Headlines

ಮಂಗಳೂರು : ಬಜ್ಪೆ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಚಿನ್ನಾಭರಣ ಕಳವು ಪ್ರಕರಣ: ನಾಲ್ಕು ಸಿಬ್ಬಂದಿ ಸೇರಿ 5 ಮಂದಿ ಸೆರೆ : ಕದ್ದ ಮಾಲು ವಶಕ್ಕೆ.

ಅಶ್ವಸೂರ್ಯ/ಮಂಗಳೂರು : ಬಜ್ಪೆ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರ್ಯೊಲಿಬ್ಯಾಗ್ ನಿಂದ 4.5 ಲಕ್ಷ ಬೆಲೆಬಾಳುವ ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಲ್ದಾಣದ ನಾಲ್ಕು ಸಿಬ್ಬಂದಿ ಸೇರಿ 5 ಮಂದಿಯನ್ನು ಬಂಧಿಸಿದ್ದಾರೆ ಕಳ್ಳತನವಾದ ಬಂಗಾರವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತರನ್ನು ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಲೋಡಿಂಗ್ – ಅನ್ ಲೋಡಿಂಗ್ ಮಾಡುವ ಸಾಟ್ಸ್ ನೌಕರರಾದ ನಿತಿನ್, ಮೂಡುಪೆರಾರದ ನಿವಾಸಿಗಳಾದ ಸದಾನಂದ, ರಾಜೇಶ್, ಬಜ್ಪೆ ನಿವಾಸಿ ಪ್ರವೀಣ್ ಫೆರ್ನಾಂಡಿಸ್ ಮತ್ತು ಚಿನ್ನಾಭರಣ ಪಡೆದುಕೊಂಡು ಚಿನ್ನದ ಗಟ್ಟಿಯಾಗಿಸಿದ್ದ ಬಜ್ಪೆ ಮೂಡುಪೆರಾರ ನಿವಾಸಿ ರವಿರಾಜ್ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಿಆರ್‌ಪಿಎಫ್ ಜವಾನ ಹರಿಕೇಶ್ ಎಂಬವರ ಪತ್ನಿ ರಾಜೇಶ್ವರಿ ಪದ್ಮಶಾಲಿ ಅವರು ಆ.30ರಂದು ಬೆಂಗಳೂರಿನಿಂದ ಮಂಗಳೂರು ಅಂತರರಾಷ್ಟ್ರೀಯ ನಿಲ್ದಾಣಕ್ಕೆ ಬಂದಿದ್ದರು. ಈ‌ ವೇಳೆ ಅವರ‌ ವಸ್ತುಗಳಿದ್ದ ಟ್ರೋಲಿ ಬ್ಯಾಗನ್ನು ತೆರದು 4.5 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಲಾಗಿತ್ತು. ಈ ಸಂಬಂಧ ಅವರು ಬಜ್ಪೆ ಪೊಲೀಸರಿಗೆ ದೂರು ನೀಡಿದ್ದರು‌.
ದೂರು ದಾಖಲಿಸಿಕೊಂಡ ಬಜ್ಪೆ ಪೊಲೀಸ್ ನಿರೀಕ್ಷಕ ಸಂದೀಪ್ ಅವರು ತನಿಖೆ ಆರಂಭಿಸಿ ವಿಮಾನ ನಿಲ್ದಾಣದ ಲೋಡ್ ಮತ್ತು ಅನ್ ಲೋಡ್ ಮಾಡುತ್ತಿದ್ದ ನಾಲ್ಕು ಮಂದಿ ಸಿಬ್ಬಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಚಿನ್ನಾಭರಣ ಕದ್ದು ಬಜ್ಪೆ ಮೂಡುಪೆರಾರ ನಿವಾಸಿ ರವಿರಾಜ್ ಎಂಬಾತನಿಗೆ ಮಾರಿರುವುದಾಗಿ ತಪ್ಪೊಪ್ಪಿಕೊಂಡಿದ್ದರು.

ಆರೋಪಿಗಳ ಹೇಳಿಗೆ ಅನುಸರಿಸಿ ರವಿರಾಜ್ ನನ್ನು ಬಂಧಿಸಿದ ಬಜ್ಪೆ ಪೊಲೀಸರು ಆತನ ಬಳಿಯಿಂದ ಮಹಿಳೆಯ ಚಿನ್ನಾಭರಣವನ್ನು ಕರಗಿಸಿ ಮಾಡಿದ್ದ ಸುಮಾರು 5 ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

9 ವರ್ಷಗಳಿಂದ ಏರ್‌ ಇಂಡಿಯಾ ಸಂಸ್ಥೆಯ ಲೋಡ್ – ಅನ್ ಲೋಡ್ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಆರೋಪಿಗಳು 2025ರ ಜನವರಿಯಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ನಿಂದ ಕಳವು ಮಾದಿದ್ದ 2 ಲಕ್ಷ ರೂ. ಪೊಲೀಸರು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಕರಣ ಸಂಬಂಧ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗಳಿಗೆ ನ್ಯಾಯಾಂಗ ಬಂಧನವಾಗಿದೆ ಎಂದು ಪೊಲೀಸರು ಮೂಲಗಳಿಂದ ತಿಳಿದುಬಂದಿದೆ.

Leave a Reply

Your email address will not be published. Required fields are marked *

Optimized by Optimole
error: Content is protected !!