Headlines

ಧರ್ಮಸ್ಥಳ / ಧರ್ಮಸ್ಥಳದಲ್ಲಿ ಅಸ್ಥಿಪಂಜರದ ಶೋಧ ಮುಂದುವರಿಕೆ ನಿರ್ಧಾರ ಎಸ್‌ಐಟಿ ಅಧಿಕಾರಿಗಳಿಗೆ ಬಿಟ್ಟದ್ದು:ಗೃಹ ಸಚಿವ ಡಾ. ಜಿ. ಪರಮೇಶ್ವರ

ಧರ್ಮಸ್ಥಳ / ಧರ್ಮಸ್ಥಳದಲ್ಲಿ ಅಸ್ಥಿಪಂಜರದ ಶೋಧ ಮುಂದುವರಿಕೆ ನಿರ್ಧಾರ ಎಸ್‌ಐಟಿ ಅಧಿಕಾರಿಗಳಿಗೆ ಬಿಟ್ಟದ್ದು:ಗೃಹ ಸಚಿವ ಡಾ. ಜಿ. ಪರಮೇಶ್ವರ

ಅಶ್ವಸೂರ್ಯ/ಶಿವಮೊಗ್ಗ : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹುತೂಹಾಕಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಮುಂದುವರಿಸುವ ಬಗ್ಗೆ ಎಸ್‌ಐಟಿ ಅಧಿಕಾರಿಗಳೇ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ವಿಧಾನಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ 24 ಕೊಲೆ ಮಾಡಿಸಿದ್ದಾರೆ ಎಂಬ ವ್ಯಕ್ತಿಯೋರ್ವರ ಹೇಳಿಕೆ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆಯಲ್ಲಿಂದು ವಿಷಯ ಪ್ರಸ್ತಾಪಿಸಿದ ವಿಪಕ್ಷ ನಾಯಕ ಆರ್. ಅಶೋಕ್, ಯಾರು ಧರ್ಮಸ್ಥಳದ ವಿರುದ್ಧ ನಿರಂತರವಾಗಿ ಅಪಚಾರ ಮಾಡುತ್ತಾ ಇದ್ದಾರೆಯೋ ಅದೇ ವ್ಯಕ್ತಿ, ಮುಖ್ಯಮಂತ್ರಿ ಬಗ್ಗೆಯೂ ಆರೋಪ ಮಾಡಿದ್ದಾರೆ ಎಂದು ಸದನದ ಗಮನ ಸೆಳೆದರು. ಈ ವೇಳೆ ಮಧ್ಯಪ್ರವೇಶಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಈ ಬಗ್ಗೆ ಗೃಹ ಇಲಾಖೆ ದಿಟ್ಟ ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *

Optimized by Optimole
error: Content is protected !!