ ಪ್ರತಿಷ್ಠಿತ ಕುಟುಂಬದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಲಾಗಿದೆ.
ಧರ್ಮಸ್ಥಳದ ಪಾಂಗಳ ಪ್ರದೇಶದಲ್ಲಿ ಈ ಘಟನೆ ನೆಡೆದಿದೆ ಎನ್ನಲಾಗಿದೆ. ಇನ್ನು ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ನೇತ್ರಾವತಿ ನದಿ ತೀರದ ಪಾಂಗಳ ಪ್ರದೇಶದಲ್ಲಿ ಯೂಟ್ಯೂಬರ್ ಗಳನ್ನು ನೋಡಿದ ಸ್ಥಳೀಯರು ಹಲ್ಲೆ ಮಾಡಿದ್ದು ಅವರ ಕ್ಯಾಮೆರಾಗಳನ್ನು ನಾಶ ಮಾಡಿದ್ದಾರೆ.
ಇನ್ನೂ ಯೂಟ್ಯೂಬರ್ ಗಳ ಮೇಲಿನ ಹಲ್ಲೆಯನ್ನು ಖಂಡಿಸಿ ನೂರಾರು ಸಂಖ್ಯೆಯಲ್ಲಿ ಯುವಕರು ಸೇರಿದ್ದರಿಂದ ಅವರನ್ನು ಚದುರಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ. ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಸದ್ಯ ಹಲ್ಲೆಗೊಳಗಾದ ಯೂಟ್ಯೂಬರ್ ಒಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಹಲ್ಲೆ ಮಾಡಿದ ದುಷ್ಕರ್ಮಿಗಳು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ ಎಂದು ತಿಳಿದುಬಂದಿದೆ.