Headlines

ಶಿಕಾರಿಪುರ | ರಸ್ತೆ ಅಪಘಾತ, ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ.!

ಅಶ್ವಸೂರ್ಯ/ಶಿಕಾರಿಪುರ : ರಸ್ತೆ ಅಪಘಾತ, ವಿವಾಹ ನಿಶ್ಚಿತಾರ್ಥವಾಗಿದ್ದು ಹಸೆಮಣೆ ಏರಬೇಕಿದ್ದ ಜೋಡಿ ಮಸಣದದಾರಿ ಹಿಡಿದಿದ್ದಾರೆ
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಬೈಕ್ ಮತ್ತು ಓಮ್ನಿ ವಾಹನದ ಮಧ್ಯೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಬೈಕ್ ನಲ್ಲಿದ್ದ ಯುವಕ ಮತ್ತು ಯುವತಿ ಮೃತಪಟ್ಟ ಘಟನೆ ಅಂಬಾರಗೊಪ್ಪ ಕ್ರಾಸ್ ಸಮೀಪ ನಡೆದಿರುವುದು ವರದಿಯಾಗಿದೆ.
ಮೃತರನ್ನು ಶಿಕಾರಿಪುರ ತಾಲೂಕಿನ ಮಟ್ಟಿಕೋಟೆ ಗ್ರಾಮದ ರೇಖಾ(20) ಮತ್ತು ತೊಗರ್ಸಿ ಸಮೀಪದ ಗಂಗೊಳ್ಳಿ ಗ್ರಾಮದ ನಿವಾಸಿ ಬಸವನಗೌಡ ದ್ಯಾಮನಗೌಡ(25) ಎಂದು ಗುರುತಿಸಲಾಗಿದೆ. ಇವರಿಬ್ಬಗೆ ಡಿಸೆಂಬರ್ ನಲ್ಲಿ ವಿವಾಹ ನಿಗದಿಯಾಗಿತ್ತು.
ಪಟ್ಟಣದಲ್ಲಿರುವ ಗಾರ್ಮೆಂಟ್ಸ್ ಕೆಲಸಕ್ಕೆ ತೆರಳುವವರನ್ನು ಶಿರಾಳಕೊಪ್ಪ ಕಡೆಯಿಂದ ಕರೆದೊಯ್ಯುತ್ತಿದ್ದ ಓಮ್ನಿ ಮತ್ತು ಬಸವನಗೌಡ ಮತ್ತು ರೇಖಾ ಸಂಚರಿಸುತ್ತಿದ್ದ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ.
ಢಿಕ್ಕಿಯಾದ ರಭಸಕ್ಕೆ ಬೈಕ್ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿಬಿದ್ದಿದೆ. ಓಮ್ನಿಯ ಮುಂಭಾಗ ತೀವ್ರ ಹಾನಿಗೊಳಗಾಗಿದೆ.

ರೇಖಾ, ಬಸವನಗೌಡ ಇಬ್ಬರಿಗೆ ಕಳೆದ ತಿಂಗಳಷ್ಟೆ ಮದುವೆ ನಿಶ್ಚಿತಾರ್ಥ ನಡೆದಿತ್ತು. ಮಳೆ ಕಾರಣಕ್ಕೆ ಮದುವೆ ಮುಂದಕ್ಕೆ ಹಾಕಿದ್ದು ಡಿಸೆಂಬರ್ ನಲ್ಲಿ ಮದುವೆಗೆ ದಿನ ನಿಗದಿಯಾಗಿತ್ತು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

Optimized by Optimole
error: Content is protected !!