ಹದಿನೇಳು ವರ್ಷದ ಬಾಲಕಿ ಸಹಿತ 8 ಮಹಿಳೆಯರ ಮೇಲೆ ಅತ್ಯಾಚಾರ ಆರೋಪ.? ಯೋಗ ಗುರು ನಿರಂಜನ ಮೂರ್ತಿ ಬಂಧನ, ಇವನು ಯೋಗ ಗುರುನಾ? ಬೋಗ ಗುರುನಾ?
news.ashwasurya.in
ಅಶ್ವಸೂರ್ಯ/ಶಿವಮೊಗ್ಗ : ಹದಿನೇಳು ವರ್ಷದ ಬಾಲಕಿ ಸಹಿತ 8 ಮಹಿಳೆಯರ ಮೇಲೆ ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಯೋಗ ಗುರು ನಿರಂಜನಾ ಮೂರ್ತಿ ಬಂಧನವಾಗಿದೆ.
ಬಾಲಕಿ, ಯುವತಿಯರು ಸೇರಿದಂತೆ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪದಡಿಯಲ್ಲಿ ಯೋಗ ಗುರುವೊಬ್ಬನನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದ್ದು

ಯೋಗ ಗುರು ನಿರಂಜನಾ ಮೂರ್ತಿ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತನ ಯೋಗ ಸೆಂಟರ್ ಗೆ ಬರುತ್ತಿದ್ದ ಹದಿನೇಳು ವರ್ಷದ ಬಾಲಕಿಯೊಬ್ಬಳು ನೀಡಿದ ದೂರಿನನ್ವಯ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಘಟನೆ ಹಿನ್ನೆಲೆ :
ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರ ನಡೆಸುತ್ತಿದ್ದ ಯೋಗ ಗುರು ನಿರಂಜನಾ ಮೂರ್ತಿ ಎಂಬಾತ ತನ್ನ ಯೋಗ ಸೆಂಟರ್ ಬರುತ್ತಿದ್ದ ಮಹಿಳೆಯರೊಂದಿಗೆ “ನಿಮಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗದಲ್ಲಿ ಹೆಸರು ಬರುವಂತೆ ಮಾಡುತ್ತೇನೆ. ಅದರಿಂದ ನಿಮಗೆ ಸರ್ಕಾರಿ ಕೆಲಸ ಸಿಗಬಹುದು ಎಂದು ನಂಬಿಸಿ, ಸುಮಾರು ಏಳೆಂಟು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ.

ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.ತನಿಖೆ ವೇಳೆ ಅತ್ಯಾಚಾರ ಎಸಗಿರುವುದು ಬಯಲಾಗಿದೆ.
ಆರೋಪಿಯು ಇನ್ನೂ ಹಲವು ಮುಗ್ದ ಬಾಲಕಿಯರು ಮತ್ತು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ಅನುಮಾನವಿದೆ ಎನ್ನಲಾಗುತ್ತಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
ಈ ಯೋಗ ಗುರುವಿನಿಂದ ಯಾರಾದರೂ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರಕ್ಕೆ ಒಳಗಾಗಿದ್ದರೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ. ದೂರುದಾರರ ಹೆಸರನ್ನು ಗೌಪ್ಯವಾಗಿಡುವುದಾಗಿ ಪೊಲೀಸರು ತಿಳಿಸಿದ್ದಾರೆ.


