
ಉಡುಪಿ: ವಾಟ್ಸಾಪ್ ಆಡಿಯೋ ವೈರಲ್ ಹಿನ್ನೆಲೆಯಲ್ಲಿ ಮನೆಗೆ ನುಗ್ಗಿ ಸ್ನೇಹಿತರಿಂದಲೇ ಯುವಕನೊಬ್ಬನ ಬರ್ಬರ ಹತ್ಯೆ.! ಮೂವರು ಆರೋಪಿಗಳ ಅರೆಸ್ಟ್.!

news.ashwasurya.in
ಅಶ್ವಸೂರ್ಯ/ಉಡುಪಿ : ವಾಟ್ಸಾಪ್ ಆಡಿಯೋ ವೈರಲ್ ಹಿನ್ನೆಲೆಯಲ್ಲಿ ಮನೆಗೆ ನುಗ್ಗಿ ಸ್ನೇಹಿತರಿಂದಲೇ ಯುವಕನೊಬ್ಬನ ಬರ್ಬರ ಹತ್ಯೆಯಾಗಿದೆ.! ಮೂವರು ಆರೋಪಿಗಳ ಬಂಧನ.!
ಆಡಿಯೋವನ್ನು ವೈರಲ್ ಮಾಡಿದ ಕಾರಣಕ್ಕಾಗಿ ಸ್ನೇಹಿತರೇ ಸೇರಿ ಯುವಕನೊಬ್ಬನನ್ನು ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆಗೈದ ಘಟನೆ ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ಸುಬ್ರಮಣ್ಯನಗರದ 9ನೇ ಅಡ್ಡರಸ್ತೆಯಲ್ಲಿ ಆಗಸ್ಟ್ 12ರ ರಾತ್ರಿ ಸುಮಾರು 11:30ರ ಸಮಯದಲ್ಲಿ ಹತ್ಯೆ ನೆಡೆದಿದೆ.!

ಹತ್ಯೆಯಾದ ಯುವಕನನ್ನು ಸ್ಥಳೀಯ ನಿವಾಸಿ ವಿನಯ್ ದೇವಾಡಿಗ, (40) ಎಂದು ಗುರುತಿಸಲಾಗಿದ್ದು ಕೊಲೆ ಆರೋಪಿಗಳಾದ ಬ್ರಹ್ಮಾವರ ಕೊಕ್ಕರ್ಣೆಯ ಗಾಂಧಿನಗರ ನಿವಾಸಿಗಳಾದ ಅಜಿತ್(28), ಅಕ್ಷೇಂದ್ರ (34) ಹಾಗೂ ಕೊಕ್ಕರ್ಣೆ ಬೆನಗಲ್ ನಿವಾಸಿ ಪ್ರದೀಪ್ ಆಚಾರ್ಯ ಎಂಬವರು ಪೊಲೀಸರಿಗೆ ಶರಣಾಗಿದ್ದು ಅವರನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಹತ್ಯೆಗೆ ಕಾರಣವೇನು.?
ವಿನಯ್ ದೇವಾಡಿಗ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ. ಮಂಗಳವಾರ ವಿನಯ್ ದೇವಾಡಿಗ ವೈಯಕ್ತಿಕ ಕೆಲಸದ ನಿಮಿತ್ತ ಉಡುಪಿ ಹೋಗಿ ಸಂಜೆ 6 ಗಂಟೆ ಸುಮಾರಿಗೆ ಮನೆಗೆ ಬಂದಿದ್ದ.ಮನಗೆ ಬಂದವನು ರಾತ್ರಿ ಎಂದಿನಂತೆ ಊಟ ಮುಗಿಸಿ ಮಡದಿ ಮಗುವಿನ ಜನತೆ ಕೋಣೆಯಲ್ಲಿ ಮಲಗಿದ್ದಾನೆ.
ರಾತ್ರಿ 11 ಗಂಟೆ ಸುಮಾರಿಗೆ ಮೂವರು ಆರೋಪಿಗಳು ವಿನಯ್ ದೇವಾಡಿಗನ ಮನೆಗೆ ಬಂದು ಬಾಗಿಲು ತಟ್ಟಿದ್ದಾರೆ.ವಿನಯ್ ಸ್ನೇಹಿತರು ಬಂದಿದ್ದಾರೆಂದು ಮನೆಯವರು ಬಾಗಿಲು ತೆರೆದಿದ್ದಾರೆ. ಒಳಗೆ ನುಗ್ಗಿ ಹಂತಕರು ಮನೆಯ ಎಲ್ಲಾ ಕಡೆಗಳಲ್ಲಿ ವಿನಯ್ ಗಾಗಿ ಹುಡುಕಾಟ ನಡೆಸಿದ್ದರಂತೆ.! ಕೋಣೆಯಲ್ಲಿದ್ದ ವಿನಯ್ ಶಬ್ದದಿಂದ ಎಚ್ಚರಗೊಂಡಿದ್ದು, ಆರೋಪಿಗಳು ವಿನಯ್ ಇದ್ದ ರೂಮಿಗೆ ತೆರಳಿ ವಿನಯ್ ಬಳಿ ಇದ್ದ ಮೊಬೈಲ್ ನ್ನು ಕಿತ್ತುಕೊಳ್ಳಲು ಪ್ರಯತ್ನಸಿದ್ದಾರೆ. ನಂತರ ಅಜಿತ್, ವಿನಯ್ ನನ್ನು ತಪ್ಪಿಸಿಕೊಳ್ಳದಂತೆ ಗಟ್ಟಿಯಾಗಿ ಹಿಡಿದುಕೊಂಡಿದ್ದು, ಆಕ್ಷೇಂದ್ರ ಹಾಗೂ ಪ್ರದೀಪ್ ಮಚ್ಚು ಹಾಗೂ ಚಾಕುವಿನಿಂದ ವಿನಯ್ ದೇವಾಡಿಗನ ತಲೆ ಮತ್ತು ದೇಹವನ್ನು ಮನಬಂದಂತೆ ಕೊಚ್ಚಿ ಕೊಲೆ ಮಾಡಿದ್ದಾರೆಂದು ವರದಿಯಾಗಿದೆ.

ಬಳಿಕ ಆರೋಪಿಗಳು ಸ್ಕೂಟರ್ ನಲ್ಲಿ ಪರಾರಿಯಾದರೂ ಎಂದು ತಿಳಿದುಬಂದಿದೆ ಈ ಕೃತ್ಯಕ್ಕೆ ವಿನಯ್, ಆರೋಪಿ ಆಕ್ಷೇಂದ್ರನಿಗೆ ಜೀವನ್ ಎಂಬಾತನು ಬೈದಿರುವ ಆಡಿಯೋವನ್ನು ಬೇರೆಯವರಿಗೆ ಶೇರ್ ಮಾಡಿ ವೈರಲ್ ಮಾಡಿರುವುದೇ ಹತ್ಯೆಗೆ ಕಾರಣ ಎನ್ನಲಾಗಿದೆ ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ…



